ದೆಹಲಿ:ಗೃಹ ಸಾಲ ಪಡೆದವರಿಗೆ ಆರ್​ಬಿಐ ಸಂತಸ ಸುದ್ದಿಯೊಂದನ್ನು ನೀಡಿದೆ. ಆರ್‌ಬಿಐನ ಹಣಕಾಸು ನೀತಿ ಸಮಿತಿಯ ಸಭೆ ಇಂದು ಕೊನೆಗೊಂಡಿದ್ದು, ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್‌ ಈ ಸಭೆಯಲ್ಲಿ ಕೈಗೊಂಡ ನಿರ್ಧಾರಗಳ ಬಗ್ಗೆ ಮಾಹಿತಿ ನೀಡಿದರು.
ಇದನ್ನೂ ಓದಿ:ಸ್ನೇಹಿತನ ಜತೆ ಕುಡಿದ ಮತ್ತಿನಲ್ಲಿದ್ದ ಪ್ರಿಯಕರನಿಂದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ
ಈ ಕುರಿತು ಮಾತನಾಡಿದ ದಾಸ್​​, ಹಣಕಾಸು ನೀತಿ ಸಮಿತಿಯು ರೆಪೊ ದರವನ್ನು ಯಥಾಸ್ಥಿತಿಯಲ್ಲಿಡಲು ಸಭೆಯಲ್ಲಿ ಸರ್ವಾನುಮತದಿಂದ ನಿರ್ಧರಿಸಿದ್ದು, ಸತತ ಎರಡನೇ ಬಾರಿಗೆ ನೀತಿ ದರಗಳಲ್ಲಿ ಅಂದರೆ ರೆಪೊ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಎಂದು ಹೇಳಿದರು.
ಆರ್‌ಬಿಐನ ದ್ವೈಮಾಸಿಕ ಹಣಕಾಸು ನೀತಿಯನ್ನು ಪ್ರಕಟಿಸಿದ ಅವರು, ಈ ಹಿಂದೆ ತೆಗೆದುಕೊಂಡಿದ್ದ ವಿತ್ತೀಯ ನೀತಿ ಕ್ರಮಗಳು ನಿರೀಕ್ಷಿತ ಫಲಿತಾಂಶಗಳನ್ನು ನೀಡುತ್ತಿದೆ. ಹಾಗಾಗಿ ಯಾವುದೇ ಬದಲಾವಣೆಗೆ ಸಮಿತಿಯು ನಿರ್ಧರಿಸಿಲ್ಲ ಎಂದು ಹೇಳಿದರು.
ಆರ್‌ಬಿಐ ರೆಪೊ ದರವನ್ನು ಬದಲಾಯಿಸದೇ ಶೇಕಡಾ 6.5ಕ್ಕೆ ಇರಿಸಿದೆ. ಬ್ಯಾಂಕ್‌ ಬಡ್ಡಿ ದರ ಹಾಗೂ ರೆಪೊ ದರವು ಒಂದಕ್ಕೊಂದು ಸಂಬಂಧವನ್ನು ಹೊಂದಿವೆ. ರೆಪೊ ದರ ಹೆಚ್ಚಾದರೆ ಅದಕ್ಕೆ ತಕ್ಕಂತೆ ಬಡ್ಡಿ ದರವೂ ಹೆಚ್ಚಾಗುತ್ತದೆ ಎನ್ನಲಾಗಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + 6 =
Remember me
