ಹೈದರಾಬಾದ್​:ಜನರ ರಕ್ಷಣೆಗೆ ನಿಲ್ಲಬೇಕಾದ ಪೊಲೀಸ್​ ಕಾನ್ಸ್​ಟೇಬಲ್​ ಒಬ್ಬ ಅಪ್ರಾಪ್ತ ಬಾಲಕಿಯ ಜತೆ ಅಸಭ್ಯವಾಗಿ ವರ್ತಿಸಿರುವ ಆತಂಕಕಾರಿ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಂಕರಪಲ್ಲಿ ಪುರಸಭೆಯಲ್ಲಿ ನಡೆದಿದೆ.
ಶೇಖರ್​ (35) ಆರೋಪಿ ಪೊಲೀಸ್​ ಕಾನ್ಸ್​ಟೇಬಲ್​. ಈತ ಶಂಕರಪಲ್ಲಿ ಪುರಸಭೆಯ ನಿವಾಸಿ. ಹೈದರಾಬಾದ್​ನ ಕುಕಟಪಲ್ಲಿಯ ಪೊಲೀಸ್​ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾನೆ. ಕಾನ್ಸ್​ಟೇಬಲ್​ ಮನೆಯಲ್ಲಿ ಕುಟುಂಬವೊಂದು ಕೆಲ ವರ್ಷಗಳಿಂದ ಬಾಡಿಗೆಗೆ ವಾಸವಿದೆ. ಬುಧವಾರ ಸಂತ್ರಸ್ತ ಬಾಲಕಿಯೊಬ್ಬಳೇ ಮನೆಯಲ್ಲಿದ್ದಳು. ಆಕೆಯ ಪಾಲಕರು ಕೆಲಸ ನಿಮಿತ್ತ ಹೊರಡೆ ಹೋಗಿದ್ದರು. ಇದನ್ನು ಗಮನಿಸಿದ್ದ ಪೇದೆ ತನ್ನ ಕರಾಳ ಮುಖವನ್ನು ತೋರಿಸಿದ್ದಾನೆ.
ಯಾರು ಇಲ್ಲದಿರುವುದನ್ನು ನೋಡಿ ಮನೆಯೊಳಗೆ ದಿಢೀರ್​ ನುಗ್ಗಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಬಾಲಕಿ ಜೋರಾಗಿ ಕೂಗಿಕೊಂಡಿದ್ದಾಳೆ. ಅದನ್ನು ಕೇಳಿ ಓಡಿಬಂದ ಸ್ಥಳೀಯರು ಪೇದೆಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಪಾಲಕರ ದೂರಿನ ಅನ್ವಯ ಆರೋಪಿ ವಿರುದ್ಧ ಪೊಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ಅಲ್ಲದೆ, ಎಸ್​ಸಿ-ಎಸ್​ಟಿ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ದೂರು ದಾಖಲಾಗಿದೆ.
ಸಂತ್ರಸ್ತ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆಂದು ಆಸ್ಪತ್ರೆಗೆ ಕಳುಹಿಸಲಾಗಿದೆ. ಇನ್ನು ಪೇದೆ ಶೇಖರ್​ ಸ್ಥಳೀಯ ಉದ್ಯಮಿಗಳಿಗೂ ಕಿರುಕುಳ ನೀಡುತ್ತಿದ್ದ ಎಂಬ ವಿಚಾರವೂ ಕೂಡ ಇದೇ ಸಂದರ್ಭದಲ್ಲಿ ಬಯಲಾಗಿದೆ. ಸದ್ಯ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭವಾಗಿದೆ.(ಏಜೆನ್ಸೀಸ್​)
ಯಾರಾಗಲಿದ್ದಾರೆ ಆರ್​ಸಿಬಿ ಕ್ಯಾಪ್ಟನ್​? ಇಲ್ಲಿದೆ ನೋಡಿ ಅಭಿಮಾನಿಗಳು ಹಾಗೂ ವಿಶ್ಲೇಷಕರ ಲೆಕ್ಕಾಚಾರ!

ಜಾಲತಾಣದಲ್ಲಿ ತಮ್ಮ ಫೋಟೋ ನೋಡಿ ನಟಿಗೆ ಬಿಗ್​ ಶಾಕ್​: ದೂರಿನ ಬೆನ್ನಲ್ಲೇ ಆರೋಪಿಗಳ ಬಂಧನ

ವಾಟ್ಸಾಪ್​ನಲ್ಲೇ ಆಟೋ-ಕ್ಯಾಬ್​ ಬುಕ್​ ಮಾಡಬಹುದು! ಈ ನಗರದಲ್ಲಿ ಪೈಲಟ್​ ಪ್ರಾಜೆಕ್ಟ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × two =
Remember me
