ಹೈದರಾಬಾದ್:ತೆಲಂಗಾಣ ಮುಖ್ಯಮಂತ್ರಿ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಎ. ರೇವಂತ್ ರೆಡ್ಡಿ ಅವರು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತೆಲಂಗಾಣದಿಂದ ಸ್ಪರ್ಧಿಸುವಂತೆ ಒತ್ತಾಯಿಸಿದ್ದಾರೆ.
ಇದನ್ನೂ ಓದಿ:ಭಾರತ ಹಾಕಿ ಆಟಗಾರನ ಮೇಲೆ ಲೈಂಗಿಕ ಕಿರುಕುಳ ಆರೋಪ; ಪ್ರಕರಣ ದಾಖಲು
ದೆಹಲಿಯಲ್ಲಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ ರೇವಂತ್​ ರೆಡ್ಡಿ, ತೆಲಂಗಾಣ ಕಾಂಗ್ರೆಸ್ ಘಟಕವು ರಾಜ್ಯದಿಂದ ಸ್ಪರ್ಧಿಸುವಂತೆ ಒತ್ತಾಯಿಸುವ ನಿರ್ಣಯವನ್ನು ಅಂಗೀಕರಿಸಿದೆ ಎಂದು ಅವರ ಗಮನಕ್ಕೆ ತಂದರು.
ತೆಲಂಗಾಣ ರಾಜ್ಯ ರಚನೆಗೆ ಕಾರಣಿಭೂತರಾಗಿರುವ ಸೋನಿಯಾ ಗಾಂಧಿ ಅವರನ್ನು ಇಲ್ಲಿನ ಜನ ತಾಯಿ ಎಂದು ಭಾವಿಸಿದ್ದಾರೆ. ಹಾಗಾಗಿ ಜನ ಲೋಕಸಭಾ ಗೆಲುವಿನ ಮೂಲಕ ಅವರ ಋಣ ತೀರಿಸಬೇಕಿದೆ ಎಂದು ಹೇಳಿದ್ದಾರೆ.
ಈ ಕುರಿತು ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಪ್ರಕಟಿಸುವುದಾಗಿ ಸೋನಿಯಾ ಅವರು ತಿಳಿಸಿದ್ದಾರೆ ಎಂದು ರೇವಂತ್ ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ರೇವಂತ್ ರೆಡ್ಡಿ ನೇತೃತ್ವದ ಕಾಂಗ್ರೆಸ್ ಪಕ್ಷ ಅಧಿಕಾರದ ಗದ್ದುಗೆ ಏರಿದ್ದು ಲೋಕಸಭೆ ಚುನಾವಣೆಯಲ್ಲಿ ತೆಲಂಗಾಣದಲ್ಲಿ ಹೆಚ್ಚು ಸ್ಥಾನ ಗೆಲ್ಲುವ ನಿರೀಕ್ಷೆಯಲ್ಲಿದೆ.
ಉಪಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಮತ್ತು ರಾಜ್ಯ ಕಂದಾಯ ಸಚಿವ ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ ಅವರೊಂದಿಗೆ ಆಗಮಿಸಿದ ರೇವಂತ್ ರೆಡ್ಡಿ ಅವರು ತಮ್ಮ ಸರ್ಕಾರ ಜಾರಿಗೆ ತಂದಿರುವ ಚುನಾವಣಾ ಭರವಸೆಗಳ ಬಗ್ಗೆ ತಿಳಿಸಿದರು. ರಾಜ್ಯದಲ್ಲಿ ಜಾತಿ ಗಣತಿ ನಡೆಸಲು ಸರ್ಕಾರ ನಿರ್ಧರಿಸಿದ್ದು, ಅದಕ್ಕೆ ಸಿದ್ಧತೆ ಆರಂಭವಾಗಿದೆ ಎಂದೂ ಅವರು ತಿಳಿಸಿದರು.
ಈ ದೇಶವನ್ನೇ ಕಾಡುತ್ತಿದೆ ಭೀಕರ ಕಾಯಿಲೆ! ಭಾರತದಿಂದ ನೆರವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 5 =
Remember me
