ದೆಹಲಿ ಬಿಜೆಪಿ ಸಂಸದಮನೋಜ್ ತಿವಾರಿ ಅವರ ಪುತ್ರಿ ರಿಹಿತಿ ತಿವಾರಿ ಇದೀಗ ಕಮಲ ಸೇರ್ಪಡೆಯಾಗಿದ್ದು, ತನ್ನನ್ನು ಪಕ್ಷಕ್ಕೆ ಆಯ್ಕೆ ಮಾಡಿಕೊಂಡ ಬಿಜೆಪಿ ರಾಷ್ಟ್ರಾಧ್ಯಕ್ಷರಾದ ಜೆ.ಪಿ. ನಡ್ಡಾ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಭಗವಂತನ ಪ್ಲ್ಯಾನ್ ಏನಿತ್ತು ಎಂಬುದು ಈಗ ತಿಳಿಯುತ್ತಿದೆ ಎಂದು ರಿಹಿತಿ ತಮ್ಮ ಸಂತಸವನ್ನು ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ವಿಜಯವಾಣಿ ಪ್ರಾಪರ್ಟಿ ಎಕ್ಸ್​ಪೋಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಭೇಟಿ
“ಈ ಹಿಂದೆ ನಾನು ಎನ್​ಜಿಓದಲ್ಲಿ ಕೆಲಸ ಮಾಡುತ್ತಿದ್ದೆ, ಮೂಲತಃ ನಾನೊಬ್ಬಳು ಗಾಯಕಿ ಹಾಗೂ ಸಾಹಿತಿ. ಜೀವನದಲ್ಲಿ ಸಮಾಜ ಸೇವೆ ಮಾಡಬೇಕು ಎಂಬ ಆಸೆಯನ್ನು ಹೊತ್ತಿದ್ದೆ. ಆದರೆ, ಅದು ಈ ರೀತಿ ಈಡೇರುತ್ತದೆ ಎಂದು ಊಹಿಸಿರಲಿಲ್ಲ. ದೇವರ ಪ್ಲ್ಯಾನ್ ಏನಿತ್ತು ಎಂಬುದರ ಅರಿವಿಲ್ಲದ ನನಗೆ, 10-15 ವರ್ಷಗಳ ಬಳಿಕ ಈ ಮಹತ್ವದ ಬದಲಾವಣೆ ನಡೆಯುತ್ತದೆ ಎಂಬುದು ಆತನ ಲೆಕ್ಕಾಚಾರವಾಗಿತ್ತು ಎಂದು ಈಗ ಗೊತ್ತಾಯಿತು” ಎಂದಿದ್ದಾರೆ.
“ನಿಜಕ್ಕೂ ಈ ವಿಷಯ ಕೇಳಿ ನನಗೆ ಶಾಕ್ ಆಗಿದೆ. ನನ್ನಲ್ಲಿ ಯಾವುದೋ ವಿಷಯವನ್ನು ಗಮನಿಸಿ, ಪಕ್ಷಕ್ಕೆ ಆಯ್ಕೆ ಮಾಡಿಕೊಂಡ ಜೆ.ಪಿ. ನಡ್ಡಾ ಅವರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು. ನನ್ನ ಮೇಲಿಟ್ಟಿರುವ ಭರವಸೆಯನ್ನು ಖಂಡಿತ ನಿರಾಸೆ ಮಾಡುವುದಿಲ್ಲ” ಎಂದು ರಿಹಿತಿ ಹೇಳಿದ್ದಾರೆ,(ಏಜೆನ್ಸೀಸ್).
5 ರೂ. ಪಾರ್ಲೆ-ಜಿ ಬಿಸ್ಕತ್​ ಬೆಲೆ ದುಬೈ, ಪಾಕಿಸ್ತಾನ ರಾಷ್ಟ್ರಗಳಲ್ಲಿ ಎಷ್ಟಿದೆ ಗೊತ್ತಾ? ಕೇಳಿದ್ರೆ ದಂಗಾಗ್ತೀರಾ!

ಈತ ಕ್ರೀಸ್​ಗೆ ಬಂದ್ರೆ ಬೌಲರ್​ಗಳೇ ಬೆವರುತ್ತಾರೆ! ಅಜಯ್​ ಜಡೇಜಾ ಹೆಸರಿಸಿದ ಸ್ಟಾರ್​ ಬ್ಯಾಟ್ಸ್​ಮನ್ ಇವರೇ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + 16 =
Remember me
