ಕೋಲ್ಕತಾ:ಕಾಲೇಜಿನಲ್ಲಿ ನಡೆದಿರುವ ಹಣಕಾಸು ಅವ್ಯವಹಾರ ಮತ್ತು ಭ್ರಷ್ಟಾಚಾರದ ಆರೋಪದ ತನಿಖೆಗಾಗಿ ತಮ್ಮನ್ನು ಸಿಬಿಐ ಕಸ್ಟಡಿಗೆ ನೀಡಿರುವ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದಾರೆ. ಈ ಅರ್ಜಿ ವಿಚಾರಣೆ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠದ ಮುಂದೆ ಸೆಪ್ಟೆಂಬರ್ 6 ರಂದು ನಡೆಯಲಿದೆ.
ಇದನ್ನು ಓದಿ:ಭಯೋತ್ಪಾದಕರು ನನೆಗ ಈ ಶಾಲು ಕೊಟ್ಟರು… IC 814 ವಿಮಾನ ಹೈಜಾಕ್​​ ಕುರಿತು ಮಹಿಳೆ ಮಾತು
ಅಲಿಪುರದ ವಿಶೇಷ ಸಿಬಿಐ ನ್ಯಾಯಾಲಯದಲ್ಲಿ ಸಿಬಿಐ 10 ದಿನಗಳು ಕಸ್ಟಡಿಗೆ ನೀಡುವಂತೆ ಕೋರಿತ್ತು. ನಾವು ಕೇವಲ ನಾಲ್ಕು ಜನರನ್ನು ಬಂಧಿಸಿದ್ದೇವೆ. ಇಲ್ಲಿ ದೊಡ್ಡ ಅವ್ಯವಹಾರ ನಡೆದಿದೆ. ಅದನ್ನು ಸಂಪೂರ್ಣವಾಗಿ ಬಹಿರಂಗಪಡಿಸಲು ವಿಚಾರಣೆಗಾಗಿ ಅವರ ಕಸ್ಟಡಿ ಅಗತ್ಯವಿದೆ ಎಂದು ತಿಳಿಸಿತ್ತು. ಸಿಬಿಐ ಪರ ವಕೀಲರ ವಾದವನ್ನು ಆಲಿಸಿದ ಪೀಠವು ಸಂದೀಪ್ ಘೋಷ್ ಮತ್ತು ಇತರ ಮೂವರನ್ನು ಎಂಟು ದಿನಗಳ ಕಾಲ ಸಿಬಿಐ ಕಸ್ಟಡಿಗೆ ಒಪ್ಪಿಸಿತು.
ಘೋಷ್ ಬಂಧನದ ಒಂದು ಗಂಟೆಯ ನಂತರ ಸಿಬಿಐ ಅಧಿಕಾರಿಗಳು ಆಗಸ್ಟ್ 9ರಂದು ಮಹಿಳಾ ವೈದ್ಯೆಯ ಶವ ಪತ್ತೆಯಾದ ಆಸ್ಪತ್ರೆಗೆ ಸಾಮಗ್ರಿಗಳನ್ನು ಪೂರೈಸುತ್ತಿದ್ದ ಅವರ ಭದ್ರತಾ ಸಿಬ್ಬಂದಿ ಮತ್ತು ಇಬ್ಬರು ಮಾರಾಟಗಾರರನ್ನು ಬಂಧಿಸಿದ್ದಾರೆ. ಘೋಷ್ ಅವರ ಭದ್ರತಾ ಸಿಬ್ಬಂದಿ ಅಫ್ಸರ್ ಅಲಿ (44), ಮಾರಾಟಗಾರರಾದ ಬಿಪ್ಲವ್ ಸಿಂಘಾ (52) ಮತ್ತು ಸುಮನ್ ಹಜಾರಾ (46) ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.
ಆರ್‌ಜಿ ಕರ್​​ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಪ್ರೊ (ಡಾ) ಸಂದೀಪ್ ಘೋಷ್ ವಿರುದ್ಧ ನಡೆಯುತ್ತಿರುವ ಕ್ರಿಮಿನಲ್ ತನಿಖೆಯ ಆಧಾರದ ಮೇಲೆ ಪಶ್ಚಿಮ ಬಂಗಾಳ ಸೇವೆಗಳ ನಿಯಮ 7(1ಸಿ) ಅಡಿಯಲ್ಲಿ ಡಾ. ಘೋಷ್ ಅವರನ್ನು ಅಮಾನತುಗೊಳಿಸಲಾಗಿದೆ.(ಏಜೆನ್ಸೀಸ್​​)
ಗೂಢಚಾರಿಕೆ ತಿಮಿಂಗಿಲ ಶವವಾಗಿ ಪತ್ತೆ; ‘ಹ್ವಾಲ್ಡಿಮಿರ್’​ ನಿಗೂಢ ಸಾವಿನ ಬಗ್ಗೆ ರಷ್ಯಾ ಮೌನವಾಗಿರುವುದೇಕೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × four =
Remember me
