ಅಮರಾವತಿ:ಲೋಕಸಭಾ ಚುನಾವಣೆ ಮತ್ತು ವಿಧಾನಸಭೆ ಚುನಾವಣೆಗೂ ಮುನ್ನ ಅಕ್ರಮವಾಗಿ ಹಣ ಸಾಗಿಸುವವರ ಮೇಲೆ ಚುನಾವಣಾಧಿಕಾರಿಗಳು ಮತ್ತು ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಇಂದು ಆಂಧ್ರಪ್ರದೇಶದಲ್ಲಿ ಲಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಗೂಡ್ಸ್​ ವಾಹನವೊಂದರಿಂದ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 7 ಕೋಟಿ ರೂಪಾಯಿ ಜಪ್ತಿ ಮಾಡಲಾಗಿದೆ.
ಇದನ್ನೂ ಓದಿ:ಮೋದಿಗೆ ಪ್ರಜ್ವಲ್ ರೇವಣ್ಣ “ಕಾಂಪ್ಲಾನ್​ ಬಾಯ್”: ಕಾಂಗ್ರೆಸ್​ ಕೊಟ್ಟ ಕಾರಣ ಹೀಗಿದೆ..!
ಗೂಡ್ಸ್​ ವಾಹನ ವಿಜಯವಾಡದಿಂದ ವಿಶಾಖಪಟ್ಟಣಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಪೂರ್ವ ಗೋದಾವರಿ ಪೊಲೀಸರು ವಾಹನದಿಂದ 7 ಬಾಕ್ಸ್‌ಗಳು ಒಂದು ಚೀಲದಲ್ಲಿ ತುಂಬಿದ್ದ 7 ಕೋಟಿ ರೂ. ಹಣವನ್ನು ವಶಪಡಿಸಿಕೊಂಡಿದ್ದಾರೆ. ನಲ್ಲಜರ್ಲ ಮಂಡಲದ ಅನಂತಪಲ್ಲಿ ಎಂಬಲ್ಲಿ ಲಾರಿಗೆ ಡಿಕ್ಕಿ ಹೊಡೆದು ನಗದು ಸಾಗಿಸುತ್ತಿದ್ದ ವಾಹನವನ್ನು ಪಲ್ಟಿಯಾದ ನಂತರ ವಶಪಡಿಸಿಕೊಳ್ಳಲಾಗಿದೆ. ಪಲ್ಟಿಯಾದ ವಾಹನದ ಚಾಲಕನಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಗೋಪಾಲಪುರಂ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆ ನಡೆದಿದ್ದು ?:ನಲ್ಲಜರ್ಲ ಮಂಡಲದ ಅನಂತಪಲ್ಲಿ ಎಂಬಲ್ಲಿ ಲಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ವಾಹನ ಪಲ್ಟಿಯಾಗುತ್ತಿದಂತೆಯೇ ಅದರಲ್ಲಿದ್ದ ಸುಮಾರು 7 ಬಾಕ್ಸ್​ ಡಬ್ಬಗಳು ಮತ್ತು ಒಂದು ಗೋಣಿ ಚೀಲದಿಂದ ಇನ್ನೊಂದು ಚೀಲಕ್ಕೆ ಹಾಕುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಹಾಗೂ ಚುನಾವಣಾ ಅಧಿಕಾರಿಗಳು ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮೇ.13 ರಂದು ವಿಧಾನಸಭೆ/ಲೋಕಸಭೆ ಚುನಾವಣೆ:ಲೋಕಸಭಾ ಚುನಾವಣೆಯ ನಡುವೆ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆ ಕೂಡ ನಡೆಯುತ್ತಿದೆ. ವಿಭಜಿತ ಆಂಧ್ರ ಪ್ರದೇಶದ ಮೂರನೇ ಚುನಾವಣೆ ಇದು. ಆಂಧ್ರಪ್ರದೇಶದಲ್ಲಿ ಲೋಕಸಭಾ ಚುನಾವಣೆಯ ಜೊತೆಗೆ ವಿಧಾನಸಭೆಯ 175 ಕ್ಷೇತ್ರಗಳಿಗೆ ಮತದಾನ ಮೇ 13 ರಂದು ಮತದಾನ ನಡೆಯಲಿದೆ. ಆಂಧ್ರಪ್ರದೇಶದ ಚುನಾವಣೆ ಈ ಬಾರಿ ಹೆಚ್ಚು ಗಮನಸೆಳೆದಿದ್ದು, ಬಿಜೆಪಿ ತನ್ನ ಛಾಪು ಮೂಡಿಸಲು ಪ್ರಯತ್ನಿಸುತ್ತಿದೆ. ಅಯೋಧ್ಯೆ ರಾಮ ಮಂದಿರ ನಿರ್ಮಾಣದ ಯಶಸ್ಸಿನೊಂದಿಗೆ ಪ್ರಧಾನಿ ಮೋದಿಯವರ ರ‍್ಯಾಲಿ ಈ ವಿಚಾರದಲ್ಲಿ ಗಮನಾರ್ಹ.
IPL 2024: ಸಿಎಸ್​ಕೆ ವಿರುದ್ಧ ಗೆದ್ದರೂ ಶುಭಮನ್​ ಗಿಲ್​ಗೆ 24 ಲಕ್ಷ ರೂ. ದಂಡ, ಕಾರಣ ಹೀಗಿದೆ..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + 13 =
Remember me
