ಮುಂಬೈ:ಮಹಾರಾಷ್ಟ್ರದಲ್ಲಿ ಆನ್​ಲೈನ್ ಶಾಪಿಂಗ್ ಫ್ರಾಡ್ ಪ್ರಕರಣಗಳು ಹೆಚ್ಚುತ್ತಿದ್ದು, ಈ ಬಗ್ಗೆ ನಾಗರೀಕರು ಎಚ್ಚರಿಕೆಯಿಂದ ಇರುವಂತೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ರಾಜ್ಯದ ಗೃಹ ಸಚಿವ ಅನಿಲ್ ದೇಶಮುಖ್ ಹೇಳಿದ್ದಾರೆ. ಈ ಬಗ್ಗೆ ರಾಜ್ಯ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಕಾಂಗ್ರೆಸ್​​ನ ಸುಧೀರ್ ತಂಬೆ ಮತ್ತು ಇತರರು ಕೇಳಿದ ಸ್ಟಾರ್ಡ್​ ಪ್ರಶ್ನೆಗೆ ಸಚಿವರು ಲಿಖಿತ ಪ್ರತಿಕ್ರಿಯೆ ನೀಡಿದ್ದಾರೆ.
2020ರ ವರ್ಷದಲ್ಲಿ ಇ-ಕಾಮರ್ಸ್ ಜಿ ವಹಿವಾಟಿನಲ್ಲಿ ವಂಚನೆಗೊಳಗಾದ ನಾಗರಿಕರಿಂದ ಬಂದ ದೂರುಗಳ ಮೇಲೆ ಪುಣೆಯಲ್ಲೇ 1,370 ದೂರುಗಳು ದಾಖಲಾಗಿವೆ. ಮಹಾರಾಷ್ಟ್ರದಾದ್ಯಂತ ಒಟ್ಟು 2,276 ಆನ್​ಲೈನ್ ಶಾಪಿಂಗ್ ವಂಚನೆ ಪ್ರಕರಣಗಳನ್ನು ಪೊಲೀಸರು ದಾಖಲಿಸಿದ್ದಾರೆ ಎಂದು ದೇಶಮುಖ್ ತಿಳಿಸಿದ್ದಾರೆ.
ಇದನ್ನೂ ಓದಿ:ರಾಜಕಾರಣಿಗಳ, ಪೊಲೀಸ್ ಅಧಿಕಾರಿಗಳ ನಕಲಿ ಖಾತೆ ಮಾಡಿದ್ದ, ಹಣ ಪಡೆಯುತ್ತಿದ್ದ !
ರಾಜ್ಯದ ಗೃಹ ಇಲಾಖೆ ‘ಮಹಾರಾಷ್ಟ್ರ ಸೈಬರ್ ಕಛೇರಿ’ಯ ಮೂಲಕ ಆನ್‌ಲೈನ್ ವಹಿವಾಟು ನಡೆಸುವಾಗ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ನಾಗರಿಕರಲ್ಲಿ ಜಾಗೃತಿ ಮೂಡಿಸಿ, ವಂಚನೆಯ ನಿದರ್ಶನಗಳನ್ನು ಕಡಿಮೆ ಮಾಡಲು ಪ್ರಯತ್ನಿಸುತ್ತಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ, ಮುಖ್ಯವಾಹಿನಿಯ ಪ್ರೆಸ್ ಮತ್ತು ತನ್ನದೇ ಆದ ವೆಬ್‌ಸೈಟ್‌ಗಳ ಮೂಲಕ ಜಾಗೃತಿ ಅಭಿಯಾನವನ್ನು ನಡೆಸಲಾಗುತ್ತಿದೆ ಎಂದು ದೇಶಮುಖ್ ಹೇಳಿದ್ದಾರೆ.
ಮಹಾರಾಷ್ಟ್ರದ ವಿವಿಧ ಜಿಲ್ಲೆಗಳಲ್ಲಿ 46 ಸೈಬರ್ ಲ್ಯಾಬ್‌ಗಳನ್ನು ಗೃಹ ಇಲಾಖೆ ಸ್ಥಾಪಿಸಿದ್ದು, ಈ ಪೈಕಿ 43 ಕ್ಕೆ ಪೊಲೀಸ್ ಠಾಣೆಯ ಸ್ಥಾನಮಾನ ನೀಡಲಾಗಿದೆ. ಈ ಸೈಬರ್ ಲ್ಯಾಬ್‌/ಸೈಬರ್ ಪೊಲೀಸ್ ಠಾಣೆಗಳಿಗೆ ಆನ್‌ಲೈನ್ ವಂಚನೆಯನ್ನು ಎದುರಿಸಲು ಅತ್ಯಾಧುನಿಕ ಸಾಫ್ಟ್‌ವೇರ್ ಮತ್ತು ಹಾರ್ಡ್‌ವೇರ್ ಪರಿಕರಗಳನ್ನು ಒದಗಿಸಲಾಗಿದೆ. ಅಧಿಕಾರಿಗಳಿಗೆ ಸೈಬರ್ ಅಪರಾಧ ಪ್ರಕರಣಗಳನ್ನು ಭೇದಿಸುವ ತಂತ್ರಗಳಲ್ಲಿ ವಿಶೇಷ ತರಬೇತಿ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.(ಏಜೆನ್ಸೀಸ್)
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

“ಬರೀ ಯೂನಿಫಾರಂ ಧರಿಸಿದರೆ ಸಾಲಲ್ಲ”…. ಅಂತ ಸೇನಾ ತರಬೇತಿಯ ರುಚಿ ನೋಡುತ್ತಿರುವ ಕಂಗನಾ!
ತವರಿಗೆ ಹೋಗುವ ಬಗ್ಗೆ ವಾಗ್ವಾದ : ಮಕ್ಕಳನ್ನು ಕೊಂದು ಸಾವಿಗೆ ಶರಣಾದ ಮಹಿಳೆ


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + nineteen =
Remember me
