ನವದೆಹಲಿ:ದೇಶದಲ್ಲಿ ಉಂಟಾಗಿರುವ ಕೋವಿಡ್19 ಆರೋಗ್ಯ ತುರ್ತು ಪರಿಸ್ಥಿತಿ ಬಗ್ಗೆ ಭಾರತೀಯ ಸೇನೆಯ ಸಿದ್ದತೆ ಏನು? ಹಾಗೂ ಈ ಸಂದರ್ಭದಲ್ಲಿ ಸೇನೆಯಿಂದ ಮಾಡಬೇಕಾದ ಕೆಲಸವೇನು ಎಂಬುದರ ಬಗ್ಗೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಚೀಫ್ ಆಫ್ ಡಿಪೆನ್ಸ್ ಸ್ಟಾಫ್ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಅವರೊಂದಿಗೆ ಸಭೆ ನಡೆಸಿದರು.
ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಬಿಪಿನ್ ರಾವತ್ ಅವರು ಕೋವಿಡ್ ಬಗ್ಗೆ ತಾವು ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು.
ಮುಖ್ಯವಾಗಿ ಭಾರತೀಯ ಸೇನೆಯಲ್ಲಿ ಕೆಲಸ ಮಾಡಿ ನಿವೃತ್ತಿಯಾಗಿ ಎರಡು ವರ್ಷ ಪೂರೈಸಿದ ವೈದ್ಯರನ್ನು ಕೋವಿಡ್ ನಿಯಂತ್ರಣ ಕೆಲಸಕ್ಕೆ ಕರೆಸಿಕೊಳ್ಳಲಾಗಿದೆ ಎಂದು ಬಿಪಿನ್ ರಾವತ್ ತಿಳಿಸಿದ್ದಾರೆ. ಇವರೊಂದಿಗೆ ಈಗ ಸೇನೆಯಲ್ಲಿ ಕೆಲಸ ಮಾಡುತ್ತಿರುವ ವೈದ್ಯರನ್ನು ಕೋವಿಡ್ ತಡೆ ಕೆಲಸದಲ್ಲಿ ಬಳಸಿಕೊಳ್ಳಲಾಗುವುದು. ಸೇನೆಯಲ್ಲಿ ಕೋವಿಡ್ ತಡೆ ನಿಯಮಾವಳಿಗಳನ್ನು ವ್ಯಾಪಕವಾಗಿ ಬಳಸಲಾಗುತ್ತಿದೆ ಎಂದು ರಾವತ್ ತಿಳಿಸಿದ್ದಾರೆ.
ನಾಗರಿಕರಿಗೆ ಆಕ್ಸಿಜನ್ ಸೇರಿದಂತೆ ವೈದ್ಯಕೀಯ ಸೌಲಭ್ಯಗಳು ನಾಗರಿಕರಿಗೆ ದೊರಕುವಂತೆ ಸೇನಾ ಆಸ್ಪತ್ರೆಗಳಲ್ಲಿ ನೋಡಿಕೊಳ್ಳಲಾಗುತ್ತಿದೆ ಎಂದು ರಾವತ್ ಪ್ರಧಾನಿ ಅವರಿಗೆ ತಿಳಿಸಿದ್ದಾರೆ. ಅಲ್ಲದೇ ವಾಯುಸೇನೆಯಿಂದ ವಿದೇಶಗಳಿಂದ ಆಕ್ಸಿಜನ್ ತರುವಲ್ಲಿ ಶ್ರಮದ ಕುರಿತು ಮೋದಿ ಅವರು ಶ್ಲಾಘಿಸಿದ್ದಾರೆ.
14 ದಿನದ ಜನತಾ ಕರ್ಫ್ಯೂ: ಏನಿರುತ್ತೆ? ಏನಿರುವುದಿಲ್ಲ? ಮದ್ಯದಂಗಡಿ, ಸಾರಿಗೆ, ಮೆಟ್ರೋ ಕಥೆ ಏನು?

ಹರಿದುಬಂತು ಸಹಾಯ : ದೆಹಲಿ, ಮುಂಬೈ ತಲುಪಿದ ಆಕ್ಸಿಜನ್ ಕಾನ್ಸಂಟ್ರೇಟರ್​ಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + seven =
Remember me
