ದಮೋಹ್ (ಮಧ್ಯಪ್ರದೇಶ):ಎಟಿಎಂ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಯುವಕನೋರ್ವ ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯಲ್ಲಿ ಕರೊನಾಗೆ ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ.ಎಟಿಎಂಗಳಿಂದ 46 ಲಕ್ಷ ರೂ.ಗಳನ್ನು ಲೂಟಿ ಮಾಡಿದ ಗ್ಯಾಂಗ್‌ನ ಕಿಂಗ್‌ಪಿನ್ ದೇವೇಂದ್ರ ಪಟೇಲ್ ಸೋಮವಾರ ಮಧ್ಯರಾತ್ರಿ ಜಿಲ್ಲಾ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ ಎಂದು ದಾಮೋ ಪೊಲೀಸ್ ವರಿಷ್ಠಾಧಿಕಾರಿ ಹೇಮಂತ್ ಚೌಹಾನ್ ತಿಳಿಸಿದ್ದಾರೆ.
ಇದನ್ನೂ ಓದಿ:ಬೀದಿ ಕಾಮಣ್ಣರ ಅಟ್ಟಹಾಸಕ್ಕೆ ಆಹುತಿಯಾದಳು ಯುವತಿ
ಕಳೆದ ತಿಂಗಳು ಬಂಧನಕ್ಕೊಳಗಾದ ಆರೋಪಿಗೆ ಕರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಆತನ ಕಣ್ಗಾವಲಿಗೆ ಜೈಲು ಸಿಬ್ಬಂದಿಯನ್ನು ಆಸ್ಪತ್ರೆಯಲ್ಲಿ ನಿಯೋಜಿಸಲಾಗಿತ್ತು. ಪರಾರಿಯಾದ ಆತನಿಗೆ ಶೋಧ ಕಾರ್ಯ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಸಿವಿಲ್ ಎಂಜಿನಿಯರಿಂಗ್ ಪದವೀಧರನಾದ ಪಟೇಲ್, ದಮೋಹ್, ಪನ್ನಾ, ಜಬಲ್ಪುರ್ ಮತ್ತು ಕಾಟ್ನಿ ಜಿಲ್ಲೆಗಳಲ್ಲಿ ಏಳು ಎಟಿಎಂಗಳನ್ನು ಸ್ಫೋಟಕಗಳ ಸಹಾಯದಿಂದ ದೋಚಿದ ಆರು ಸದಸ್ಯರ ಗ್ಯಾಂಗ್‌ನ ಮಾಸ್ಟರ್ ಮೈಂಡ್ ಆಗಿದ್ದಾನೆ.
ಹೆರಿಗೆ ಮಾಡಿಸಿದ ಶಾಸಕ ತಾಯಿಂಸಾಂಗ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + six =
Remember me
