ನವದೆಹಲಿ:ನಿವೃತ್ತ ಐಎಎಸ್ ಅಧಿಕಾರಿ ಅರುಣ್ ಗೋಯೆಲ್ ಅವರು ಸೋಮವಾರ ಭಾರತದ ಚುನಾವಣಾ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದರು. ಶನಿವಾರವಷ್ಟೇ (ನ.19) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಯುಕ್ತರ ಹುದ್ದೆಗೆ ಗೋಯೆಲ್​ ಅವರನ್ನು ನೇಮಿಸಿದರು.
ತ್ರಿಸದಸ್ಯ ಚುನಾವಣಾ ಆಯೋಗದಲ್ಲಿ ಒಬ್ಬ ಚುನಾವಣಾ ಆಯುಕ್ತರ ಹುದ್ದೆಯು ಮೇ 15 ರಿಂದ ಖಾಲಿಯಾಗಿದೆ. ಸುಶೀಲ್ ಚಂದ್ರ ಅವರು ಹುದ್ದೆಯಿಂದ ನಿವೃತ್ತರಾದ ನಂತರ ಅಂದಿನ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡರು. ಅವರಿಂದ ತೆರವಾಗಿರುವ ಸ್ಥಾನಕ್ಕೆ ಗೋಯೆಲ್​ ನೇಮಕವಾಗಿದ್ದಾರೆ.
ಗೋಯೆಲ್​ ಈವರೆಗೂ ಭಾರಿ ಕೈಗಾರಿಕೆಗಳ ಸಚಿವಾಲಯದ ಕಾರ್ಯದರ್ಶಿಯಾಗಿದ್ದರು. ಸ್ವಯಂ ನಿವೃತ್ತಿ ಪಡೆದ ಬಳಿಕ ಅವರ ಸ್ಥಾನಕ್ಕೆ ಉತ್ತರ ಪ್ರದೇಶ ಕೇಡರ್ ಅಧಿಕಾರಿ ಕಮ್ರಾನ್ ರಿಜ್ವಿ ಅವರನ್ನು ಕೇಂದ್ರ ನೇಮಕಾತಿ ಸಮಿತಿ ನೇಮಿಸಿದೆ. ಕೈಗಾರಿಕೆಗಳ ಸಚಿವಾಲಯದ ಕಾರ್ಯದರ್ಶಿಯಾಗುವ ಮುನ್ನ ಸಾಂಸ್ಕೃತಿಕ ಸಚಿವಾಲಯದ ಕಾರ್ಯದರ್ಶಿಯಾಗಿದ್ದರು. ಅಲ್ಲದೆ, ದೆಹಲಿ ಅಭಿವೃದ್ಧಿ ಪ್ರಾಧಿಕಾರದ ಚೇರ್ಮನ್​ ಸಹ ಆಗಿದ್ದರು.
ಇದೀಗ ಗೋಯೆಲ್​ ಅವರು ನೂತನ ಚುನಾವಣಾ ಆಯುಕ್ತರಾಗಿ ನೇಮಕವಾಗಿದ್ದು, ಮುಖ್ಯ ಚುನಾವಣಾ ಆಯುಕ್ತ ರಾಜೀವ್​ ಕುಮಾರ್​ ಅವರನ್ನೊಳಗೊಂಡ ಚುನಾವಣಾ ಆಯೋಗದ ತ್ರಿಸದಸ್ಯರಲ್ಲಿ ಒಬ್ಬರಾಗಿದ್ದಾರೆ.(ಏಜೆನ್ಸೀಸ್​)
ಪ್ರೀತಿಯ ಮಗಳ ಅಕಾಲಿಕ ಸಾವು: ದೇವಸ್ಥಾನ ನಿರ್ಮಿಸಿ, ಮಗಳ ಮೂರ್ತಿಯನ್ನಿಟ್ಟು ನಿತ್ಯವೂ ಪೂಜಿಸುವ ತಂದೆ!

ಜೆಡಿಎಸ್ ಅಧಿಕಾರಕ್ಕೆ ಬಂದರೆ ಸ್ತ್ರೀಶಕ್ತಿ ಸಂಘಗಳ ಸಾಲಮನ್ನಾ: ಎಚ್​ಡಿಕೆ ಘೋಷಣೆ

ಅಪ್ಪನ ವಯಸ್ಸಿನ ನಟನ ಜತೆಗೆ ಸೋನಾಕ್ಷಿ ಸಿನ್ಹಾ ನಟನೆ? ಆ ಹೀರೋ ಯಾರು ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 − 2 =
Remember me
