ಮೊಹಾಲಿ:ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ-20 ಪಂದ್ಯದಲ್ಲಿ ವಿಕೆಟ್ ಕೀಪರ್/ಬ್ಯಾಟ್ಸ್​ಮನ್ ಆಗಿ ಹಿರಿಯ ಆಟಗಾರ ದಿನೇಶ್ ಕಾರ್ತಿಕ್ ಸ್ಥಾನ ಪಡೆದುಕೊಂಡಿದ್ದಾರೆ. ಐಪಿಎಲ್​ನಲ್ಲಿ ಆರ್​​ಸಿಬಿ ತಂಡದ ಪರವಾಗಿ ಅದ್ಭುತ ನಿರ್ವಹಣೆ ತೋರಿದ್ದ ದಿನೇಶ್​ ಕಾರ್ತಿಕ್ ಮತ್ತೆ ಭಾರತ ತಂಡಕ್ಕೆ ಕಂಬ್ಯಾಕ್ ಮಾಡಿದ್ದರು. ಇದರಿಂದ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದುಕೊಳ್ಳಲು ರಿಷಬ್ ಪಂತ್ ಹಾಗೂ ದಿನೇಶ್​​ ಕಾರ್ತಿಕ್ ನಡುವೆ ತೀವ್ರವಾದ ಪೈಪೋಟಿ ಏರ್ಪಟ್ಟಿತ್ತು.
ಇದೀಗ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ-20 ಪಂದ್ಯದಲ್ಲಿ ಬಲಗೈ ಬ್ಯಾಟ್ಸ್​ಮನ್​ ಆಗಿರುವ ದಿನೇಶ್ ಕಾರ್ತಿಕ್ ವಿಕೆಟ್ ಕೀಪಿಂಗ್ ಜವಾಬ್ದಾರಿ ಹೊತ್ತು ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ.
ಏಷ್ಯಾಕಪ್​ ವೇಳೆ ಗಾಯದಿಂದಾಗಿ ಆಲ್​ರೌಂಡರ್ ರವೀಂದ್ರ ಜಡೇಜಾ ತಂಡದಿಂದ ಹೊರನಡೆದಿದ್ದರು. ಇದೀಗ ಅವರ ಜವಾಬ್ದಾರಿಯನ್ನು ಅಕ್ಷರ್ ಪಟೇಲ್​ಗೆ ವಹಿಸಲಾಗಿದೆ. ಇದೀಗ ದಿನೇಶ್ ಕಾರ್ತಿಕ್ ಆಯ್ಕೆಯಿಂದಾಗಿ ರಿಷಬ್ ಪಂತ್ ಹೊರಗುಳಿದಿದ್ದಾರೆ. ಹೀಗಾಗಿ ಅಕ್ಷರ್ ಪಟೇಲ್ ತಂಡದಲ್ಲಿರುವಏಕೈಕ ಎಡಗೈ ಬ್ಯಾಟ್ಸ್​ಮನ್.
ಮೊದಲ ಟಿ-20 ಪಂದ್ಯದಲ್ಲಿ ಟಾಸ್​ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. (ಏಜೆನ್ಸೀಸ್)
ಭಾರತ ತಂಡ: ರೋಹಿತ್ ಶರ್ಮ(ನಾಯಕ), ಕೆ.ಎಲ್. ರಾಹುಲ್ (ಉಪ ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯಾ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಯಜುವೇಂದ್ರ ಚಹಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಉಮೇಶ್​ ಯಾದವ್.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − twelve =
Remember me
