ತೆಲಂಗಾಣ:ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಅನುಭವಿಸಿದ ಬಳಿಕ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಬಿಜೆಪಿ ಸೇರಲಿದ್ದಾರೆ ಎಂದು ತೆಲಂಗಾಣ ಮಾಜಿ ಸಚಿವ ಮತ್ತು ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಕಾರ್ಯಾಧ್ಯಕ್ಷ ಕೆಟಿ ರಾಮರಾವ್ ಮಂಗಳವಾರ ಶಾಕಿಂಗ್​ ಅಚ್ಚರಿ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ:ರಾಜಕೀಯಕ್ಕೆ ಎಂಟ್ರಿ ಕೊಟ್ಟ ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ..! ಈ ಪಕ್ಷದಿಂದ ಎಂಎಲ್​ಎ ಎಲೆಕ್ಷನ್‌ಗೆ ಸ್ಪರ್ಧೆ
ಹೈದರಾಬಾದ್‌ನ ತೆಲಂಗಾಣ ಭವನದಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಕೆಟಿಆರ್​, ” ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಅವರ ‘ಚೌಕಿದಾರ್ ಚೋರ್ ಹೈ’ ಹೇಳಿಕೆಗಳಿಗೆ ವ್ಯತಿರಿಕ್ತವಾಗಿ, ರೇವಂತ್ ರೆಡ್ಡಿ ಪ್ರಧಾನಿ ಮೋದಿಯನ್ನು ತಮ್ಮ ಅಣ್ಣ ಎಂದು ಕರೆದಿದ್ದಾರೆ. ರೇವಂತಿ ರೆಡ್ಡಿ ಬಿಜೆಪಿಗೆ ಸೇರುವುದು ಖಚಿತ ಎಂದಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 40 ಸ್ಥಾನಗಳನ್ನು ಗೆಲ್ಲುವುದು ಕಷ್ಟ ಎಂದು ಪ್ರತಿಪಾದಿಸಿದ ಕೆಟಿಆರ್, ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷದ ಸೋಲಿನ ನಂತರ ಬಿಜೆಪಿಗೆ ನಿಷ್ಠೆಯನ್ನು ಬದಲಾಯಿಸಿದ ರಾಜ್ಯದ ಮೊದಲ ಕಾಂಗ್ರೆಸ್ ನಾಯಕ ರೇವಂತ್ ರೆಡ್ಡಿ ಆಗಲಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್​ ಹೈಕಮಾಂಡ್‌ಗೆ 2,500 ಕೋಟಿ ಕಳುಹಿಸಿದ್ದಾರೆ:ಲೋಕಸಭೆ ಚುನಾವಣೆಗೆ ಮುನ್ನ ಸಿಎಂ ರೇವಂತ್​ ರೆಡ್ಡಿ ದೆಹಲಿಯಲ್ಲಿರುವ ತಮ್ಮ ಪಕ್ಷದ ಹೈಕಮಾಂಡ್‌ಗೆ 2,500 ಕೋಟಿ ರೂ.ಗಳನ್ನು ಕಳುಹಿಸಿದ್ದಾರೆ ಎಂದು ಶಾಕಿಂಗ್​ ಹೇಳಿಕೆ ನೀಡಿದ್ದಾರೆ.ಮುಖ್ಯಮಂತ್ರಿ ರೆಡ್ಡಿ ಚುನಾವಣಾ ವೆಚ್ಚಕ್ಕಾಗಿ ದೆಹಲಿಯಲ್ಲಿರುವ ತಮ್ಮ ಪಕ್ಷದ ಹೈಕಮಾಂಡ್‌ಗೆ 2,500 ಕೋಟಿ ರೂ. ಹಣವನ್ನು ಕಳುಹಿಸಿದ್ದಾರೆ. ಜೇಬುಗಳ್ಳರಂತೆ ಮಾತನಾಡುವ ಮುಖ್ಯಮಂತ್ರಿ ನಮ್ಮಲ್ಲಿದ್ದಾರೆ, ಆದರೆ ರಾಜ್ಯದ ಜನರಿಗೆ ಸಮರ್ಥ ಆಡಳಿತವನ್ನು ನೀಡಲು ವಿಫಲರಾಗಿದ್ದಾರೆ ಎಂದು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದರು.
ರೇವಂತ್ ರೆಡ್ಡಿ ಅವರ ಸರ್ಕಾರದ ಭ್ರಷ್ಟಾಚಾರದಿಂದ ಸಾರ್ವಜನಿಕರ ಗಮನವನ್ನು ಬೇರೆಡೆ ಸೆಳೆಯಲು ರಾಜ್ಯದಲ್ಲಿ ಕಾಂಗ್ರೆಸ್ ಹಿಂದಿನ ಬಿಆರ್‌ಎಸ್ ಸರ್ಕಾರದ ಭ್ರಷ್ಟಾಚಾರದ ವಿಷಯವನ್ನು ಎತ್ತುತ್ತಿದೆ ಎಂದು ಕೆಟಿಆರ್ ಆರೋಪಿಸಿದರು.
ಉತ್ತರಪ್ರದೇಶ: ಚುನಾವಣಾ ಪ್ರಚಾರಕ್ಕೆ ಮಾರ್ಚ್ 30 ರಂದು ಪ್ರಧಾನಿ ಮೋದಿ ಚಾಲನೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + 7 =
Remember me
