ಹರಿಯಾಣ: ಅತೀ ವೇಗದಲ್ಲಿ ಚಲಿಸುತ್ತಿದ್ದ ರೋಲ್ಸ್ ರಾಯ್ಸ್ ಫ್ಯಾಂಟಮ್ ಕಾರು, ಪೆಟ್ರೋಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟ ಘಟನೆ ಮಂಗಳವಾರ ಹರಿಯಾಣದ ನುಹ್‌ನಲ್ಲಿ ವರದಿಯಾಗಿದೆ.
ಇದನ್ನೂ ಓದಿ:ಗೃಹಲಕ್ಷ್ಮಿ ಯೋಜನೆ ಲೋಕಸಭೆ ಚುನಾವಣೆಯ ರಿಹರ್ಸಲ್ ಅಲ್ಲ : ಡಿ.ಕೆ. ಶಿವಕುಮಾರ್
ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ರೋಲ್ಸ್ ರಾಯ್ಸ್ ಕಾರನ್ನು ಗಂಟೆಗೆ 230 ಕಿಮೀ ವೇಗದಲ್ಲಿ ಚಲಾಯಿಸಲಾಗಿತ್ತು ಎಂದು ವರದಿಯಲ್ಲಿ ಉಲ್ಲೇಖಿಸಿದೆ. ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಗುರ್ಗಾಂವ್ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದಾರೆ. ರಸ್ತೆಯಲ್ಲಿ ತಿರುವು ತೆಗೆದುಕೊಳ್ಳುತ್ತಿದ್ದ ಟ್ರಕ್​ಗೆ ಓವರ್​ ಸ್ಪೀಡ್​ನಲ್ಲಿದ್ದ ಕಾರು ಡಿಕ್ಕಿ ಹೊಡೆದ ಕೂಡಲೇ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಗಂಭೀರವಾಗಿ ಗಾಯಗೊಂಡ ಮೂವರನ್ನು ಚಂಡೀಗಢದ ದಿವ್ಯಾ, ತಸ್ಬೀರ್ ಮತ್ತು ದೆಹಲಿಯ ವಿಕಾಸ್ ಎಂದು ಗುರುತಿಸಲಾಗಿದೆ. ಟ್ಯಾಂಕರ್ ಚಾಲಕ ರಾಮಪ್ರೀತ್ ಮತ್ತು ಆತನ ಸಹಾಯಕ ಕುಲದೀಪ್ ಆಕ್ಸಿಡೆಂಟ್​ನಲ್ಲಿ ಮೃತಪಟ್ಟ ಇಬ್ಬರು ಎಂದು ತಿಳಿಸಲಾಗಿದೆ,(ಏಜೆನ್ಸೀಸ್).
69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ 2023 ವಿಜೇತರ ಪಟ್ಟಿ ಇಲ್ಲಿದೆ ನೋಡಿ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:2 × 2 =
Remember me
