ನವದೆಹಲಿ:ದೇಶದಲ್ಲಿ ಕೆಲವು ವರ್ಷಗಳಿಂದ ಅತ್ಯಾಚಾರ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಆಗಿದ್ದು, ಅದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸರ್ಕಾರದ ಒಂದು ಪ್ರಮುಖ ಕ್ರಮವೇ ಕಾರಣ ಎನ್ನಲಾಗಿದೆ.
ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ ಇಂದು ದೆಹಲಿಯ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಇಂಥದ್ದೊಂದು ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರ 8 ವರ್ಷಗಳನ್ನು ಪೂರೈಸಿದ್ದು, ಈ ಅವಧಿಯಲ್ಲಿ ಕೈಗೊಂಡ ಕ್ರಮ, ಸಾಧನೆಗಳ ಕುರಿತು ಮಾತನಾಡುತ್ತ ಅವರು ಈ ವಿಷಯ ತಿಳಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬಾಲಕಿಯರ ಶಾಲೆಗಳಲ್ಲಿ ಭೇಟಿ ನೀಡಿದಾಗ, ಅಲ್ಲಿ ಶಾಲೆಯನ್ನು ತ್ಯಜಿಸಿದ ವಿದ್ಯಾರ್ಥಿನಿಯರ ಸಂಖ್ಯೆ ವಿದ್ಯಾರ್ಥಿಗಳಿಗಿಂತಲೂ ಹೆಚ್ಚಿರುವುದನ್ನು ಗಮನಿಸಿದ್ದರು. ಇದಕ್ಕೆ ಪ್ರಮುಖ ಕಾರಣ ಏನು ಎಂಬುದನ್ನು ಅವಲೋಕಿಸಿದಾಗ ಶಾಲೆಗಳಲ್ಲಿ ಟಾಯ್ಲೆಟ್​ಗಳು ಇಲ್ಲದಿರುವುದೇ ಕಾರಣ ಎಂಬುದು ತಿಳಿದು ಬಂದಿತ್ತು ಎಂದು ಸಂಬಿತ್ ಪಾತ್ರ ಹೇಳಿದರು.
ಪ್ರಧಾನಮಂತ್ರಿ ಅವರು ಕೆಂಪುಕೋಟೆಯಲ್ಲಿ ಶೌಚಗೃಹಗಳ ಬಗ್ಗೆ ಮಾತನಾಡುತ್ತಾರೆ ಎಂಬುದನ್ನು ಯಾರೂ ಊಹಿಸಿರಲಿಲ್ಲ. ಇನ್ನು ಜಗತ್ತಿನಲ್ಲಿಯೇ ಶೌಚಗೃಹಗಳ ಕುರಿತು ಮಾತನಾಡಿದ ಪ್ರಪ್ರಥಮ ಪ್ರಧಾನಿ ಎಂದರೆ ಮೋದಿ. ಪ್ರಧಾನಿಯವರು ಶೌಚಗೃಹಗಳಿಗೆ ಒತ್ತುನೀಡಿದ್ದರಿಂದಲೇ ಅವರ ಆಡಳಿತದ ಅವಧಿಯಲ್ಲಿ ದೇಶದ ಹಲವು ರಾಜ್ಯಗಳಲ್ಲಿನ ಅತ್ಯಾಚಾರ ಪ್ರಕರಣಗಳ ಸಂಖ್ಯೆ ತಗ್ಗಿದೆ ಎಂದು ಸಂಬಿತ್ ಪಾತ್ರ ತಿಳಿಸಿದ್ದಾರೆ.
ಹಿಂದೂ ಸಂಘಟನೆ ಕಾರ್ಯಕರ್ತನ ಕೊಲೆಗೆ ಪ್ರತೀಕಾರ; ಸೇಡಿಗಾಗಿ ಹಾಡಹಗಲೇ ಕೊಚ್ಚಿ ಕೊಂದರು..
ಹೆಂಡತಿಯ ಅಜ್ಜಿಯ ಮೇಲೇ ಅತ್ಯಾಚಾರ ಮಾಡಿದ 60 ವರ್ಷದ ಕಾಮುಕ; ಆರೋಪಿಯ ಬಂಧನ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × three =
Remember me
