ಬೆಂಗಳೂರು:ಕರ್ನಾಟಕ ಮೂಲದ ನ್ಯಾಯಮೂರ್ತಿ ರವಿ ಮಳಿಮಠ ಅವರನ್ನು ಉತ್ತರಾಖಂಡ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ. ರಾಷ್ಟ್ರಪತಿಗಳ ಆದೇಶಾನುಸಾರ ಕಾನೂನು ಸಚಿವಾಲಯ ಆದೇಶ ಹೊರಡಿಸಿದ್ದು, ಜುಲೈ 28ರಂದು ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ಹಾಲಿ ಮುಖ್ಯ ನ್ಯಾಯಮೂರ್ತಿ ರಮೇಶ್ ರಂಗನಾಥನ್ ಜು.28ರಂದು ನಿವೃತ್ತಿ ಹೊಂದಲಿರುವುದರಿಂದ ಎರಡನೇ ಹಿರಿಯ ನ್ಯಾಯಮೂರ್ತಿ ಆಗಿರುವ ರವಿ ಮಳಿಮಠ್ ಅವರಿಗೆ ಸಿಜೆ ಹುದ್ದೆಗೆ ಪದೋನ್ನತಿ ನೀಡಲಾಗಿದೆ.
ಕರ್ನಾಟಕ ಹೈಕೋರ್ಟ್​ನಲ್ಲಿ ಹಿರಿಯ ನ್ಯಾಯಮೂರ್ತಿಯಾಗಿದ್ದ ರವಿ ಮಳಿಮಠ ಅವರನ್ನು ಉತ್ತರಾಖಂಡ ಹೈಕೋರ್ಟ್ ಗೆ ವರ್ಗಾವಣೆ ಮಾಡಲು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಕೊಲಿಜಿಯಂ ಫೆ.12ರಂದು ಕೇಂದ್ರಕ್ಕೆ ಶಿಫಾರಸು ಮಾಡಿತ್ತು. ರಾಜ್ಯ ಹೈಕೋರ್ಟ್​ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ದಿ.ವಿ.ಎಸ್.ಮಳಿಮಠ ಅವರ ಪುತ್ರ ರವಿ ಮಳಿಮಠ, 1987ರಲ್ಲಿ ವಕೀಲರಾಗಿ ವೃತ್ತಿ ಆರಂಭಿಸಿದ್ದರು. 2008ರಲ್ಲಿ ಕರ್ನಾಟಕ ಹೈಕೋರ್ಟ್​ನ ಹೆಚ್ಚುವರಿ ನ್ಯಾಯಮೂರ್ತಿ, 2010ರಲ್ಲಿ ಪೂರ್ಣಾವಧಿ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. 2020ರ ಮಾರ್ಚ್​ನಿಂದ ಉತ್ತರಾಖಂಡ ಹೈಕೋರ್ಟ್​ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಕರೊನಾ ಹರಡಿಸುತ್ತಿದೆ ಎಂದು ಲಕ್ಷಾಂತರ ಮಿಂಕ್‌ಗಳ ಮಾರಣಹೋಮ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + nineteen =
Remember me
