ನವದೆಹಲಿ:ಮುಂದಿನ ಕೆಲವೇ ದಿನಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಇಗಾಗಲೇ ತಯಾರಿ ಆರಂಭಿಸಿರುವ ವಿಪಕ್ಷಗಳ ಮೈತ್ರಿಕೂಟ ಇಂಡಿಯಾಗೆ ಯಾಕೋ ಒಂದರ ಹಿಂದೆ ಒಂದರಂತೆ ಆಘಾತ ಎದುರಾಗುತ್ತಿದೆ. ಮಹತ್ವದ ಬೆಳವಣಿಗೆ ಒಂದರಲ್ಲಿ ರಾಷ್ಟ್ರೀಯ ಲೋಕದಳ (RLD) ಬಿಜೆಪಿ ನೇತೃತ್ವದ ಎನ್​ಡಿಎ ಸೇರ್ಪಡೆಯಾಗುವ ಮೂಲಕ ಇಂಡಿಯಾ ಒಕ್ಕೂಟಕ್ಕೆ ಮತ್ತೊಂದು ಹಿನ್ನಡೆಯಾದಂತಾಗಿದೆ.
ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ ಕೆಲವೇ ಕ್ಷಣಗಳಲ್ಲಿ ಈ ಮಹತ್ವದ ಬೆಳವಣಿಗೆ ನಡೆದಿದ್ದು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಇದು ದೊಡ್ಡ ಹಿನ್ನಡೆಯಾಗಿ ಪರಿಣಮಿಸಬಹುದು ಎಂದು ಹೇಳಲಾಗಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಆರ್​ಎಲ್​ಡಿ ಪಕ್ಷದ ಅಧ್ಯಕ್ಷ ಜಯಂತ್ ಚೌಧರಿ ಅವರೊಂದಿಗೆ ಸಭೆ ನಡೆಯಿತು. ಎನ್‌ಡಿಎ ಕುಟುಂಬಕ್ಕೆ ಸೇರುವ ಜಯಂತ್ ನಿರ್ಧಾರವನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಅಭಿವೃದ್ಧಿ ಹೊಂದಿದ ಭಾರತದ ಪ್ರಯಾಣ ಮತ್ತು ಉತ್ತರ ಪ್ರದೇಶದ ಅಭಿವೃದ್ಧಿಯಲ್ಲಿ ನೀವು ಪ್ರಮುಖ ಕೊಡುಗೆ ನೀಡುತ್ತೀರಿ. ಈ ಬಾರಿ ಎನ್​​ಡಿಎ 400 ಸೀಟು ದಾಟುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
आज माननीय गृहमंत्री श्री@amitshahजी की उपस्थिति में@RLDpartyके अध्यक्ष@jayantrldजी से मुलाक़ात हुई। मैं उनके एनडीए परिवार में शामिल होने के निर्णय का हृदय से स्वागत करता हूँ। आदरणीय@narendramodiजी के नेतृत्व में विकसित भारत की यात्रा और उत्तर प्रदेश के विकास में आप…pic.twitter.com/3cJtQ9sS03
ರಾಷ್ಟ್ರೀಯ ಲೋಕದಳದ ಅಧ್ಯಕ್ಷರಾದ ಜಯಂತ್ ಅವರನ್ನು ನಾನು NDA ಕುಟುಂಬಕ್ಕೆ ಸ್ವಾಗತಿಸುತ್ತೇನೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೀತಿಗಳಲ್ಲಿ ವಿಶ್ವಾಸವನ್ನು ಇಟ್ಟುಕೊಂಡಿದ್ದಾರೆ. ಅವರು ಎನ್​ಡಿಎಗೆ ಸೇರ್ಪಡೆಯಿಂದ ರೈತರು, ಬಡವರು ಮತ್ತು ವಂಚಿತ ವರ್ಗಗಳ ಉನ್ನತಿಗಾಗಿ ತೊಟ್ಟಿರುವ ನಮ್ಮ ಸಂಕಲ್ಪವನ್ನು ಇನ್ನಷ್ಟು ಬಲ ಸಿಕ್ಕಂತಾಗಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ 400 ದಾಟಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್​ ಷಾ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.
ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟಕ್ಕೆ ಸೇರ್ಪಡೆಗೊಳ್ಳುವುದಾಗಿ ಫೆಬ್ರವರಿ 13ರಂದು ಆರ್​ಎಲ್​ಡಿ ಅಧ್ಯಕ್ಷ ಜಯಂತ್​ ಚೌಧರಿ ಘೋಷಿಸಿದ್ದರು. ಜನರಿಗೆ ಒಳ್ಳೆಯದನ್ನು ಮಾಡುವ ಉದ್ದೇಶದಿಂದ ಈ ನಿರ್ಧಾರವನ್ನು ತೆಗೆದುಕೊಂಡಿದ್ಧೇವೆ. ಪಕ್ಷದ ಎಲ್ಲಾ ಶಾಸಕರು ಮತ್ತು ಕಾರ್ಯಕರ್ತರೊಂದಿಗೆ ಮಾತನಾಡಿದ ನಂತರ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ ಎಂದು ಸ್ಪಷ್ಟಪಡಿಸಿದರು.
राष्ट्रीय लोकदल के अध्यक्ष श्री@jayantrldजी का एनडीए परिवार में स्वागत करता हूँ।प्रधानमंत्री श्री@narendramodiजी की नीतियों में विश्वास प्रकट करते हुए उनके एनडीए में आने से किसान, गरीब और वंचित वर्ग के उत्थान के हमारे संकल्प को और बल मिलेगा।आगामी लोकसभा चुनाव में एनडीए…pic.twitter.com/o6rjkiWId6
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:three × three =
Remember me
