ಉತ್ತರಪ್ರದೇಶ:ಧಾರ್ಮಿಕ ಸಂಘರ್ಷಗಳ ವಿಚಾರಗಳು ದೇಶದಲ್ಲಿ ಅಲ್ಲಲ್ಲಿ ವ್ಯಕ್ತವಾಗುತ್ತಿರುವ ಬೆನ್ನಿಗೇ ಇಲ್ಲೊಬ್ಬರು ಸಚಿವರು ಅಂಥದ್ದೇ ಇನ್ನೊಂದು ಕೆಲಸಕ್ಕೆ ಮುಂದಾಗಿದ್ದಾರೆ. ಅವರ ಈ ಹೇಳಿಕೆ ಮತ್ತೊಂದು ವಿವಾದಕ್ಕೆ ಆಸ್ಪದ ನೀಡಿದರೂ ಅಚ್ಚರಿ ಏನಿಲ್ಲ ಎಂಬಂತಾಗಿದೆ.
ದೇವಸ್ಥಾನಗಳ ಬಳಿ ಇರುವ ಎಲ್ಲ ಮಸೀದಿಗಳನ್ನು ತೆರವುಗೊಳಿಸುವ ಕುರಿತು ಆದೇಶವೊಂದು ಹೊರಬಿದ್ದಿದೆ. ಅಂದಹಾಗೆ ಇದು ಕರ್ನಾಟಕಲ್ಲಿ ಅಲ್ಲ, ಉತ್ತರಪ್ರದೇಶದಲ್ಲಿ. ಉತ್ತರ ಪ್ರದೇಶದ ಮೀನುಗಾರಿಕಾ ಸಚಿವ ಸಂಜಯ್ ನಿಶಾದ್​ ಬುಧವಾರ ಸುದ್ದಿಗಾರರ ಜತೆ ಮಾತನಾಡುತ್ತ ಈ ವಿಷಯವನ್ನು ತಿಳಿಸಿದರು.
ದೇಶದಲ್ಲಿ ಧಾರ್ಮಿಕ ಸಂಘರ್ಷದ ವಾತಾವರಣ ಹರಡುತ್ತಿದ್ದು, ದೇವಸ್ಥಾನಗಳ ಬಳಿ ಇರುವ ಮಸೀದಿಗಳನ್ನು ತೆರವುಗೊಳಿಸಬೇಕಾದ ಅಗತ್ಯವಿದೆ. ಸಮೀಕ್ಷೆಗಳ ಪ್ರಕಾರ ಮಸೀದಿಗಳು ಭಯೋತ್ಪಾದಕರ ಸಂಪರ್ಕದಲ್ಲಿ ಇರುವುದು ಕಂಡುಬಂದಿದೆ. ಎಷ್ಟೋ ಸಲ ಅಲ್ಲಿಂದಲೇ ಭಯೋತ್ಪಾದಕರನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಅದಾಗ್ಯೂ ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಮತ್ತು ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಗಲಭೆಗಳ ಪ್ರಮಾಣ ತಗ್ಗಿದೆ ಎಂಬುದಾಗಿಯೂ ಅವರು ಹೇಳಿದ್ದಾರೆ.
ತುಂಡಾದ ಕಾಲಿನೊಂದಿಗೆ ಆಸ್ಪತ್ರೆಗೆ ಬಂದ ಗಾಯಾಳು; ಯಶಸ್ವಿಯಾಗಿ ಜೋಡಿಸಿದ ವೈದ್ಯರು..

ಅಂಗಡಿಗೆ ಬಂದಿದ್ದ ಮಹಿಳೆ ಮೇಲೆ ಕೈ ಹಾಕಿದ ಅನ್ಯಕೋಮಿನ ಯುವಕ; ಆರೋಪಿಯ ಬಂಧಿಸಲು ಗಡುವು..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 5 =
Remember me
