ನವದೆಹಲಿ: ಮೀಸಲಾತಿ ಮುಂದುವರಿಕೆ ಕುರಿತಂತೆ ಸಮಾಜದಲ್ಲಿ ಮಿಶ್ರ ಅಭಿಪ್ರಾಯ ಇರುವ ನಡುವೆಯೇ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಮೀಸಲಾತಿ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ಮೂಲಕ ಗಮನ ಸೆಳೆದಿದ್ದಾರೆ.
ನಾಗಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್, ಸಮಾಜದಲ್ಲಿ ಅಸಮಾನತೆ ಇರುವವರೆಗೂ ಮೀಸಲಾತಿ ಮುಂದುವರಿಯಬೇಕು ಎಂದು ಹೇಳಿದ್ದಾರೆ.
ಇದನ್ನೂ ಓದಿ:ಹಿಂದೂ ಧರ್ಮದ ಹುಟ್ಟು ಗೊತ್ತಿಲ್ಲದ ಪರಮೇಶ್ವರ್ ಹೆಸರನ್ನು ಇಸ್ಮಾಯಿಲ್ ಅಂತ ಯಾಕಿಟ್ಟಿಲ್ಲ?: ಕಲ್ಲಡ್ಕ ಪ್ರಭಾಕರ್ ಭಟ್
ಅಸಮಾನತೆ ನಮಗೆ ಕಾಣಿಸದಿದ್ದರೂ ಅದು ಸಮಾಜದಲ್ಲಿ ಇದೆ. ನಾವು ನಮ್ಮದೇ ಜನರನ್ನು ಈ ಸಾಮಾಜಿಕ ವ್ಯವಸ್ಥೆಯಲ್ಲಿ ಹಿಂದೆ ಇರಿಸಿದ್ದೇವೆ. ನಾವು ಅವರನ್ನು ಪರಿಗಣನೆಗೆ ತೆಗೆದುಕೊಳ್ಳುತ್ತಿಲ್ಲ, ಇದು 2000 ವರ್ಷಗಳಿಂದ ನಡೆದುಕೊಂಡು ಬಂದಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ:ಈಕೆಯ ಕೈ ಸ್ಕ್ಯಾನ್ ಮಾಡಿದ್ರೆ ಸಾಕು ಹಣ ಕಳಿಸಿಕೊಡಬಹುದು; ಇದಕ್ಕಿಂತ ‘ಡೈರೆಕ್ಟ್ ಟ್ರಾನ್ಸ್​ಫರ್’​ ಅಸಾಧ್ಯ ಅನಿಸುತ್ತೆ!
ಅವರಿಗೆ ಸಮಾನತೆ ಸಿಗುವವರೆಗೂ ನಾವು ಅವರಿಗೆ ಕೆಲವು ವಿಶೇಷ ಸವಲತ್ತುಗಳನ್ನು ನೀಡಬೇಕಾಗುತ್ತದೆ. ಅಂಥ ಸವಲತ್ತುಗಳಲ್ಲೊಂದು ಮೀಸಲಾತಿ. ಹೀಗಾಗಿ ಅಸಮಾನತೆ ಇರುವವರೆಗೂ ಮೀಸಲಾತಿ ಮುಂದುವರಿಯಬೇಕು, ಸಂವಿಧಾನಬದ್ಧ ಮೀಸಲಾತಿಗೆ ಆರ್​​ಎಸ್​​ಎಸ್​ನ ಸಂಪೂರ್ಣ ಬೆಂಬಲ ಇದೆ ಎಂದು ಅವರು ಹೇಳಿದ್ದಾರೆ.
ಟ್ರಕ್​ನಲ್ಲಿ ಗೋವಿನ ದೇಹದ ಭಾಗಗಳು?; ಪ್ರಧಾನಿ ಮೋದಿಯ ಗಮನ ಸೆಳೆಯಲು ಯತ್ನಿಸಿದ ನಟಿ ಐಂದ್ರಿತಾ ರೇ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + 6 =
Remember me
