ಬಿಲಾಸಪುರ:ಸಂಬಂಧಿತ ವ್ಯಕ್ತಿಯ ಅನುಮತಿಯಿಲ್ಲದೆ ದೂರವಾಣಿ ಸಂಭಾಷಣೆ ರೆಕಾರ್ಡ್ ಮಾಡá-ವುದು ಸಂವಿಧಾನದ ಪರಿಚ್ಛೇದ 21ರ ಅಡಿಯಲ್ಲಿ ಖಾಸಗಿತನದ ಹಕ್ಕಿನ ಉಲ್ಲಂಘನೆ ಎಂದು ಛತ್ತೀಸ್​ಗಢ ಹೈಕೋರ್ಟ್ ತೀರ್ಪು ನೀಡಿದೆ.
ಪ್ರಕರಣದ ವಾದ ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ರಾಕೇಶ್ ಮೋಹನ್ ಪಾಂಡೆ ಅವರಿದ್ದ ಪೀಠವು 2021ರ ಅಕ್ಟೋಬರ್ 21ರಂದು ಮಹಾಸಮುಂಡ್ ಕೌಟುಂಬಿಕ ನ್ಯಾಯಾಲಯ ನೀಡಿದ್ದ ಆದೇಶ ರದ್ದುಗೊಳಿಸುವ ಸಂದರ್ಭದಲ್ಲಿ ಈ ಆದೇಶ ನೀಡಿದೆ.
ವಿವರ: ಛತ್ತೀಸ್​ಗಢ ಹೈಕೋರ್ಟ್ ಜೀವನಾಂಶಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆ ನಡೆಸá-ತ್ತಿತ್ತು. ಕೌಟುಂಬಿಕ ನ್ಯಾಯಾಲಯವು ಪತಿ- ಪತ್ನಿ ಜತೆಗಿನ ಸಂಭಾಷಣೆಯ ರೆಕಾರ್ಡ್ ಅನ್ನು ಸಾಕ್ಷ್ಯವಾಗಿ ಹಾಜರುಪಡಿಸಲು ಅನುಮತಿ ನೀಡಿತ್ತು. ಪತ್ನಿ ತನ್ನ ಪತಿಯಿಂದ ಜೀವನಾಂಶ ಭತ್ಯೆಗಾಗಿ 2019ರಲ್ಲಿ ಮಹಾಸಮುಂಡ್​ನ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು ಮತ್ತು ಅದಕ್ಕೆ ಸಂಬಂಧಿಸಿದ ಎಲ್ಲಾ ಪುರಾವೆಯನ್ನು ನ್ಯಾಯಾಲಯದಲ್ಲಿ ಸಲ್ಲಿಸಿದ್ದರು. ಪತ್ನಿ ಮೇಲಿನ ಅನುಮಾನದಿಂದ ಪತಿ ಜೀವನಾಂಶ ನೀಡಲು ನಿರಾಕರಿಸಿದ್ದರು. ಅರ್ಜಿದಾರರ ಸಂಭಾಷಣೆಯನ್ನು ತಮ್ಮ ಮೊಬೈಲ್​ಫೋನ್​ನಲ್ಲಿ ರೆಕಾರ್ಡ್ ಮಾಡಲಾಗಿದೆ. ರೇಕಾರ್ಡ್ ಆಧಾರದ ಮೇಲೆ ಪತ್ನಿಯನ್ನು ನ್ಯಾಯಾಲಯದ ಮುಂದೆ ಕ್ರಾಸ್ ಎಕ್ಸಾಮಿನ್ ಮಾಡಬೇಕು ಎಂದು ಪತಿ ಅರ್ಜಿ ಸಲ್ಲಿಸಿದ್ದರು. ಪತಿ ಸಲ್ಲಿಸಿದ್ದ ಅರ್ಜಿ ಸ್ವೀಕರಿಸಿದ ಕೌಟುಂಬಿಕ ನ್ಯಾಯಾಲಯ ಅನುಮತಿ ನೀಡಿತ್ತು.
ಹೈಕೋರ್ಟ್ ಮೊರೆ ಹೋದ ಮಹಿಳೆ: ಕೌಟುಂಬಿಕ ನ್ಯಾಯಾಲಯದ ಆದೇಶದ ನಂತರ ಮಹಿಳೆಯು 2021ರ ಅಕ್ಟೋಬರ್ 21ರಂದು ಹೈಕೋರ್ಟ್ ಮೊರೆ ಹೋಗಿದ್ದರು. ದೂರವಾಣಿ ರೆಕಾರ್ಡಿಂಗ್ ಅನ್ನು ಸಾಕ್ಷ್ಯವಾಗಿ ಪ್ರಸ್ತುತಪಡಿಸುವ ಆದೇಶವನ್ನು ರದ್ದುಗೊಳಿಸುವಂತೆ ಒತ್ತಾಯಿಸಿದ್ದರು. ಇದು ತನ್ನ ಖಾಸಗಿತನದ ಹಕ್ಕನ್ನು ಉಲ್ಲಂಘಿಸಿದಂತಾಗುತ್ತದೆ ಎಂದು ಮಹಿಳೆ ಪ್ರತಿಪಾದಿಸಿದ್ದರು. ಕೌಟುಂಬಿಕ ನ್ಯಾಯಾಲಯವು ಸಂಭಾಷಣೆಯ ರೆಕಾರ್ಡಿಂಗ್ ಮಂಡನೆಗೆ ಅವಕಾಶ ನೀಡುವ ಮೂಲಕ ಕಾನೂನು ದೋಷ ಎಸಗಿದೆ. ಸಂಭಾಷಣೆಯನ್ನು ಅರ್ಜಿದಾರರಿಗೆ ತಿಳಿಯದೆ ಪ್ರತಿವಾದಿಯು ರೆಕಾರ್ಡ್ ಮಾಡಿದ್ದಾರೆ. ಆದ್ದರಿಂದ ಅದನ್ನು ಅವರ ವಿರುದ್ಧ ಬಳಸಲಾಗುವುದಿಲ್ಲ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದ್ದರು.
ನಾಳೆ ವಿಶ್ವ ಆಹಾರ ದಿನ: ನಾವು ಆಹಾರವನ್ನು ಹೇಗೆ ನೋಡಬೇಕು, ಹೇಗೆ ಸೇವಿಸಬೇಕು?

ಪರಶುರಾಮನ 33 ಅಡಿ ಎತ್ತರದ ಪ್ರತಿಮೆ ಬೆಳಗಾಗುವುದರೊಳಗೆ ನಾಪತ್ತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × five =
Remember me
