ಟೋಕಿಯೋ :ಜಪಾನಿನ ಟೋಕಿಯೋದಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು ಅವರಿಗೆ ಚಿನ್ನದ ಪದಕವೇ ಒಲಿಯುವ ಸಾಧ್ಯತೆ ಇದೆ ಎನ್ನಲಾಗಿದೆ. ಏಕೆಂದರೆ, ವೇಯ್ಟ್​ ಲಿಫ್ಟಿಂಗ್​ ಸ್ಪರ್ಧೆಯಲ್ಲಿ ಚಾನು ಅವರನ್ನು ಮೀರಿಸಿ ಮೊದಲ ಸ್ಥಾನ ಪಡೆದಿದ್ದ ಚೀನಾದ ಜಿಹುಯಿ ಹೌ ಅವರನ್ನು ಇಂದು ಎರಡನೇ ಡೋಪಿಂಗ್ ಪರೀಕ್ಷೆಗೆ ಒಡ್ಡಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.
ಜುಲೈ 24 ರಂದು ನಡೆದ ಮಹಿಳೆಯರ 49 ಕೆಜಿ ವೇಯ್ಟ್​ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಚೀನಾದ ಹೌ, 210 ಕೆಜಿ ಭಾರ ಎತ್ತಿ ಮೊದಲ ಸ್ಥಾನ ಪಡೆದಿದ್ದರು. ಕ್ರೀನ್ ಅಂಡ್​ ಜರ್ಕ್​ ವಿಶ್ವ ದಾಖಲೆ ಹೊಂದಿರುವ ಚಾನು, 202 ಕೆಜಿ ಭಾರ ಎತ್ತಿ ಎರಡನೇ ಸ್ಥಾನ ಗಳಿಸಿದ್ದರು. ಇಂಡೋನೇಷಿಯಾದ ವಿಂಡಿ ಕಾಂಟಿಕ ಅವರು 194 ಕೆಜಿ ಭಾರ ಎತ್ತಿ ಕಂಚಿನ ಪದಕ ಗಳಿಸಿದ್ದರು.
ಇದನ್ನೂ ಓದಿ:ಪ್ರೀ-ಕ್ವಾರ್ಟರ್​ಫೈನಲ್ಸ್​​​ಗೆ ಮೇರಿ ಕೋಂ ಮುನ್ನಡೆ; ಚಿನ್ನದ ಮೇಲೆ ಕಣ್ಣು!
ದೈಹಿಕ ಪರೀಕ್ಷೆಯಲ್ಲಿ ಹೌ ವಿಷಯದಲ್ಲಿ ಕೆಲವು ಅಡ್ಡ ವಿಶ್ಲೇಷಣೆ ಬಂದಿರುವ ಹಿನ್ನೆಲೆಯಲ್ಲಿ ಅವರ ರಕ್ತದ ಸ್ಯಾಂಪಲ್​ಅನ್ನು ಮತ್ತೆ ಪರೀಕ್ಷೆಗೆ ಕಳುಹಿಸಲಾಗುತ್ತಿದೆ. ಅವರು ಯಾವುದಾದರೂ ಔಷಧಿ ತೆಗೆದುಕೊಳ್ಳುತ್ತಿರುವ ಬಗ್ಗೆ ಆ್ಯಂಟಿ ಡೋಪಿಂಗ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರೇ ಎಂದೂ ಪರಿಶೀಲಿಸಲಾಗುತ್ತಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.(ಏಜೆನ್ಸೀಸ್)
ಒಲಿಂಪಿಕ್ಸ್​: ಮೊದಲ ಪಂದ್ಯ ಗೆದ್ದ ವರ್ಲ್ಡ್ ಚ್ಯಾಂಪಿಯನ್ ಪಿ.ವಿ.ಸಿಂಧು

ಟ್ರ್ಯಾಕ್ಟರ್ ಏರಿ ಸಂಸತ್ತಿಗೆ ಬಂದ ರಾಹುಲ್ ಗಾಂಧಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 4 =
Remember me
