ನವದೆಹಲಿ:ಮೇ 17ರಂದು ಆರಂಭವಾಗಲಿರುವ ಏಳು ವಾರಗಳ ಬೇಸಿಗೆ ರಜೆಯನ್ನು ಕಡಿತ ಮಾಡಲು ಹಾಗೂ ವಸ್ತ್ರ ಸಂಹಿತೆ ಜಾರಿಗೊಳಿಸಲು ಸುಪ್ರೀಂಕೋರ್ಟ್ ನಿರ್ಧರಿಸಿದೆ. ಕರೊನಾ ಲಾಕ್​ಡೌನ್​ನಿಂದಾಗಿ ನಷ್ಟವಾಗಿರುವ ಸಮಯವನ್ನು ಸರಿಹೊಂದಿಸಲು ಹಾಗೂ ಸೋಂಕು ಹರಡುವುದನ್ನು ತಡೆಯುವ ಪ್ರಯತ್ನವಾಗಿ ಕೋರ್ಟ್ ಈ ಕ್ರಮಗಳಿಗೆ ಮುಂದಾಗಿದೆ. ರಜೆ ಅವಧಿಯಲ್ಲಿ ವಿಡಿಯೊ ಕಾನ್ಪರೆನ್ಸಿಂಗ್ ಸೌಲಭ್ಯದ ಮೂಲಕ ಕೆಲಸ ಮುಂದುವರಿಸಲು ಅದು ನಿರ್ಧರಿಸಿದೆ. ನ್ಯಾಯಮೂರ್ತಿಗಳು, ವಕೀಲರು ಹಾಗೂ ನ್ಯಾಯಾಲಯ ಸಿಬ್ಬಂದಿ ಧರಿಸುವ ರೋಬ್ ಹಾಗೂ ಗೌನ್​ಗಳು ಕರೊನಾ ವೈರಸ್​ಗೆ ಒಳಗಾಗುವ ಸಾಧ್ಯತೆ ಹೆಚ್ಚಿರುವುದರಿಂದ ಹೊಸ ವಸ್ತ್ರ ಸಂಹಿತೆ ಜಾರಿ ಮಾಡಲೂ ಕೋರ್ಟ್ ಚಿಂತಿಸುತ್ತಿದೆ ಎಂದು ಹೇಳಲಾಗಿದೆ. ‘ನ್ಯಾಯಮೂರ್ತಿಗಳು ಮತ್ತು ವಕೀಲರು ತಾತ್ಕಾಲಿಕವಾಗಿ ರೋಬ್​ಗಳನ್ನು ತ್ಯಜಿಸಬೇಕಾಗುತ್ತದೆ’ ಎಂದು ಮುಖ್ಯ ನ್ಯಾಯಮೂರ್ತಿ (ಸಿಜೆಐ) ಎಸ್.ಎ. ಬೊಬ್ಡೆ ಹೇಳಿದ್ದಾರೆ.
ಇದನ್ನೂ ಓದಿ:ಸಿಆರ್​ಪಿಎಫ್​ ಯೋಧನ ಕುಟುಂಬದ ಮೇಲೆ ರಮೇಶ್​ ಜಾರಕಿಹೊಳಿ ಬೆಂಬಲಿಗರಿಂದ ಹಲ್ಲೆ ಆರೋಪ
ಸಮಿತಿ ಶಿಫಾರಸು ಪರಿಣಾಮ: ನ್ಯಾಯಾಧೀಶರ ಸಮಿತಿಯೊಂದು ಮುನ್ನೆಚ್ಚರಿಕೆ ಕ್ರಮಗಳನ್ನು ಶಿಫಾರಸು ಮಾಡಿದೆ. ಸಮಿತಿ ಇತ್ತೀಚೆಗೆ ಸಿಜೆಐಗೆ ವರದಿ ಸಲ್ಲಿಸಿತ್ತು. ಲಾಕ್​ಡೌನ್ ಅವಧಿಯಲ್ಲಿ ಹಾಗೂ ಅದರ ನಂತರ ಉನ್ನತ ನ್ಯಾಯಾಲಯ ಕಾರ್ಯ ನಿರ್ವಹಿಸಬೇಕಾದ ರೀತಿಯ ಬಗ್ಗೆ ಸಲಹೆಗಳನ್ನು ನೀಡುವಂತೆ ಸಮಿತಿಗೆ ಸೂಚಿಸಲಾಗಿತ್ತು. ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆಯನ್ನು ಖಾತರಿಪಡಿಸುವುದು ಅಗತ್ಯ. ತೀರಾ ಅಪರೂಪದ
ಸಂದರ್ಭದಲ್ಲಿ ಮಾತ್ರವೇ ಕೋರ್ಟ್ ಕಲಾಪಗಳಲ್ಲಿ ಹೆಚ್ಚು ಜನರು ಭಾಗವಹಿಸಲು ಅವಕಾಶ ಕಲ್ಪಿಸಬಹುದು ಎಂದು ಸಮಿತಿ ಹೇಳಿದೆ.
ಇದನ್ನೂ ಓದಿ:ವಿಮಾನ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಾರಾಟಕ್ಕೆ ಮುಹೂರ್ತ ಫಿಕ್ಸ್​- ಇಲ್ಲಿದೆ ನೋಡಿ ಸಂಪೂರ್ಣ ವಿವರ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × two =
Remember me
