ಬೆಂಗಳೂರು:ಸತತ ವೈಫಲ್ಯಗಳಿಂದ ಜರ್ಜರಿತವಾಗಿದ್ದ ಆರ್​ಸಿಬಿ ಮಹಿಳಾ ತಂಡಕ್ಕೆ ಹೊಸ ಮುಖ್ಯ ಕೋಚ್ ನೇಮಕ ಮಾಡಲಾಗಿದೆ. ಇದರ ಜತೆಗೆ ಆರ್​ಸಿಬಿ ಆಡಳಿತ ತನ್ನ ತಂಡದ ಆಟಗಾರರು ಮತ್ತು ಸಹಾಯಕ ಸಿಬ್ಬಂದಿಯಲ್ಲಿ ಬದಲಾವಣೆ ಮಾಡಿದೆ.
ಮುಂದಿನ ಡಬ್ಯ್ಲುಪಿಎಲ್ ಆರಂಭಕ್ಕೂ ಮುನ್ನ ಆಸ್ಟ್ರೇಲಿಯಾದ ಮಾಜಿ ಆಟಗಾರ ಮತ್ತು ಕೋಚ್ ಲ್ಯೂಕ್ ವಿಲಿಯಮ್ಸ್ ಅವರನ್ನು ಮಹಿಳಾ ತಂಡಕ್ಕೆ ಕೊಚ್​ ಆಗಿ ಸೇರಿಸಿಕೊಂಡಿದೆ.
2024 ರ ಐಪಿಎಲ್ ಗೆ ಸಿದ್ಧತೆ ಮಾಡಿಕೊಳ್ಳುವ ಸಲುವಾಗಿ ಪುರುಷರ ತಂಡದಲ್ಲಿ ಸಾಕಷ್ಟು ಬದಲಾವಣೆ ಮಾಡಿರುವ ಆರ್​ಸಿಬಿ ಇದೀಗ ಮಹಿಳಾ ತಂಡದಲ್ಲೂ ಪ್ರಮುಖ ಬದಲಾವಣೆ ಮಾಡಿದೆ.
ಕೆಲವು ದಿನಗಳ ಹಿಂದೆ ಪುರುಷರ ತಂಡದಲ್ಲಿ ಮುಖ್ಯ ಕೋಚ್ ಹಾಗೂ ನಿದೇಶಕರನ್ನಾಗಿ ಆಂಡಿ ಫ್ಲವರ್ ಮತ್ತು ಮೊ ಬೊಬಾಟ್ ಅವರನ್ನು ನೇಮಿಸಿಕೊಂಡಿತ್ತು. ಇದೀಗ ಮಹಿಳಾ ತಂಡದ ಮುಖ್ಯ ಕೋಚ್​ ಆಗಿದ್ದ ಬೆನ್ ಸಾಯರ್ ರನ್ನು ಬದಲಿಸಿ ಮಹಿಳಾ ಬಿಗ್ ಬ್ಯಾಷ್ ಲೀಗ್ ವಿಜೇತ ಕೋಚ್ ಲ್ಯೂಕ್ ವಿಲಿಯಮ್ಸ್ ರನ್ನು ಆ ಸ್ಥಾನಕ್ಕೆ ನೇಮಕ ಮಾಡಿದೆ.
ಬ್ಯಾಡ್​ ಲಕ್​ ಟೀಂ:ಐಪಿಎಲ್‌ನ ದುರದೃಷ್ಟಕರ ತಂಡಗಳಲ್ಲಿ ಆರ್​ಸಿಬಿ ತಂಡ ಮೊದಲ ಸ್ಥಾನದಲ್ಲಿ ನಿಲ್ಲುತ್ತದೆ. ತಂಡದಲ್ಲಿ ಸ್ಟಾರ್ ಆಟಗಾರರಿದ್ದರೂ ತಂಡವು ಒಮ್ಮೆಯೂ ಐಪಿಎಲ್​ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿಲ್ಲ. ಇನ್ನು ಕಳೆದ ವರ್ಷದಿಂದ ಆರಂಭವಾಗಿರುವ ಮಹಿಳಾ ಪ್ರಿಮಿಯರ್ ಲೀಗ್​ನಲ್ಲೂ ಸಹ ಆರ್​ಸಿಬಿ ಒಡೆತನದ ತಂಡದ ಪ್ರದರ್ಶನ ತೀರಾ ಕಳಪೆಯಾಗಿತ್ತು. ಪುರುಷರ ತಂಡದಂತೆ ಮಹಿಳಾ ತಂಡದಲ್ಲೂ ಸ್ಟಾರ್ ಆಟಗಾರ್ತಿಯರ ದಂಡೇ ಇದ್ದರೂ ಆ ತಂಡಕ್ಕೆ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಿರಲಿಲ್ಲ.
ಸಾಧಕ ವಿಲಿಯಮ್ಸ್​:ಕೋಚ್ ಆಗಿ ಲ್ಯೂಕ್ ವಿಲಿಯಮ್ಸ್ ಸಾಧನೆ ಅದ್ಭುತವಾಗಿತ್ತು. ಅವರು ಮಹಿಳಾ ಬಿಗ್ ಬ್ಯಾಷ್ ಲೀಗ್‌ನಲ್ಲಿ ಅಡಿಲೇಡ್ ಸ್ಟ್ರೈಕರ್ಸ್ ತಂಡಕ್ಕೆ ತರಬೇತುದಾರರಾಗಿದ್ದು, ಅವರ ಮಾರ್ಗದರ್ಶನದಲ್ಲಿ ತಂಡವು 2022-23 ಆವೃತ್ತಿಯಲ್ಲಿ ಟ್ರೋಫಿ ಗೆದ್ದುಕೊಂಡಿತ್ತು. ಅಷ್ಟೇ ಅಲ್ಲ, ಅಲಿಡಾಡ್ ತಂಡವು ಎರಡು ಬಾರಿ ರನ್ನರ್ ಅಪ್ ಆಗಿತ್ತು. ಇವರು ದಿ ಹಂಡ್ರೆಡ್‌ನಲ್ಲಿ ಸದರ್ನ್ ಬ್ರೇವ್‌ ತಂಡದಲ್ಲಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.
ಇದನ್ನೂ ಓದಿ
ಭಾರೀ ಬದಲಾವಣೆ:ತಂಡದ ಕಳಪೆ ಪ್ರದರ್ಶನ ಹಿನ್ನೆಲೆಯಲ್ಲಿ ಆರ್​ಸಿಬಿ ಆಡಳಿತವು ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರ್, ನಿರ್ದೇಶಕ ಮೈಕ್ ಹೆಸ್ಸನ್ ರನ್ನು ವಜಾಮಾಡಿ ಅವರ ಸ್ಥಾನಕ್ಕೆ ಕ್ರಮವಾಗಿ ಆಂಡಿ ಫ್ಲವರ್ ಹಾಗೂ ಮೊ ಬೊಬಾಟ್ ರನ್ನು ನೇಮಿಸಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 17 =
Remember me
