ಲಖನೌ:ಮಹತ್ತರ ಬೆಳವಣಿಗೆ ಒಂದರಲ್ಲಿ ವಿಪಕ್ಷಗಳ ಮೈತ್ರಿಕೂಟ ಇಂಡಿಯಾವನ್ನು ತೊರೆದು ಎನ್​ಡಿಎ ಸೇರುವುದಾಗಿ ರಾಷ್ಟ್ರೀಯ ಲೋಕದಳದ ಮುಖ್ಯಸ್ಥ ಹಾಗೂ ಉತ್ತರಪ್ರದೇಶದ ಪ್ರಭಾವಿ ಜಾಟ್​ ನಾಯಕ ಜಯಂತ್​ ಚೌಧರಿ ಘೋಷಿಸಿದ್ದಾರೆ.
ಮಾಜಿ ಪ್ರಧಾನಿ ಚೌಧರಿ ಚರಣ್​ ಸಿಂಗ್​ ಅವರಿಗೆ ಭಾರತ ರತ್ನ ಪ್ರಶಸ್ತಿ ಘೋಷಿಸಿದ ಕೆಲವೇ ಕ್ಷಣಗಳಲ್ಲಿ ಈ ಬೆಳವಣಿಗೆ ನಡೆದಿದ್ದು, ಇಂಡಿಯಾ ಮೈತ್ರಿಕೂಟಕ್ಕೆ ದೊಡ್ಡ ಹೊಡೆತ ಬಿದ್ದಿದೆ ಎಂದು ಹೇಳಬಹುದಾಗಿದೆ.
#WATCH| When asked if he is ready to join hands with BJP-NDA, RLD chief Jayant Chaudhary says, "Koi kasar rehti hai? Aaj main kis muh se inkaar karoon aapke sawalon ko."pic.twitter.com/6dTo21wzk6
ಇದನ್ನೂ ಓದಿ:ಮಾಂಸಹಾರ ಸೇವಿಸಿ ಸುತ್ತೂರು ಮಠಕ್ಕೆ ಭೇಟಿ; ಸಿಎಂ ಸಿದ್ದರಾಮಯ್ಯ ಕೊಟ್ಟ ಸ್ಪಷ್ಟನೆ ಹೀಗಿದೆ
ಈ ಕುರಿತು ಮಾತನಾಡಿರುವ ರಾಷ್ಟ್ರೀಯ ಲೋಕದಳದ ಮುಖ್ಯಸ್ಥ ಜಯಂತ್​ ಚೌಧರಿ, ನನ್ನ ಪಾಲಿಗೆ ಇದು ಭಾವನಾತ್ಮಕ ಕ್ಷಣವಾಗಿದ್ದು, ರಾಷ್ಟ್ರಪತಿ, ಭಾರತ ಸರ್ಕಾರ ಮತ್ತು ವಿಶೇಷವಾಗಿ ಪ್ರಧಾನಿ ಮೋದಿಯವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ. ಏಕೆಂದರೆ ಈ ನಿರ್ಧಾರವು ಅವರ ದೂರದೃಷ್ಟಿಯ ಒಂದು ಭಾಗವಾಗಿದೆ. ಚೌಧರಿ ಚರಣ್ ಸಿಂಗ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿರುವುದು ದೇಶದಾದ್ಯಂತ ದೊಡ್ಡ ಸಂದೇಶವನ್ನು ರವಾನಿಸಿದೆ ಎಂದು ಹೇಳಿದ್ದಾರೆ.
ನಮ್ಮ ತಾತನವರಿಗೆ (ಚೌಧರಿ ಚರಣ್​ ಸಿಂಗ್) ಭಾರತ ರತ್ನ ಘೋಷಿಸುವ ಮೂಲಕ ಬಿಜೆಪಿ ನಮ್ಮ ಮನ ಗೆದ್ದಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಕೈ ಜೋಡಿಸಲು ನಾವು ಸಿದ್ದರಿದ್ದು, ಬೇಡ ಎಂದು ಹೇಳಲು ಸಾಧ್ಯವಿಲ್ಲ. ಅದರಂತೆ ಉತ್ತರಪ್ರದೇಶದಲ್ಲಿ 2 ಲೋಕಸಭೆ ಹಾಗೂ ಒಂದು ರಾಜ್ಯಸಭೆ ಸ್ಥಾನವನ್ನು ನೀಡಲು ಬಿಜೆಪಿ ನಾಯಕರು ಸಿದ್ದರಿದ್ದು, ಮತ್ತೊಂದು ಸುತ್ತಿನ ಮಾತುಕತೆ ನಡೆದ ಬಳಿಕ ಘೋಷಣೆ ಮಾಡಲಾಗುವುದು ಎಂದು ರಾಷ್ಟ್ರೀಯ ಲೋಕದಳದ ಮುಖ್ಯಸ್ಥ ಜಯಂತ್​ ಚೌಧರಿ ತಿಳಿಸಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:six + eight =
Remember me
