ಶ್ರೀನಗರ:ಮಸೀದಿಯನ್ನು ಗುರಿಯಾಗಿಸಿಕೊಂಡು ಉಗ್ರರು ನಡೆಸಿದ ದಾಳಿಯಲ್ಲಿ ನಿವೃತ್ತ ಪೊಲೀಸ್​ ಅಧಿಕಾರಿಯೊಬ್ಬರು ಮೃತಪಟ್ಟಿರುವ ಘಟನೆ ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ನಡೆದಿದೆ. ಮೊಹಮ್ಮದ್ ಶಫಿ ಮಿರ್ ಮೃತರು ಎಂದು ತಿಳಿದು ಬಂದಿದ್ದು, ದಾಳಿ ನಡೆದ ವೇಳೆ ಇವರು ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಉಗ್ರರು ಬಾರಾಮುಲ್ಲಾದ ಗಂಟಮುಲ್ಲಾ ಬಾಳ ಪ್ರದೇಶದಲ್ಲಿರುವ ಮಸೀದಿಯನ್ನು ಗುರಿಯಾಗಿಸಿಕೊಂಡು ದಾಳಿ ನಡೆದಿದ್ದು, ಪ್ರಾರ್ಥನೆ ಸಲ್ಲಿಸುತ್ತಿದ್ದ ನಿವೃತ್ತ ಪೊಲೀಸ್​ ವರಿಷ್ಠಾಧಿಕಾರಿ ಮೊಹಮ್ಮದ್​ ಶಫಿ ಮಿರ್​ ಉಗ್ರರ ಗುಂಡೇಟಿಗೆ ಬಲಿಯಾಗಿದ್ದಾರೆ.
ಘಟನೆ ಬಳಿಕ ಉಗ್ರರು ಪರಾರಿಯಾಗಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಘಟನೆ ನಡೆದ ಪ್ರದೇಶವನ್ನು ಪೊಲೀಸರು ಹಾಗೂ ಸೇನೆಯ ಅಧಿಕಾರಿಗಳು ಸುತ್ತುವರೆದಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
#WATCH| Baramulla, J&K: Area cordoned off after terrorists fired upon a retired police officer, Mohd Shafi, at Gantmulla, Sheeri Baramulla, while praying Azan in the mosque and succumbed to injuries.(Visuals deferred by unspecified time)https://t.co/2RZuD3G404pic.twitter.com/iFR5DUNRkO
#BaramullaPic of slain Retired Police officer (SSP) Mohmmad Shafi Mir.pic.twitter.com/wbWamjLsLG
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − fourteen =
Remember me
