ನವದೆಹಲಿ:ಲೋಕಸಭೆ ಚುನಾವಣೆ ಫಲಿತಾಂಶ ಮಂಗಳವಾರ(ಜೂನ್​4) ಹೊರಬೀಳಲಿರುವ ಹಿನ್ನೆಲೆಯಲ್ಲಿ ನೂತನ ಪ್ರಧಾನಿ ಪ್ರಮಾಣ ವಚನ ಸ್ವೀಕಾರ ಸ್ಥಳದಲ್ಲಿ ಕೈಗೊಳ್ಳಬೇಕಾದ ಭದ್ರತಾ ವ್ಯವಸ್ಥೆಗಳ ಬಗ್ಗೆ ಭದ್ರತಾ ಸಂಸ್ಥೆಗಳು ಗಮನ ಹರಿಸಿವೆ. ಇದೇ ವಾರಾಂತ್ಯದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಬಹುದು ಎನ್ನಲಾಗಿದೆ.
ಇದನ್ನೂ ಓದಿ:ಕಮ್ಮಾರನ ಕುಲುಮೆಯಲ್ಲಿ ಕೆಲಸ ಮಾಡಿದ ಡಿವೈಎಸ್ಪಿ! ಕುಲಕಸುಬಿಗೆ ನೆಟ್ಟಿಗರ ಶ್ಲಾಘನೆ..
ಭದ್ರತಾ ಸಿದ್ಧತೆಗಳ ಕುರಿತು ದೆಹಲಿ ಪೊಲೀಸರು ಮತ್ತು ಕೇಂದ್ರ ಭದ್ರತಾ ಏಜೆನ್ಸಿಗಳು ಸಭೆ ನಡೆಸಿವೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಮಾಣ ವಚನ ಸ್ವೀಕಾರ ಸಮಾರಂಭದ ಅಂಗವಾಗಿ ಭದ್ರತಾ ಏಜೆನ್ಸಿಗಳು ಬಹು ಹಂತದ ಭದ್ರತೆ ಮತ್ತು ಸಂಚಾರ ನಿಯಂತ್ರಣವನ್ನು ಯೋಜಿಸುತ್ತಿವೆ ಎಂದು ಅವರು ಹೇಳಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಅದಕ್ಕೆ ತಕ್ಕಂತೆ ವ್ಯವಸ್ಥೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಪ್ರಮಾಣ ವಚನ ಸ್ವೀಕಾರ ಸ್ಥಳದಲ್ಲಿ ಬದಲಾವಣೆಯಾದರೆ ಅದಕ್ಕೆ ತಕ್ಕಂತೆ ವ್ಯವಸ್ಥೆ ಮಾಡಲಾಗುವುದು. ಜೂನ್ 9 ಅಥವಾ 10 ರಂದು ಪ್ರಧಾನಿ ಪ್ರಮಾಣ ವಚನ ಸ್ವೀಕಾರ ಆಗಬಹುದು ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.
ಪ್ರಾಥಮಿಕ ಅಂದಾಜಿನ ಪ್ರಕಾರ, 12 ವಿದೇಶಿ ಗಣ್ಯರು ಸೇರಿದಂತೆ 10ಸಾವಿರ ಜನರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಹೆಂಡತಿ ಗೆಲ್ಲಬೇಕೆಂದು.. ಹೀರೋ ಉರುಳು ಸೇವೆ! ವೀಡಿಯೋ ವೈರಲ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − one =
Remember me
