ನವದೆಹಲಿ:ಕೇಂದ್ರ ಪ್ರವಾಸೋದ್ಯಮ ಸಚಿವಾಲಯ ಆಯೋಜಿಸಿರುವ ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮ ಸ್ಪರ್ಧೆಗೆ ಡಿ.31 ರವರೆಗೆ ಅರ್ಜಿ ಸಲ್ಲಿಸಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಷ್ಟ್ರೀಯ ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮ ಸ್ಪರ್ಧೆ-2024 ಮತ್ತು ರಾಷ್ಟ್ರೀಯ ಅತ್ಯುತ್ತಮ ಗ್ರಾಮೀಣ ಹೋಂಸ್ಟೇ ಸ್ಪರ್ಧೆ-2024 ಎಂಬ ಎರಡು ವಿಭಾಗಗಳಿದ್ದು, ದೇಶದ ಒಟ್ಟು 35 ಗ್ರಾಮಗಳು ಚಿನ್ನ, ಬೆಳ್ಳಿ ಮತ್ತು ಕಂಚಿನ ವಿಭಾಗದಲ್ಲಿ ಪ್ರಶಸ್ತಿ ಪಡೆಯಲಿವೆ. ಸಚಿವಾಲಯದ ವೆಬ್​ಸೈಟ್​ ಮೂಲಕ ಅರ್ಜಿ ಸಲ್ಲಿಸಬಹುದು. ಸಚಿವಾಲಯವು ಇಂಡಿಯನ್​ ಇನ್​ಸ್ಟಿಟ್ಯೂಟ್​ ಆಫ್​ ಟೂರಿಸಂ ಮತ್ತು ಟ್ರಾವೆಲ್​ ಮ್ಯಾನೇಜ್​ಮೆಂಟ್​ನ ಸಹಯೋಗದೊಂದಿಗೆ ಗ್ರಾಮೀಣ ಪ್ರವಾಸೋದ್ಯಮ ಮತ್ತು ಗ್ರಾಮೀಣ ಹೋಂಸ್ಟೇಗಳನ್ನು ಉತ್ತೇಜಿಸಲು ಈ ಸ್ಪರ್ಧೆಗಳನ್ನು ನಡೆಸುತ್ತಿದೆ ಎಂದು ಸಚಿವಾಲಯ ಹೇಳಿದೆ.
ಸೆ. 27ರಂದು ವಿಶ್ವ ಪ್ರವಾಸೋದ್ಯಮ ದಿನದಂದು ಎರಡು ಸ್ಪರ್ಧೆಗಳನ್ನು ಪ್ರಾರಂಭಿಸಲಾಯಿತು. ಇದು ದೇಶದಲ್ಲಿ ಗ್ರಾಮೀಣ ಪ್ರವಾಸೋದ್ಯಮದ ಪ್ರಚಾರ ಮತ್ತು ಅಭಿವೃದ್ಧಿಯನ್ನು ಬಲಪಡಿಸುತ್ತದೆ. ಗ್ರಾಮೀಣ ಪ್ರವಾಸೋದ್ಯಮದ ಬೆಳವಣಿಗೆಗೆ ಅನುಕೂಲಕರ ವಾತಾವರಣವನ್ನು ಸೃಷ್ಟಿಸಲು, ಸಚಿವಾಲಯವು ಈ ಸ್ಪರ್ಧೆಗಳ ಮೂಲಕ ಸರ್ಕಾರ, ಉದ್ಯಮದ ಮಧ್ಯಸ್ಥಗಾರರು, ಎನ್​ಜಿಒಗಳು ಮತ್ತು ಸ್ಥಳಿಯ ಸಮುದಾಯಗಳನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದೆ. ಈ ಬಹುಪಾಲುದಾರರ ವಿಧಾನವು ಗ್ರಾಮೀಣ ಆರ್ಥಿಕತೆ ಬಲಪಡಿಸುವ ಪ್ರಯತ್ನಗಳನ್ನು ಸಂಯೋಜಿಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × four =
Remember me
