ನವದೆಹಲಿ:ಬಿಹಾರ ವಿಧಾನಸಭೆಗೆ ಮೊದಲ ಹಂತದ ಮತದಾನ ಇಂದು ಆರಂಭವಾಗಿದೆ. ಕೋವಿಡ್ 19 ತಡೆಯುವುದಕ್ಕೆ ಸುರಕ್ಷಾ ನಿಯಮ ಪಾಲಿಸಿಕೊಂಡು ಪ್ರಜಾಪ್ರಭುತ್ವದ ಈ ಉತ್ಸವದಲ್ಲಿ ಪಾಲ್ಗೊಳ್ಳುವಂತೆ ಬಿಹಾರದ ಜನತೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಮನವಿ ಮಾಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಬಿಹಾರ ವಿಧಾನಸಭೆಗೆ ಮೊದಲ ಹಂತದ ಮತದಾನ ಇಂದು ನಡೆಯುತ್ತಿದೆ. ಕೋವಿಡ್ ತಡೆಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಪ್ರಜಾಪ್ರಭುತ್ವದ ಈ ಉತ್ಸವದಲ್ಲಿ ಎಲ್ಲರೂ ಭಾಗಿಯಾಗಬೇಕು ಎಂದು ಎಲ್ಲ ಮತದಾರರಲ್ಲೂ ಕೇಳಿಕೊಳ್ಳುತ್ತೇನೆ. ನೆನಪಿರಲಿ ಮೊದಲು ಮತದಾನ ನಂತರ ಉಪಾಹಾರ ಎಂಬ ಸಂದೇಶ ಅಪ್ಡೇಟ್ ಮಾಡಿದ್ದಾರೆ.
ಇದನ್ನೂ ಓದಿ:ಜಮ್ಮು-ಕಾಶ್ಮೀರದ ಬದ್ಗಾಂನಲ್ಲಿ ಇಬ್ಬರು ಉಗ್ರರ ಹತ್ಯೆ
ಬಿಹಾರದಲ್ಲಿ ಇಂದು 71 ವಿಧಾನಸಭಾ ಕ್ಷೇತ್ರಗಳ ಮತದಾನ ನಡೆಯುತ್ತಿದ್ದು, 1066 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇನ್ನೆರಡು ಹಂತಗಳ ಮತದಾನ ನವೆಂಬರ್ 3 ಮತ್ತು 7 ರಂದು ನಡೆಯಲಿದೆ. ನವೆಂಬರ್ 10ರಂದು ಫಲಿತಾಂಶ ಪ್ರಕಟವಾಗಲಿದೆ. (ಏಜೆನ್ಸೀಸ್)
ಎಸ್​ಎಂಎಸ್​, ವಾಟ್ಸ್​ಆ್ಯಪ್​, ಇಮೇಲ್​ ಮೂಲಕ ಸಮನ್ಸ್ – ಸುಪ್ರೀಂ ಕೋರ್ಟ್​ ಒಲವು

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 + sixteen =
Remember me
