ಮುಂಬೈ:ಬಾಲಿವುಡ್​ ನಟ ಸುಶಾಂತ್​ ಸಿಂಗ್ ರಾಜಪೂತ್ ಅವರ ನಿಗೂಢ ಸಾವು ಪ್ರಕರಣದ ತನಿಖೆ ಮತ್ತೊಮ್ಮೆ ಚರ್ಚೆಗೆ ಬಂದಿದೆ. ಸುಶಾಂತ್ ಸಾವಿಗೆ ಸಂಬಂಧಿಸಿದಂತೆ ರಿಯಾ ಚಕ್ರವರ್ತಿ ಹಾಗೂ ಆಕೆಯ ಸಹೋದರ ಶೋವಿಕ್​ ಚಕ್ರವರ್ತಿ ವಿರುದ್ಧ ಎನ್​ಸಿಬಿ ನ್ಯಾಯಾಲಯಕ್ಕೆ ವರದಿಯನ್ನು ಸಲ್ಲಿಸಿದೆ.
ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿರುವ ರಿಯಾ, ಸುಶಾಂತ್ ಸಿಂಗ್​ ಅವರನ್ನು ಪ್ರೀತಿಸಿದ್ದೇ ಅಪರಾಧವಾಯಿತು ಎಂಬಂತೆ ನನ್ನನ್ನು ಬಿಂಬಿಸಲಾಯಿತು, ಪ್ರೀತಿಸುವುದು ಅಪರಾಧನಾ ಎಂದು ಪ್ರಶ್ನಿಸಿದ್ದಾರೆ.
ನನ್ನನ್ನು ಟಾರ್ಗೆಟ್​ ಮಾಡಲಾಗುತ್ತಿದೆ. ನಾವಿಬ್ಬರು ಪ್ರೀತಿಸಿದ್ದು ನಿಜಸಂಗತಿಯಾದರೂ, ಇದಕ್ಕಾಗಿಯೇ ಜನರು ನನ್ನನ್ನು ನಿಂದಿಸಿದರು, ಆದರೆ ಅವರನ್ನು ಪ್ರೀತಿಸಿರುವುದಕ್ಕೆ ನನಗೆ ವಿಷಾದವಿಲ್ಲ.ಯಾರನ್ನಾದರೂ ಪ್ರೀತಿಸುವುದು ಅತ್ಯಂತ ಅಪರಾಧವಾಗಿದೆ. ಈ ಪ್ರಕರಣದಲ್ಲಿ ಸಂಬಂಧಪಟ್ಟವರನ್ನು ಇನ್ನೂ ಬಂಧಿಸಿಲ್ಲ ಎಂದು ಹೇಳಿಕೊಂಡಿದ್ದಾರೆ.
ಇತ್ತ ಬುಧವಾರ ಎನ್​ಸಿಬಿ ವಿಶೇಷ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದು, ಇದರಲ್ಲಿ ಸುಶಾಂತ್​ಸಿಂಗ್​​ಗೆ ಮಾದಕ ಪದಾರ್ಥ ನೀಡಿದ ಆರೋಪ ಕುರಿತು ಉಲ್ಲೇಖಿಸಲಾಗಿದ್ದು, ಕೆಲವರು ಆರೋಪ ಮುಕ್ತರಾಗಿದ್ದು, ಅವರನ್ನು ಮುಕ್ತಗೊಳಿಸುವಂತೆ ನ್ಯಾಯಾಲಯಕ್ಕೆ ನೀಡಿರುವ ವರದಿಯಲ್ಲಿ ಹೇಳಲಾಗಿದೆ ಎಂದು ತಿಳಿದುಬಂದಿದೆ. ಆದರೆ ಆ ಹೆಸರನ್ನು ಎನ್​ಸಿಬಿ ಬಹಿರಂಗಪಡಿಸಿಲ್ಲ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 1 =
Remember me
