ನವದೆಹಲಿ:14ನೇ ಹಣಕಾಸು ಆಯೋಗಕ್ಕೆ ಹೋಲಿಸಿದರೆ 15ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ ನಿಗದಿಪಡಿಸಿರುವ ಅನುದಾನದ ಪ್ರಮಾಣ ಶೇ.23 ಕಡಿಮೆಯಾಗಿದೆ. ಈ ಕೊರತೆ ಶೀಘ್ರದಲ್ಲಿ ಸರಿಪಡಿಸಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ರಾಜ್ಯದ ಕೇಂದ್ರ ಸಚಿವರು ಮತ್ತು ಸಂಸದರ ನಿಯೋಗ ಮನವಿ ಸಲ್ಲಿಸಿದೆ.
ಸಂಸತ್ತಿನಲ್ಲಿ ಹಣಕಾಸು ಸಚಿವರನ್ನು ಭೇಟಿ ಮಾಡಿದ ನಿಯೋಗ, 15ನೇ ಹಣಕಾಸು ಆಯೋಗ ರಾಜ್ಯಕ್ಕೆ ರೂ. 8847 ಕೋಟಿ ಅನುದಾನ ಕಡಿಮೆ ಮಾಡಿದೆ. ಆದರೆ ಇದೇ ಹಣಕಾಸು ಆಯೋಗದ ವರದಿಯಲ್ಲಿ ರಾಜ್ಯಕ್ಕೆ ರೂ. 5,495 ಕೋಟಿ ಹೆಚ್ಚುವರಿ ವಿಶೇಷ ಅನುದಾನ ನೀಡಬೇಕು ಎಂದು ಶಿಫಾರಸು ಮಾಡಲಾಗಿದೆ. ಈ ಹಣವನ್ನು ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿತು.
14 ನೇ ಹಣಕಾಸು ಆಯೋಗದ ವರದಿ ಪ್ರಕಾರ ರಾಜ್ಯಕ್ಕೆ ಶೇ. 4.71 ಅನುದಾನ ನಿಗದಿಯಾಗಿತ್ತು. ಆದರೆ 15ನೇ ಹಣಕಾಸು ಆಯೋಗದ ವರದಿಯಲ್ಲಿ ರಾಜ್ಯಕ್ಕೆ ಶೇ. 3.646ರಷ್ಟು ಅನುದಾನ ಮೀಸಲಿಡಲಾಗಿದೆ. ಕರ್ನಾಟಕ ಹಿಂದಿನಿಂದಲೂ ಅಭಿವೃದ್ಧಿ ಯೋಜನೆಗಳನ್ನು ಸಶಕ್ತವಾಗಿ ನಿರ್ವಹಿಸುತ್ತಾ ಬಂದಿದೆ ಮತ್ತು ಕೇಂದ್ರವೂ ಇದನ್ನು ಗುರುತಿಸಿದೆ. ಹೀಗಿರುವಾಗ ಅನುದಾನ ಪ್ರಮಾಣ ತಗ್ಗಿಸಿದ್ದು ಸರಿಯಲ್ಲ ಎಂದು ವಿವರಿಸಲಾಗಿದೆ.
ಭೇಟಿ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದ ಸಚಿವ ಸದಾನಂದ ಗೌಡ, ಇದು ಆಯೋಗದ ಪ್ರಾಥಮಿಕ ವರದಿಯಾಗಿದ್ದು ಅಂತಿಮ ವರದಿಯಲ್ಲಿ ಸೂಕ್ತ ತಿದ್ದುಪಡಿಗಳಾಗಲಿವೆ ಎಂದು ಭರವಸೆ ನೀಡಿದರು. ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಸಂಸದರಾದ ಪಿ.ಸಿ. ಮೋಹನ್, ಜಿ.ಎಸ್. ಬಸವರಾಜು, ಕರಡಿ ಸಂಗಣ್ಣ, ದೇವೇಂದ್ರಪ್ಪ, ಅಣ್ಣಾ ಸಾಹೇಬ್ ಜೊಲ್ಲೆ ನಿಯೋಗದಲ್ಲಿದ್ದರು.
https://www.vijayavani.net/video-summer-vacation-for-1-6th-std-students-in-bengaluru/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − two =
Remember me
