ಧಾರವಾಡ:ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಕಾರ್ಯಕಾರಿ ಮಂಡಳಿ ಬೈಠಕ್, ತಾಲೂಕಿನ ಗರಗ ರಸ್ತೆಯ ಮಾಧವನಗರದಲ್ಲಿರುವ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ಗುರುವಾರ ಆರಂಭಗೊಂಡಿತು.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಹಾಗೂ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರು ಭಾರತಮಾತೆಯ ಭಾವಚಿತ್ರಕ್ಕೆ ಪುಷ್ಪ ಅರ್ಪಿಸುವ ಮೂಲಕ ಮೂರು ದಿನಗಳ ಬೈಠಕ್​ಗೆ ಚಾಲನೆ ನೀಡಿದರು.
ದೇಶದ ಎಲ್ಲ ಪ್ರಾಂತಗಳ ಹಾಗೂ ಕ್ಷೇತ್ರಗಳ ಸಂಘಚಾಲಕ, ಕಾರ್ಯವಾಹ, ಪ್ರಚಾರಕ, ಅಖಿಲ ಭಾರತ ಕಾರ್ಯಕಾರಿಣಿ ಸದಸ್ಯರು ಮತ್ತು ಆಯ್ದ ಸಂಘಟನೆಗಳ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಗಳು ಸೇರಿ ಸುಮಾರು 350 ಸ್ವಯಂ ಸೇವಕರು ಬೈಠಕ್​ನಲ್ಲಿ ಭಾಗವಹಿಸಿದ್ದಾರೆ. ಸಂಘದ ಕಾರ್ಯಗಳ ಪ್ರಸ್ತುತ ಸ್ಥಿತಿಗತಿ, ಕಾರ್ಯ ವಿಸ್ತಾರ ಹಾಗೂ ಸ್ವಯಂ ಸೇವಕರ ವಿಕಾಸದ ಯೋಜನೆಗಳ ಕುರಿತು ರ್ಚಚಿಸಲಾಯಿತು. ಸಭೆಯು ಶನಿವಾರ ಸಂಜೆ ಸಮಾರೋಪಗೊಳ್ಳಲಿದ್ದು, ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ನಡೆದ ಹಿಂದುಗಳ ಮೇಲಿನ ಹಿಂಸಾಚಾರ ವಿರೋಧಿಸಿ ನಿರ್ಣಯವನ್ನು ಅಂಗೀಕರಿಸಲಾಗುವುದು.ಇತ್ತೀಚೆಗೆ ನಿಧನ ಹೊಂದಿದ ಗಣ್ಯರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಶಾರುಖ್ ಪುತ್ರ ಆರ್ಯನ್​ ಖಾನ್​ಗೆ ಜಾಮೀನು ಸಿಗಲು ಕಾರಣವೇನು ಗೊತ್ತೇ?; ಇಲ್ಲಿದೆ ಮಾಹಿತಿ..

‘ನನ್ನ ಹಾಗೂ ಮಗು ಲೈಫ್ ಹಾಳು ಮಾಡಿದ್ದಿ’ ಎಂದು ವಾಟ್ಸ್​​ಆ್ಯಪ್​ ಸ್ಟೇಟಸ್​ ಹಾಕಿ, 6 ತಿಂಗಳ ಮಗು ಜತೆ ನದಿಗೆ ಹಾರಿದ ತಾಯಿ!

ಅವನನ್ನು ಲವ್​ ಮಾಡ್ಬೇಡ ಅಂದ್ರೂ ಕೇಳದ ಮಗಳನ್ನು ಕೊಲೆ ಮಾಡಿದ ಅಪ್ಪ; ವೇಲ್​​ನಿಂದ ಕತ್ತು ಸುತ್ತಿ ಸಾಯಿಸಿದ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + 14 =
Remember me
