ಲಖನೌ:ಪ್ರೀತಿಯ ಮಗ ನೆರೆ ಮನೆಯವರೊಂದಿಗೆ ಜಗಳವಾಡಿಕೊಂಡಿದ್ದನ್ನು ಕಂಡು ಮನನೊಂದ ತಂದೆ ತಲೆಗೆ ಗುಂಡಿಟ್ಟುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಜಲಾನ್​ನಲ್ಲಿ ನಡೆದಿದೆ. ಮೃತ ವ್ಯಕ್ತಿಯು ಪೊಲೀಸ್​ ಇಲಾಖೆಯಲ್ಲಿ ಮುಖ್ಯ ಪೇದೆಯಾಗಿ ಕೆಲಸ ಮಾಡಿ ನಿವೃತ್ತಿ ಪಡೆದಿದ್ದ.
ಶ್ಯಾಮಚರಣ್ ಚತುರ್ವೇದಿ ಮೃತ ವ್ಯಕ್ತಿ. ಈತ ತನ್ನ ಮನೆಯಲ್ಲಿ ಬುಧವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ಪರವಾನಗಿ ಪಡೆದ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಪ್ರಾಣ ಬಿಟ್ಟಿದ್ದಾನೆ. ಇತ್ತೀಚೆಗೆ ಶ್ಯಾಮಚರಣ್ ಅವರ ಮಗ ಮತ್ತು ಅವರ ನೆರೆಹೊರೆಯವರಿಗೆ ಜಗಳವಾಗಿತ್ತಂತೆ. ಈ ವಿಚಾರವಾಗಿ ಅವರ ಮಗ ಪೊಲೀಸ್​ ದೂರನ್ನೂ ನೀಡಿದ್ದನಂತೆ. ಆದರೆ ಪೊಲೀಸರು ಅದರ ಬಗ್ಗೆ ಹೆಚ್ಚಿನ ಗಮನ ಕೊಟ್ಟಿಲ್ಲ. ಅದೇ ಕಾರಣಕ್ಕೆ ನನ್ನ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತನ ಪತ್ನಿ ಆರೋಪಿಸಿದ್ದಾರೆ. (ಪಿಟಿಐ)
ಕ್ಷಣಕ್ಷಣದ ಮಾಹಿತಿಗಾಗಿವಿಜಯವಾಣಿಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

ನಿರ್ಮಾಪಕ ಅನುರಾಗ್ ಕಶ್ಯಪ್ & ನಟಿ ತಾಪ್ಸಿ ಪನ್ನುಗೆ ಐಟಿ ಶಾಕ್! ದಾಳಿ ನಡೆಸಿದ ಅಧಿಕಾರಿಗಳು

ಮೋದಿಯವರ ಭಾಷಣ ಬರೆಯುವವರು ಯಾರು? ಅವರಿಗೆ ಎಷ್ಟು ಸಂಬಳ ಕೊಡಲಾಗುತ್ತಿದೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 5 =
Remember me
