ನವದೆಹಲಿ:ದಿವಾಳಿ ಮತ್ತಿ ದಿವಾಳಿತನ ನೀತಿ (ಎರಡನೇ ತಿದ್ದುಪಡಿ) ಮಸೂದೆಯನ್ನು ರಾಜ್ಯಸಭೆ ಶನಿವಾರ ಅಂಗೀಕರಿಸಿದೆ. ಈ ತಿದ್ದುಪಡಿ ಅಂಗೀಕಾರವಾದ ಕಾರಣ, ಕರೊನಾ ವೈರಸ್​ ದಿವಾಳಿ ಘೋಷಣೆ ಪ್ರಕ್ರಿಯೆಯನ್ನು ಮಾರ್ಚ್​ 25ರಿಂದ ಪೂರ್ವಾನ್ವಯವಾಗುವಂತೆ ಕನಿಷ್ಠ ಆರು ತಿಂಗಳ ಮಟ್ಟಿಗೆ ಕೈಗೊಳ್ಳುವುದು ಸಾಧ್ಯವಿಲ್ಲ.
ಈ ಮಸೂದೆ ತಿದ್ದುಪಡಿ ಕುರಿತು ರಾಜ್ಯಸಭೆಯಲ್ಲಿ ನಡೆದ ಚರ್ಚೆಯ ವೇಳೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಉತ್ತಮ ಕಾಳಜಿಯಲ್ಲಿ ಇರಿಸುವುದು, ದಿವಾಳಿಯಾಗದಂತೆ ಇರಿಸುವುದು ಐಬಿಸಿಯ ಉದ್ದೇಶ. ಮಾರ್ಚ್​ 25ರಿಂದ ದೇಶಾದ್ಯಂತ ಲಾಕ್​ಡೌನ್ ಘೋಷಣೆಯಾದ ಕಾರಣ ಅಂದಿನಿಂದ ಸಾಲ ಮರುಪಾವತಿ ಮಾಡಿಲ್ಲದ ಕಂಪನಿಗಳ ವಿರುದ್ಧ ಅಂದಿನಿಂದ ಅನ್ವಯವಾಗುವಂತೆ ಕನಿಷ್ಠ ಆರು ತಿಂಗಳ ಮಟ್ಟಿಗೆ ದಿವಾಳಿ ಕ್ರಮ ತೆಗೆದುಕೊಳ್ಳದಿರುವುದಕ್ಕೆ ಈ ತಿದ್ದುಪಡಿ ಮಾಡಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ:ಸಿಸಿಬಿ ಕಚೇರಿಗೆ ಬಂದ ಅಕುಲ್, ಕರ್ನಾಟಕದ ಜನತೆಗೆ ನಮಸ್ಕಾರಗಳು… ಎನ್ನುತ್ತ ಸ್ಫೋಟಕ ಮಾಹಿತಿ ಹೊರಹಾಕಿದ್ರು
ಈ ಮಸೂದೆಯು ಜೂನ್ ತಿಂಗಳಲ್ಲಿ ಮಾಡಿದ್ದ ಆರ್ಡಿನೆನ್ಸ್ ಜಾಗವನ್ನು ತುಂಬಲಿದೆ. ವ್ಯಾಪಾರೋದ್ಯಮಗಳಿಗೆ ಇದರಿಂದ ಅನುಕೂಲವಾಗಲಿದೆ ಎಂದು ಸರ್ಕಾರ ಹೇಳಿದೆ. (ಏಜೆನ್ಸೀಸ್)
ಬಿಗ್ ಬ್ರೇಕಿಂಗ್ ನ್ಯೂಸ್ ಕೊಡುವ ಸುಳಿವು ನೀಡಿದ್ರು ಮುಖ್ಯಮಂತ್ರಿ ಬಿಎಸ್​ವೈ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 2 =
Remember me
