ಲಕ್ನೋ:ನಿರಂತರ ಸುರಿದ ಮಳೆಯಿಂದ 20 ಅಡಿ ಆಳಕ್ಕೆ ಕುಸಿದು ಹೋದ ಮುಖ್ಯರಸ್ತೆಯ ದೃಶ್ಯ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಘಟನೆಯನ್ನು ಪ್ರತ್ಯಕ್ಷವಾಗಿ ಕಂಡ ಸ್ಥಳೀಯರು ಕೆಲ ಸಮಯ ಒಂದಿಚು ಕದಲ್ಲದೇ ಅಲ್ಲಿಯ ನಿಂತಿದ್ದರು. ಈ ಘಟನೆ ಉತ್ತರಪ್ರದೇಶದ ಲಕ್ನೋದ ವಿಕಾಸ್ ನಗರದಲ್ಲಿ ವರದಿಯಾಗಿದೆ.
ಇದನ್ನೂ ಓದಿ:ಆಧುನಿಕ ಜ್ಞಾನದೊಂದಿಗೆ ಪ್ರಾಚೀನ ಜ್ಞಾನ ಸಮ್ಮಿಳಿಸಿ ಶಿಕ್ಷಣ ನೀಡುವುದು ಅಗತ್ಯ: ಲೇಖಕಿ ಸಹನಾ ಸಿಂಗ್​ ಅಭಿಮತ
ರಸ್ತೆಯ ಮಧ್ಯದಲ್ಲಿರುವ ದೊಡ್ಡ ಗುಂಡಿಗೆ ಕಾರೊಂದು ಸಿಲುಕಿದ್ದು, ಅದರ ವೀಡಿಯೊ ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ಹರಿದಾಡಿದೆ. ಮಳೆಯ ಆರ್ಭಟಕ್ಕೆ ಕುಸಿದ ಬೃಹತ್ ಗುಂಡಿ 30 ಅಡಿ ಅಗಲ ಮತ್ತು 20 ಅಡಿ ಆಳವಿದೆ ಎಂದು ವರದಿಯಾಗಿದೆ. ಸ್ಥಳೀಯರ ಪ್ರಕಾರ, ಮಧ್ಯಾಹ್ನ 2.30ರ ಸುಮಾರಿಗೆ ಈ ಘಟನೆ ಸಂಭವಿಸಿದೆ.
Like a crater hit the main road in Vikas Nagar, Lucknow.pic.twitter.com/dvT2JEtyGO
— Piyush Rai (@Benarasiyaa)March 3, 2024

ಘಟನೆಯ ಹಿನ್ನೆಲೆ ಲಕ್ನೋ ಮುನ್ಸಿಪಲ್ ಕಾರ್ಪೊರೇಷನ್ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ, ಕಾರನ್ನು ಮೇಲಕ್ಕೆತ್ತಿದ್ದಾರೆ. ಕುಸಿತದಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳು ವರದಿಯಾಗಿಲ್ಲ. ಲೋಕೋಪಯೋಗಿ ಇಲಾಖೆ, ರಸ್ತೆ ಕುಸಿತದ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಹೇಳಿದೆ. ಮುಂದೆ ನಡೆಯಬಹುದಾದ ಭಾರೀ ಅನಾಹುತಗಳನ್ನು ತಪ್ಪಿಸಲು ಬೃಹತ್ ಗುಂಡಿಗೆ ಅಧಿಕಾರಿಗಳು ಬ್ಯಾರಿಕೇಡ್ ಹಾಕಿ, ವಾಹನ ಸವಾರರಿಗೆ ಎಚ್ಚರಿಸಿದ್ದಾರೆ,(ಏಜೆನ್ಸೀಸ್).
ಮದುವೆಗೂ ಮುನ್ನ ಆರೋಗ್ಯ ಸಮಸ್ಯೆ ತೋಡಿಕೊಂಡ ಅನಂತ್​; ಮಗನ ಮಾತಿಗೆ ಕಣ್ಣೀರಿಟ್ಟ ಮುಖೇಶ್ ಅಂಬಾನಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + eleven =
Remember me
