ನೊಯ್ಡಾ (ಉತ್ತರ ಪ್ರದೇಶ):ಪೊಲೀಸ್‌ ಸಹಾಯವಾಣಿಯಾಗಿರುವ 100 ಸಂಖ್ಯೆಗೆ ಕರೆ ಮಾಡಿರುವ ವ್ಯಕ್ತಿಯೊಬ್ಬ ಪ್ರಧಾನಿ ನರೇಂದ್ರ ಮೋದಿಯವರಿಗೆ ಹಾನಿ ಮಾಡುವುದಾಗಿ ಬೆದರಿಕೆ ಹಾಕಿರುವ ಘಟನೆ ಉತ್ತರ ಪ್ರದೇಶದ ನೊಯ್ಡಾದಲ್ಲಿ ನಡೆದಿದೆ.
ಕರೆ ಮಾಡಿರುವ ವ್ಯಕ್ತಿಯ ಹುಡುಕಾಟ ನಡೆಸಿದ ಪೊಲೀಸರು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
100ಕ್ಕೆ ನಿನ್ನೆ ಸಂಜೆಯ ವೇಳೆ ಕರೆ ಮಾಡಿದ್ದ ವ್ಯಕ್ತಿ ಪ್ರಧಾನಿ ಮೋದಿಯವರಿಗೆ ಅಪಾಯ ಉಂಟುಮಾಡುವುದಾಗಿ ಏನೇನೋ ಹೇಳತೊಡಗಿದ್ದ. ತನ್ನ ಹೆಸರು, ವಿಳಾಸ ಆತ ಹೇಳಿರಲಿಲ್ಲ. ಇಷ್ಟು ಹೇಳಿ ಫೋನ್‌ ಕಟ್‌ ಮಾಡಿದ. ನಂತರ ಆತ ಫೋನ್‌ ಮಾಡಿದ ಸಂಖ್ಯೆಯ ಆಧಾರದ ಮೇಲೆ ಆರೋಪಿಯನ್ನು ಪತ್ತೆಹಚ್ಚಲಾಗಿದೆ ಎಂದು ನೊಯ್ಡಾ ಪೊಲೀಸರು ಹೇಳಿದ್ದಾರೆ.
ಇದನ್ನೂ ಓದಿ:ಡಿಜೆ ಹಳ್ಳಿ ಗಲಭೆ ಪ್ರಕರಣ ಪೂರ್ವ ನಿಯೋಜಿತವೇ?: ಬೇಡವೆಂದು ಗೊಗರೆದರು ದಯೆ ತೋರದ ಕಿಡಿಗೇಡಿಗಳುಬಂಧಿತನನ್ನು 33 ವರ್ಷದ ಹರ್ಭಜನ್ ಸಿಂಗ್ ಎಂದು ಗುರುತಿಸಲಾಗಿದೆ. ಹರಿಯಾಣದ ಮೂಲದ ಈತ ನೊಯ್ಡಾದಲ್ಲಿ ವಾಸವಾಗಿದ್ದಾನೆ.
ಈತನು ವಿಚಿತ್ರ ನಡವಳಿಕೆ ಹೊಂದಿದ್ದು, ಮೇಲ್ನೋಟಕ್ಕೆ ಮಾದಕ ವ್ಯಸನಿ ಎಂದು ತೋರುತ್ತಿರುವುದಾಗಿ ಪೊಲೀಸರು ಹೇಳಿದ್ದಾರೆ.
ಸದ್ಯ ಯುವಕನನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈತನ ಮನಸ್ಥಿತಿಯ ಕುರಿತು ಪರೀಕ್ಷೆ ನಡೆಸಲು ಮೊದಲು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಅತ್ಯಂತ ಕ್ರೂರವಾಗಿ ಲಾಕಪ್‌ ಡೆತ್‌ ಮಾಡಿದ್ದ ಆರೋಪಿ ಪೊಲೀಸ್‌ ಕರೊನಾಕ್ಕೆ ಬಲಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:8 + nine =
Remember me
