ನವದೆಹಲಿ:ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಉದ್ಘಾಟನೆ ಜನವರಿ 22 ರಂದು ನೆರವೇರಲಿದ್ದು, ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಕೋಟ್ಯಾಂತರ ಭಕ್ತರು ಕಾತುರದಿಂದ  ಕಾಯುತ್ತಿದ್ದಾರೆ. ಈ ನಡುವೆ ಪವಿತ್ರ ರಾಮಮಂದಿರಕ್ಕೆ  ತಮ್ಮ ಅಳಿಲು ಸೇವೆಯನ್ನು ಸಲ್ಲಿಸಬೇಕೆಂದು ಭಕ್ತರು ಒಂದಲ್ಲಾ ರೂಪದಲ್ಲಿ ರಾಮಮಂದಿರಕ್ಕೆ ತಮ್ಮ ಕೈಲಾದಷ್ಟು ಕಾಣಿಕೆಯನ್ನು ಸಲ್ಲಿಸುತ್ತಿದ್ದಾರೆ.
ಜನವರು 22 ರಂದು ರಾಮಲಲ್ಲಾನ ಪ್ರತಿಷ್ಠಾಪನೆ ವೇಳೆ ಮುಸ್ಲಿಮರು ಮಸೀದಿ ಮತ್ತು ದರ್ಗಾಗಳಲ್ಲಿ ಜೈ ಶ್ರೀರಾಮ್​ ಘೋಷಣೆಗಳನ್ನು ಕೂಗಬೇಕು ಎಂದು ಆರ್​ಎಸ್​ಎಸ್​ ರಾಷ್ಟ್ರೀಯ ಕಾರ್ಯಕಾರಿ ಸದಸ್ಯ ಇಂದ್ರೇಶ್ ಕುಮಾರ್ ಮನವಿ ಮಾಡಿದ್ದಾರೆ.
ಭಾನುವಾರ ನಡೆದ ರಾಮಮಂದಿರ, ರಾಷ್ಟ್ರ ಮಂದಿರ್-ಎ ಹೆರಿಟೇಜ್​​ ಪುಸ್ತಕ ಬಿಡುಗಡೆ ಬಳಿಕ ಮಾತನಾಡಿದ ಇಂದ್ರೇಶ್​ ಕುಮಾರ್, ಶೇ. 99 ಪ್ರತಿಶತದಷ್ಟು ಮುಸ್ಲಿಮರು ಮತ್ತು ಇತರ ಹಿಂದೂಗಳಲ್ಲದವರು ದೇಶಕ್ಕೆ ಸೇರಿದವರುನಮಗೆ ಸಾಮಾನ್ಯ ಪೂರ್ವಜರಿರುವುದರಿಂದ ಅವರು ಹಾಗೆ ಮುಂದುವರಿಯುತ್ತಾರೆ. ಅವರು ತಮ್ಮ ಧರ್ಮವನ್ನು ಬದಲಾಯಿಸಿದ್ದಾರೆ, ದೇಶವನ್ನಲ್ಲ ಎಂದಿದ್ದಾರೆ.
ಇದನ್ನೂ ಓದಿ:ಆಹ್ವಾನವಿಲ್ಲದ ಮದುವೆ ಕಾರ್ಯಕ್ರಮಗಳಿಗೆ ಹೋದರೆ ಜೈಲೂಟ ಗ್ಯಾರಂಟಿ; ಕಾರಣ ಹೀಗಿದೆ
ಇಸ್ಲಾಂ, ಕ್ರಿಶ್ಚಿಯನ್, ಸಿಖ್​ಅಥವಾ ಇನ್ನಾವುದೇ ಧರ್ಮವನ್ನು ಆಚರಿಸುವ ಜನರು ‘ಶಾಂತಿ, ಸೌಹಾರ್ದತೆ ಮತ್ತು ಭ್ರಾತೃತ್ವ’ಕ್ಕಾಗಿ ತಮ್ಮ ಧಾರ್ಮಿಕ ಸ್ಥಳಗಳಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ಅಯೋಧ್ಯೆಯ ಸಮರ್ಪಣಾ ಸಮಾರಂಭದಲ್ಲಿ ಪಾಲ್ಗೊಳ್ಳಬೇಕು ನಾವೆಲ್ಲರೂ ಈ ದೇಶದವರು, ವಿದೇಶಿಯರೊಂದಿಗೆ ನಮಗೆ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.
ಮಸೀದಿ, ದರ್ಗಾ ಅಲ್ಲದೇ ಗುರುದ್ವಾರಗಳು, ಚರ್ಚ್‌ಗಳು ಮತ್ತು ಎಲ್ಲಾ ಧಾರ್ಮಿಕ ಸ್ಥಳಗಳು ತಮ್ಮ ಇಬಾದತ್ ಗಾಹ್ ಮತ್ತು ಪ್ರಾರ್ಥನಾ ಮಂದಿರಗಳನ್ನು ಜನವರಿ 22 ರಂದು 11-2 ಘಂಟೆಯ ನಡುವೆ ಭವ್ಯವಾಗಿ ಅಲಂಕರಿಸಲು ಮತ್ತು ದೊಡ್ಡ ಪರದೆಯಲ್ಲಿ ಕಾರ್ಯಕ್ರಮವನ್ನು ವೀಕ್ಷಣೆಗೆ ಅವಕಾಶ ಮಾಡಿಕೊಡಬೇಕು. ರಾಮ ಹಿಂದೂಗಳಿಗೆ ಮಾತ್ರವಲ್ಲ, ಎಲ್ಲರಿಗೂ ಸೇರಿದವನು ಎಂದು ಆರ್​ಎಸ್​ಎಸ್​ ರಾಷ್ಟ್ರೀಯ ಕಾರ್ಯಕಾರಿ ಸದಸ್ಯ ಇಂದ್ರೇಶ್ ಕುಮಾರ್ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 1 =
Remember me
