ಬೆಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಯುವತಿಯರ ಜತೆ ಅಸಭ್ಯವಾಗಿ ವರ್ತಿಸುತ್ತಿದ್ದನ್ನು ಪ್ರಶ್ನಿಸಿದ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಸಿಬ್ಬಂದಿ ಮೇಲೆ ಮೂವರು ಅಪರಿಚಿತ ಯುವಕರು ಹಲ್ಲೆ ನಡೆಸಿದ್ದಾರೆ.
ಇದನ್ನೂ ಓದಿ:ಜೂನ್ 12ರಂದು ನಡೆಯಲಿದೆ ಜಿಎಸ್​ಟಿ ಕೌನ್ಸಿಲ್ ಸಭೆ: ಚರ್ಚೆಯಾಗಲಿವೆ ಮಹತ್ವದ ವಿಚಾರಗಳು
ಆರ್‌ಪಿಎಫ್​ ಸಿಬ್ಬಂದಿ ಕಿರಣ್ ಕುಮಾರ್ ಗುರ್ಜಾರ್ (30) ಹಲ್ಲೆಗೊಳಗಾದವರು. ಅವರು ಜೂ. 2ರಂದು ರಾತ್ರಿ ಪಾಳಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. ರಾತ್ರಿ 1 ಗಂಟೆಯಲ್ಲಿ ರೈಲು ನಿಲ್ದಾಣದ ಟಿಕೆಟ್ ಬುಕ್ಕಿಂಗ್ ಕೌಂಟರ್ ಸಮೀಪ ಮೂವರು ಯುವಕರು ಇಬ್ಬರು ಯುವತಿಯರೊಂದಿಗೆ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದರು. ಇದನ್ನು ಗಮನಿಸಿದ ಸಿಬ್ಬಂದಿ ಸ್ಥಳಕ್ಕೆ ಹೋಗಿದ್ದರು. ಸಾರ್ವಜನಿಕ ಸ್ಥಳದಲ್ಲಿ ಈ ರೀತಿ ನಡೆದುಕೊಳ್ಳುವುದು ಸರಿಯಲ್ಲ. ನಿಲ್ದಾಣದಿಂದ ಹೊರ ಹೋಗುವಂತೆ ಸೂಚಿಸಿದ್ದರು.
ಇದನ್ನೂ ಓದಿ:ಜೂನ್​ 11ರಿಂದ ತಿರುಪತಿ ಬಾಲಾಜಿ ದರ್ಶನ: ಆದರೆ ಸುಲಭವಿಲ್ಲ
ಕೂಡಲೇ ಯುವತಿಯರು ಸ್ಥಳದಿಂದ ಹೊರ ಹೋಗಿದ್ದರು. ಆದರೆ, ಮೂವರು ಯುವಕರು ಆರ್‌ಪಿಎಫ್ ಸಿಬ್ಬಂದಿ ಜತೆ ಜಗಳ ತೆಗೆದಿದ್ದರು. ಈ ಪೈಕಿ ಓರ್ವ ಯುವಕ ತನ್ನ ಬಳಿ ಇದ್ದ ಚೂರಿಯಿಂದ ಸಿಬ್ಬಂದಿ ಮೇಲೆ ಇರಿಯಲು ಯತ್ನಿಸಿದ್ದು, ಪರಿಣಾಮ ಕೈಗೆ ಗಾಯವಾಗಿದೆ. ಹಲ್ಲೆ ವೇಳೆ ಆರ್‌ಪಿಎಫ್ ಸಿಬ್ಬಂದಿ ಕೂಗಿಕೊಂಡಿದ್ದು, ಇತರೆ ಸಿಬ್ಬಂದಿ ಧಾವಿಸುವಷ್ಟರಲ್ಲಿ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ಇದನ್ನೂ ಓದಿ:ದಾವೂದ್ ಇಬ್ರಾಹಿಂ ಮತ್ತು ಪತ್ನಿಗೆ ಕೋವಿಡ್​ 19 ಸೋಂಕು?
ಈ ಕುರಿತು ಪ್ರಕರಣ ದಾಖಲಿಸಲಾಗಿದೆ. ಘಟನಾ ಸ್ಥಳದಲ್ಲಿನ ಸಿಸಿ ಕ್ಯಾಮರಾ ದೃಶ್ಯಗಳನ್ನು ಪರಿಶೀಲಿಸಲಾಗಿದೆ. ಆರೋಪಿಗಳ ಮುಖಚಹರೆ ಗುರುತಿಸಲಾಗಿದ್ದು ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಶು ರೋಗಗಳಿಗೆ ಪರ್ಯಾಯ ಚಿಕಿತ್ಸೆಗೆ ಆಯುರ್ವೇದ ವಿಧಾನ: ಎನ್​ಡಿಡಿಬಿ ಉತ್ತೇಜನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 3 =
Remember me
