ಜೈಪುರ:ಟ್ರಕ್​ ಮತ್ತು ಜೀಪ್​ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 7 ಮಂದಿ ಮೃತಪಟ್ಟು ಅನೇಕರು ಗಾಯಗೊಂಡಿರುವ ಘಟನೆ ರಾಜಸ್ಥಾನದ ಚಿತ್ತೋರ್​ಗಢ ಜಿಲ್ಲೆಯಲ್ಲಿ ಶನಿವಾರ ರಾತ್ರಿ ನಡೆದಿದೆ.
ಸುಧಾಲ್ಖೇರಾ ಬಳಿಯ ಉದಯ್​ಪುರ್​-ನಿಂಬಾಹೇರಾ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಈ ಬಗ್ಗೆ ಮಾಹಿತಿ ನೀಡಿರುವ ಚಿತ್ತೋರ್​ಗಢ ಜಿಲ್ಲಾಧಿಕಾರಿ ಕಿಶೋರ್​ ಕುಮಾರ್​ ಶರ್ಮಾ, ಅಪಘಾತದಲ್ಲಿ ಏಳು ಮಂದಿ ಸಾವಿಗೀಡಾಗಿ, ಅನೇಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರ ಗಾಯದಿಂದ ತೀವ್ರ ರಕ್ತಸ್ರಾವವಾಗಿ ಕೆಲ ಸಮಯದ ಬಳಿಕ ಅಸುನೀಗಿದರು. ಗಂಭೀರವಾಗಿ ಗಾಯಗೊಂಡು 9 ಮಂದಿಯನ್ನು ವಿವಿಧ ಆಸ್ಪತ್ರೆಗಳಿಗೆ ಕರೆದೊಯ್ಯಲಾಯಿತು ಎಂದು ಚಿತ್ತೋರ್​ಗಢ ಪೊಲೀಸ್​ ವರಿಷ್ಠಾಧಿಕಾರಿ ದೀಪಕ್​ ಭಾರ್ಗವ್​ ಹೇಳಿದ್ದಾರೆ.
ಇದನ್ನೂ ಓದಿ:ನಿಲ್ಲದ ಮುಷ್ಕರ ಸದ್ಯಕ್ಕಿಲ್ಲ ಪರಿಹಾರ: ಇಂದೂ ರಸ್ತೆಗಿಳಿಯಲ್ಲ ಸರ್ಕಾರಿ ಬಸ್​ಗಳು?
ಅಪಘಾತದ ಬಗ್ಗೆ ಪ್ರಧಾನಿ ಮೋದಿ ಟ್ವೀಟ್​ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ. ಚಿತ್ತೋರ್​ಗಢದ ನಿಕುಂಭ್​ನಲ್ಲಿ ಸಂಭವಿಸಿದ ಅಪಘಾತದಲ್ಲಿ ಕೆಲವರು ಪ್ರಾಣ ಕಳೆದುಕೊಂಡಿರುವ ಬಗ್ಗೆ ನನಗೆ ನೋವಿದೆ. ಈ ದುಃಖದ ಸಮಯದಲ್ಲಿ ನನ್ನ ಆಲೋಚನೆಗಳು ದುಃಖಿತ ಕುಟುಂಬದ ಜತೆ ಇವೆ. ಗಾಯಗೊಂಡವರು ಬೇಗ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆಂದು ಪ್ರಧಾನಿ ತಿಳಿಸಿದ್ದಾರೆ.
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್​ ಸಹ ಸಂತಾಪ ಸೂಚಿಸಿದ್ದು, ದುಃಖಿತ ಕುಟುಂಬಗಳಿಗೆ ನಾನು ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಬಯಸುತ್ತೇನೆಂದು ಟ್ವೀಟ್​ ಮಾಡಿದ್ದಾರೆ.(ಏಜೆನ್ಸೀಸ್​)
https://www.vijayavani.net/central-govt-plans-to-vaccinated-to-30-crore-indians-in-8-months/
ರೋಹಿತ್ ಶರ್ಮ ಆಸ್ಟ್ರೇಲಿಯಾಕ್ಕೆ ಹೋದರೂ ಟೆಸ್ಟ್ ಆಡುವುದು ಖಚಿತವಿಲ್ಲ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − 5 =
Remember me
