ಗಾಂಧಿನಗರ:ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಇದೀಗ ಗುಜರಾತ್‌ಗೆ ರೆಡ್ ಅಲರ್ಟ್ ಘೋಷಿಸಿದ್ದು, ಮುಂದಿನ ಎರಡು ಮೂರು ದಿನಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಿದೆ. ಈ ಎಚ್ಚರಿಕೆಯು ಪೂರ್ವ ರಾಜಸ್ಥಾನದಿಂದ ಸೌರಾಷ್ಟ್ರ ಪ್ರದೇಶದವರೆಗೂ ಬಿರುಸಿನ ಗಾಳಿ-ಮಳೆ ಇರಲಿದೆ ಎಂದು ಸೂಚಿಸಿದೆ. ಆಗಸ್ಟ್ 29ರವರೆಗೆ ನಿರಂತರ ಮಳೆ ಸುರಿಯುವ ನಿರೀಕ್ಷೆಯಿದೆ ಎಂದು ಐಎಂಡಿ ತಿಳಿಸಿದೆ.
ಇದನ್ನೂ ಓದಿ:ದರ್ಶನ್​ ಜತೆ ಜೈಲಿನಲ್ಲಿರುವ ವಿಲ್ಸನ್ ಗಾರ್ಡನ್ ನಾಗ ಧರಿಸಿದ ಟೀ ಶರ್ಟ್ ಬೆಲೆ ಎಷ್ಟು ಗೊತ್ತಾ? ಈ ಬ್ರ್ಯಾಂಡ್​ ಟೀ ಶರ್ಟ್‌ಗೆ ಇದೆ ಸಿಕ್ಕಾಪಟ್ಟೆ ಡಿಮ್ಯಾಂಡ್
ಆಗಸ್ಟ್ 24ರಿಂದ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವು ತಗ್ಗು ಪ್ರದೇಶಗಳಲ್ಲಿ ಸಂಪೂರ್ಣವಾಗಿ ಜಲಾವೃತವಾಗಿದೆ. ಪ್ರವಾಹದಿಂದಾಗಿ ನಿವಾಸಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ರಕ್ಷಣಾ ಕಾರ್ಯಾಚರಣೆಯನ್ನು ಚುರುಕಾಗಿ ನಡೆಸಲು ಮುಂದಾಗಿದೆ. ಗುಜರಾತ್​ನ ವಲ್ಸಾದ್, ತಾಪಿ, ನವಸಾರಿ, ಸೂರತ್, ನರ್ಮದಾ ಮತ್ತು ಪಂಚಮಹಲ್ ಜಿಲ್ಲೆಗಳಿಗೆ ಹೆಚ್ಚು ಮಳೆಯಾಗಲಿದ್ದು, ಕಳೆದ ನಾಲ್ಕು ದಿನಗಳಿಂದ ಸುರಿದ ನಿರಂತರ ಮಳೆಗೆ ಹಲವು ಪ್ರದೇಶಗಳು ಅಧಿಕ ಪ್ರಮಾಣದಲ್ಲಿ ಭಾರೀ ಹಾನಿಗೆ ಒಳಗಾಗಿವೆ.
ಇನ್ನು ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಎಚ್ಚೆತ್ತುಕೊಂಡ ಮುಖ್ಯಮಂತ್ರಿ ಭೂಪೇಂದ್ರಭಾಯಿ ಪಟೇಲ್, ಗಾಂಧಿನಗರದ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿಗಳು, ಪಾಲಿಕೆ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳು ಮಳೆಯಿಂದ ಆಗುತ್ತಿರುವ ಪರಿಣಾಮದ ಬಗ್ಗೆ ಪರಿಶೀಲನೆ ನಡೆಸಿ, ರಾಜ್ಯದ ಜನತೆಯನ್ನು ರಕ್ಷಿಸುವುದು ಪ್ರಮುಖ ಆದ್ಯತೆ ಎಂದು ಒತ್ತಿ ಹೇಳಿದ್ದಾರೆ,(ಏಜೆನ್ಸೀಸ್).
ಇವರೇ ನೋಡಿ ಆಲ್ಕೋಹಾಲ್​ ಮುಟ್ಟದ ಟೀಮ್ ಇಂಡಿಯಾದ ಮೂವರು ಸ್ಟಾರ್​ ಕ್ರಿಕೆಟಿಗರು!

ಇದು ನೀವೇನಾ? ಟೀಕೆಗಳ ಬೆನ್ನಲ್ಲೇ ಫೋಟೋ ಡಿಲೀಟ್​! ಗುರುತು ಸಿಗದಷ್ಟು ಬದಲಾಗಿದ್ದಾರೆ ಈ ಸ್ಟಾರ್​ ಬ್ಯೂಟಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + one =
Remember me
