ಮೆಹ್ಸಾನಾ (ಗುಜರಾತ್):ಕಾಂಗ್ರೆಸ್ ಮುಖಂಡರೊಬ್ಬರ ಪುತ್ರನ ವಿವಾಹದಲ್ಲಿ ಆಹಾರ ಸೇವಿಸಿದ ಬಳಿಕ 1,200 ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಗುಜರಾತ್‍ನ ಮೆಹ್ಸಾನಾ ಜಿಲ್ಲೆಯಲ್ಲಿ ನಡೆದಿದೆ.‘
ಮೆಹ್ಸಾನಾ ಜಿಲ್ಲೆಯ ವಿಸ್ನಘರ್​ ತಾಲೂಕಿನ ಸವಲ ಗ್ರಾಮದ ಕಾಂಗ್ರೆಸ್ ಮುಖಂಡರೊಬ್ಬರ ಮದುವೆಯಲ್ಲಿ ಈ ಘಟನೆ ನಡೆದಿದೆ. ಕಳೆದ ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದ್ದು, ಎಲ್ಲರನ್ನೂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಮೆಹ್ಸಾನಾ ಪೊಲೀಸ್ ವರಿಷ್ಠಾಧಿಕಾರಿ ಪಾರ್ಥರಾಜ್‌ಸಿನ್ಹ್ ಗೋಹಿಲ್ ಮಾಹಿತಿ ನೀಡಿದ್ದಾರೆ.
ಮದುವೆಯಲ್ಲಿ ಊಟ ಮಾಡಿದೊಡನೆ ಅತಿಥಿಗಳಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ವಿಸ್ನಗರ, ಮೆಹ್ಸಾನಾ ಮತ್ತು ವಡ್ನಗರದ ವಿವಿಧ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ.
ಊಟದ ಬಳಿಕ ಜನರು ವಾಂತಿ ಮಾಡಲು ಪ್ರಾರಂಭಿಸಿದರು. ನಂತರ ಅವರನ್ನು ವಿಸ್ನಗರ, ಮೆಹ್ಸಾನಾ ಮತ್ತು ವಡ್ನಗರದ ವಿವಿಧ ಆಸ್ಪತ್ರೆಗಳಿಗೆ ಸಾಗಿಸಲಾಯಿತು. ಸಮಾರಂಭದಲ್ಲಿ ನೀಡಲಾದ ಆಹಾರದ ಸ್ಯಾಂಪಲ್​ ಅನ್ನು ಸಂಗ್ರಹಿಸಿ ಹೆಚ್ಚಿನ ಪರೀಕ್ಷೆಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯ, ಆಹಾರ ಮತ್ತು ಔಷಧ ಇಲಾಖೆಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಾರ್ಯಕ್ರದಲ್ಲಿ ಮಾಂಸಾಹಾರ ಮೆನು ಕೂಡ ಇತ್ತು. ಸದ್ಯ ಘಟನೆ ಕುರಿತಂತೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ವಿಸ್ನಗರ ಗ್ರಾಮಾಂತರ ಪೊಲೀಸರು ತಿಳಿಸಿದ್ದಾರೆ. ಕೆಲವು ಕಾರಣಗಳಿಂದ ಕಾಂಗ್ರೆಸ್​ ಮುಖಂಡನ ಹೆಸರನ್ನು ಬಹಿರಂಗಪಡಿಸಲು ಪೊಲೀಸರು ನಿರಾಕರಿಸಿದ್ದಾರೆ.
ಕಾಮತೃಷೆ ತೀರಿಸಿಕೊಳ್ಳಲು ಕಳ್ಳತನ ಮಾಡ್ತಿದ್ದ 70 ವರ್ಷದ ಅಜ್ಜ ಅಂದರ್​! ಈತನ ಮೊಬೈಲ್​ನಲ್ಲಿದೆ ರಹಸ್ಯ

ಅಮ್ಮನನ್ನು ನೋಡಿಕೋ ಎಂದರೆ ಟಾಯ್ಲೆಟ್​ ಕ್ಲೀನರ್​​ ಹಾಕಿ ಕಣ್ಣಿನ ದೃಷ್ಟಿಯನ್ನೇ ತೆಗೆದ ಕೇರ್​ ಟೇಕರ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 3 =
Remember me
