ಅಹಮದಬಾದ್​:ಜೂನ್​ 29ರಂದು ಮುಕ್ತಾಯಗೊಂಡ ಟಿ20 ವಿಶ್ವಕಪ್​ನಲ್ಲಿ ಎರಡನೇ ಬಾರಿಗೆ ಭಾರತಕ್ಕೆ ಕಪ್​ ಗೆಲ್ಲಿಸಿಕೊಟ್ಟು ಚುಟಕು ಮಾದರಿಗೆ ನಿವೃತ್ತಿ ಘೋಷಿಸಿದ್ದ ಸ್ಟಾರ್​ ಆಲ್ರೌಂಡರ್​ ರವೀಂದ್ರ ಜಡೇಜಾ ಇದೀಗ ರಾಜಕೀಯದಲ್ಲಿ ಹೊಸ ಇನ್ನಿಂಗ್ಸ್​ ಆರಂಭಿಸಲು ಸಜ್ಜಾಗಿದ್ದಾರೆ. ಬಿಜೆಪಿ ಸೇರ್ಪಡೆಯಾಗುವ ಮೂಲಕ ಅವರು ರಾಜಕೀಯದಲ್ಲಿ ಹೊಸ ಇನ್ನಿಂಗ್ಸ್​ ಆರಂಭಿಸಿದ್ದಾರೆ.
ವಾಸ್ತವವಾಗಿ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಈಗಾಗಲೇ ಬಿಜೆಪಿಯಲ್ಲಿದ್ದು, ಅವರು ಗುಜರಾತ್‌ನ ಜಾಮ್‌ನಗರ ಉತ್ತರ ಕ್ಷೇತ್ರದ ಶಾಸಕರೂ ಆಗಿದ್ದಾರೆ. ಇದೀಗ ಪತಿ ರವೀಂದ್ರ ಜಡೇಜಾ ಬಿಜೆಪಿಯ ಸದಸ್ಯತ್ವ ಸ್ವೀಕರಿಸಿರುವ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುವ ಮೂಲಕ ರಿವಾಬಾ ಪತಿ ರಾಜಕೀಯ ಪ್ರವೇಶಿಸಿರುವ ಕುರಿತು ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಕೇಂದ್ರದ ಆಡಳಿತಾರೂಢ ಪಕ್ಷ ಬಿಜೆಪಿ  ದೇಶಾದ್ಯಂತ ಸದಸ್ಯತ್ವ ಅಭಿಯಾನವನ್ನು ನಡೆಸುತ್ತಿದೆ. ಈ ಅಭಿಯಾನದ ಅಡಿಯಲ್ಲಿ ಇದೀಗ ಜಡೇಜಾ ಕೂಡ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಇದಲ್ಲದೆ ಅನೇಕ ಖ್ಯಾತನಾಮರು ಸದಸ್ಯತ್ವ ಅಭಿಯಾನದಲ್ಲಿ ಭಾಗಿಯಾಗುತ್ತಿದ್ದು, ಬಿಜೆಪಿ ಸೇರ್ಪಡೆಯಾಗುವ ಮೂಲಕ ಪಕ್ಷವನ್ನು ಬೆಂಬಲಿಸುತ್ತಿದ್ದಾರೆ.
🪷#SadasyataAbhiyaan2024pic.twitter.com/he0QhsimNK
ಇದನ್ನೂ ಓದಿ:ವಿಶ್ವಕಪ್​ ಗೆದ್ದ ಭಾರತ, ನಿವೃತ್ತಿ ಘೋಷಿಸಿದ ಕೊಹ್ಲಿ-ರೋಹಿತ್​ಗೆ ಅಭಿನಂದನೆ; ಟ್ರೋಲ್​ ಆಗುತ್ತಿದೆ ಪಾಕ್​ ಮಾಜಿ ನಾಯಕಿಯ ಟ್ವೀಟ್​
ಈ ಕುರಿತು ಮಾತನಾಡಿರುವ ರಿವಾಬಾ, ನಾನು ನನ್ನ ಮನೆಯಿಂದಲೇ ಸದಸ್ಯತ್ವ ಅಭಿಯಾನವನ್ನು ಆರಂಭಿಸಿದ್ದೇನೆ. ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಸೇರ್ಪಡೆಯಾಗಿ ಎಂದು ಕರೆ ನೀಡಿದ್ದಾರೆ.
ಪ್ರಸ್ತುತ ರಾಜಕೀಯ ಲೋಕಕ್ಕೆ ಕಾಲಿಟ್ಟಿರುವ ರವೀಂದ್ರ ಜಡೇಜಾ ಇದೀಗ ಈ ತಿಂಗಳಿನಿಂದ ಪ್ರಾರಂಭವಾಗುವ ಟೆಸ್ಟ್ ಸರಣಿಯಿಂದ ಭಾರತ ತಂಡಕ್ಕೆ ಮರಳಲಿದ್ದಾರೆ. ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡು ಪಂದ್ಯಗಳ ಟೆಸ್ಟ್‌ ಸರಣಿಯು ಸೆಪ್ಟೆಂಬರ್ 19 ರಿಂದ ಪ್ರಾರಂಭವಾಗಲಿದ್ದು, ಇದರಲ್ಲಿ ಜಡೇಜಾ ತಂಡದ ಭಾಗವಾಗಲಿದ್ದಾರೆ. ಈ ಸರಣಿ ಮಾತ್ರವಲ್ಲ, ಆ ಬಳಿಕ ನಡೆಯಲಿರುವ ನ್ಯೂಜಿಲೆಂಡ್ ಸರಣಿಯಲ್ಲೂ ಅವರ ತಂಡದ ಭಾಗವಾಗಿರಲಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × one =
Remember me
