ನವದೆಹಲಿ:ಅಯೋಧ್ಯೆಯ ವಿವಾದಿತ ಬಾಬ್ರಿ ಕಟ್ಟಡ ಧ್ವಂಸ ಪ್ರಕರಣದ ತೀರ್ಪು ಬುಧವಾರ (ಸೆ. 30) ಪ್ರಕಟವಾಗಲಿದೆ. 28 ವರ್ಷಗಳ ಬಳಿಕ ಲಖನೌದ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಲಿದೆ.
ಬಿಜೆಪಿಯ ಹಿರಿಯ ನಾಯಕರಾದ ಎಲ್.ಕೆ. ಆಡ್ವಾಣಿ, ಮುರಳಿ ಮನೋಹರ ಜೋಷಿ, ಉಮಾ ಭಾರತಿ, ಕಲ್ಯಾಣ್ ಸಿಂಗ್ ಸೇರಿ ಒಟ್ಟು 32 ಮಂದಿ ಈ ಪ್ರಕರಣದಲ್ಲಿ ಆರೋಪಿಗಳಾಗಿದ್ದು, ತೀರ್ಪಿನ ದಿನ ಅವರೆಲ್ಲ ಕೋರ್ಟ್‌ನಲ್ಲಿ ಹಾಜರಿರುವಂತೆ ನ್ಯಾಯಾಧೀಶರ ಸೂಚನೆ ಇದೆ. ಆದರೆ ಉಮಾಭಾರತಿ ಮತ್ತು ಕಲ್ಯಾಣ್ ಸಿಂಗ್‌ಗೆ ಇತ್ತೀಚೆಗೆ ಕರೊನಾ ಸೋಂಕು ತಗುಲಿದ್ದು, ಸದ್ಯ ಅವರಿಬ್ಬರೂ ಬೇರೆ ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕರೊನಾ ತಗುಲಿರುವುದರಿಂದ ವೈದ್ಯರು ಅವರ ಪ್ರಯಾಣಕ್ಕೆ ಅನುಮತಿ ನೀಡುವ ಸಾಧ್ಯತೆ ಇಲ್ಲ.
ಇದನ್ನೂ ಓದಿ:ಶರ್ಮಾ ಐಪಿಎಸ್ ನಮ್ ಮನೆಗೆ ಕಾಫಿ ಕುಡಿಯೋಕೆ ಬಂದ್ರೆ ಈ ಅವಾಂತರ ನಿರೀಕ್ಷಿಸಿರಲಿಲ್ಲ : ಟಿವಿ ನಿರೂಪಕಿ
ಈ ಮಧ್ಯೆ ಉಮಾಭಾರತಿ ತಮ್ಮ ನಿಲುವನ್ನು ಮತ್ತೊಮ್ಮೆ ಸ್ಪಷ್ಟಪಡಿಸಿದ್ದು, ‘‘ಯಾವುದೇ ತೀರ್ಪು ಬಂದರೂ ಪರವಾಗಿಲ್ಲ. ನನ್ನನ್ನು ಗಲ್ಲಿಗೆ ಹಾಕಿದರೂ, ಅದನ್ನು ದೇವರ ಆಶೀರ್ವಾದ ಅಂತ ತಿಳಿದುಕೊಳ್ಳುತ್ತೇನೆ, ಜಾಮೀನು ಅರ್ಜಿಯನ್ನು ಮಾತ್ರ ಸಲ್ಲಿಸುವುದಿಲ್ಲ. ಒಂದು ವೇಳೆ ಜಾಮೀನಿಗೆ ಅರ್ಜಿ ಸಲ್ಲಿಸಿದರೆ ನಾನು ಇದುವರೆಗೆ ರಾಮಜನ್ಮಭೂಮಿಯ ವಿಷಯದಲ್ಲಿ ಮಾಡಿರುವ ಹೋರಾಟದ ಮಹತ್ವವೇ ಕಡಿಮೆಯಾಗುತ್ತದೆ’’ ಎಂದು ಖಡಕ್ಕಾಗಿ ಹೇಳಿದ್ದಾರೆ.
ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ನಾಳೆ ಐತಿಹಾಸಿಕ ತೀರ್ಪು- ಎಲ್ಲೆಡೆ ಕಟ್ಟೆಚ್ಚರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × four =
Remember me
