ನವದೆಹಲಿ:ಈಗಾಗಲೇ ಟಿ-20 ಕ್ರಿಕೆಟ್​ ತಂಡದ ನಾಯಕನಾಗಿರುವ ಹಿಟ್ ಮ್ಯಾನ್ ರೋಹಿತ್​ ಶರ್ಮಾರನ್ನು ಇದೀಗ ಏಕದಿನ ತಂಡದ ನಾಯಕನನ್ನಾಗಿ ಬಿಸಿಸಿಐ ಆಯ್ಕೆ ಮಾಡಿದ್ದು, ಟ್ವಿಟ್ಟರ್​​ನಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದೆ.
ಈ ಮೂಲಕ ಏಕದಿನ ಹಾಗೂ ಟಿ-20 ತಂಡಕ್ಕೆ ಹಿಟ್​ಮ್ಯಾನ್ ಅವರಿಗೆ ನಾಯಕನ ಸ್ಥಾನ ನೀಡಲಾಗಿದೆ. ಉಳಿದಂತೆ ಟೆಸ್ಟ್​​ ತಂಡದಲ್ಲಿ ಉಪನಾಯಕನಾಗಿ ಜವಾಬ್ದಾರಿ ನಿರ್ವಹಿಸಲಿದ್ದಾರೆ.ಟಿ-20 ವಿಶ್ವಕಪ್​ ಮುಕ್ತಾಯಗೊಳ್ಳುತ್ತಿದ್ದಂತೆ ವಿರಾಟ್​​ ಕೊಹ್ಲಿ ನಾಯಕತ್ವದಿಂದ ಕೆಳಗಿಳಿದಿದ್ದರು. ಇದರ ಬೆನ್ನಲ್ಲೇ ಕೊಹ್ಲಿ ಏಕದಿನ ತಂಡದ ನಾಯಕತ್ವಕ್ಕೂ ವಿದಾಯ ಘೋಷಣೆ ಮಾಡಲಿದ್ದಾರೆ ಎಂಬ ಮಾತುಗಳು ಹರಿದಾಡಿದ್ದವು. ಇದೀಗ ಅಧಿಕೃತವಾಗಿ ಬಿಸಿಸಿಐ ಮಾಹಿತಿ ಹೊರಹಾಕಿದ್ದು, ಏಕದಿನ ತಂಡದ ನಾಯಕತ್ವದ ಸ್ಥಾನದಿಂದಲೂ ಅವರನ್ನ ಕೆಳಗಿಳಿಸಲಾಗಿದೆ.
ವಿರಾಟ್​ ಕೊಹ್ಲಿ ಇದೀಗ ಟೆಸ್ಟ್​​​ ತಂಡದ ನಾಯಕನಾಗಿ ಮಾತ್ರ ಮುಂದುವರೆಯಲಿದ್ದಾರೆ. ಇವರ ಉಪನಾಯಕನಾಗಿ ರೋಹಿತ್​ ಶರ್ಮಾ ಸಾಥ್​​ ನೀಡಲಿದ್ದಾರೆ.ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿರುವ ಟೀಂ ಇಂಡಿಯಾ ಡಿಸೆಂಬರ್​​ 26ರಿಂದ ಟೆಸ್ಟ್​​ನಲ್ಲಿ ಭಾಗಿಯಾಗಲಿದ್ದು, ತದನಂತರ ಏಕದಿನ ಸರಣಿಯಲ್ಲಿ ಭಾಗಿಯಾಗಲಿದೆ.
The All-India Senior Selection Committee also decided to name Mr Rohit Sharma as the Captain of the ODI & T20I teams going forward.#TeamIndia|@ImRo45pic.twitter.com/hcg92sPtCa— BCCI (@BCCI)December 8, 2021
The All-India Senior Selection Committee also decided to name Mr Rohit Sharma as the Captain of the ODI & T20I teams going forward.#TeamIndia|@ImRo45pic.twitter.com/hcg92sPtCa
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:10 + 8 =
Remember me
