ನವದೆಹಲಿ:ಜನವರಿ 7ಕ್ಕೆ ಅನ್ವಯ ಆಗುವಂತೆ ಭಾರತದಲ್ಲಿ 150 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಈ ಮೂಲಕ ಭಾರತವು ಐತಿಹಾಸಿಕ ಮೈಲಿಗಲ್ಲನ್ನು ತಲುಪಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಭಾರತದ ವಯಸ್ಕ ಜನಸಂಖ್ಯೆಯ 90 ಪ್ರತಿಶತಕ್ಕೂ ಹೆಚ್ಚು ಜನರು ಈಗಾಗಲೇ ಕೋವಿಡ್ ಲಸಿಕೆಯ ಮೊದಲ ಡೋಸ್‌ ಪಡೆದಿದ್ದಾರೆ. 5 ದಿನಗಳಲ್ಲಿ, 1.5 ಕೋಟಿಗೂ ಹೆಚ್ಚು ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಅವರು ಹೇಳಿದರು.
ಪಶ್ಚಿಮ ಬಂಗಾಳದ ಕೋಲ್ಕತಾದಲ್ಲಿ ನಡೆದ ಚಿತ್ತರಂಜನ್ ನ್ಯಾಷನಲ್ ಕ್ಯಾನ್ಸರ್ ಇನ್‌ಸ್ಟಿಟ್ಯೂಟ್‌ನ ಎರಡನೇ ಕ್ಯಾಂಪಸ್ ಉದ್ಘಾಟಿಸಿ ಅವರು ಮಾತನಾಡಿದರು. ವಿಡಿಯೋ ಕಾನ್ಫರೆನ್ಸ್ ಮೂಲಕ ಇದರ ಉದ್ಘಾಟನೆ ನೆರವೇರಿಸಿದ ಪ್ರಧಾನಿ, ಈ ಅಂಕಿ ಅಂಶ ನೀಡಿದರು. ಭಾರತದಲ್ಲಿ ಇಷ್ಟೊಂದು ಪರಿಯಲ್ಲಿ ಲಸಿಕೆ ಹಾಕಿಸಿರುವುದು ವಿದೇಶಿಗರಿಗೂ ಅಚ್ಚರಿಗೊಳಿಸಿದೆ. ಭಾರತದ 130 ಕೋಟಿ ನಾಗರಿಕರ ಸಾಮರ್ಥ್ಯದ ಸಂಕೇತವಾಗಿದೆ. ಇದು ವಿಶ್ವಾಸ ಮತ್ತು ಸ್ವಾವಲಂಬನೆಯ ಸಂಕೇತ ಎಂದು ಪ್ರಧಾನಿ ಹೇಳಿದರು.
ಪಶ್ಚಿಮ ಬಂಗಾಳದಲ್ಲಿ 5000 ಕ್ಕೂ ಹೆಚ್ಚು ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದು ನುಡಿದ ಮೋದಿ, ಸುಮಾರು 11 ಕೋಟಿ ಕೊವಿಡ್ ಲಸಿಕೆಗಳನ್ನು ಕೇಂದ್ರವು ಪಶ್ಚಿಮ ಬಂಗಾಳಕ್ಕೆ ಉಚಿತವಾಗಿ ಒದಗಿಸಿದೆ, 1500 ಕ್ಕೂ ಹೆಚ್ಚು ವೆಂಟಿಲೇಟರ್‌ಗಳು ಮತ್ತು 9000 ಕ್ಕೂ ಹೆಚ್ಚು ಹೊಸ ಆಮ್ಲಜನಕ ಸಿಲಿಂಡರ್‌ಗಳನ್ನು ಸಹ ನೀಡಲಾಗಿದೆ. 49 ಪಿಎಸ್‌ಎ ಹೊಸ ಆಮ್ಲಜನಕ ಘಟಕಗಳು ಸಹ ಕಾರ್ಯನಿರ್ವಹಿಸಲು ಪ್ರಾರಂಭಿಸಿವೆ ಎಂದರು.
ಪಶ್ಚಿಮ ಬಂಗಾಳದಲ್ಲಿ ಈಗ ಉದ್ಘಾಟಿಸಲಾದ ಕ್ಯಾಂಪಸ್‌ ಸುಮಾರು 530 ಕೋಟಿ ರೂ ವೆಚ್ಚದ್ದಾಗಿದ್ದು, ಅದರಲ್ಲಿ ಸುಮಾರು 400 ಕೋಟಿ ರೂಪಾಯಿಗಳನ್ನು ಕೇಂದ್ರವು ಒದಗಿಸಿದೆ. ಈ ಆಸ್ಪತ್ರೆಯು ಕ್ಯಾನ್ಸರ್ ರೋಗನಿರ್ಣಯ, ಹಂತ, ಚಿಕಿತ್ಸೆ ಮತ್ತು ಆರೈಕೆಗಾಗಿ 400 ಹಾಸಿಗೆಗಳ ಸಮಗ್ರ ಕ್ಯಾನ್ಸರ್ ಕೇಂದ್ರವಾಗಿದೆ. ನ್ಯೂಕ್ಲಿಯರ್ ಮೆಡಿಸಿನ್ (ಪಿಇಟಿ), 3.0 ಟೆಸ್ಲಾ ಎಂಆರ್‌ಐ, ಎಂಡೋಸ್ಕೋಪಿ ಸೂಟ್ ಮತ್ತು ರೇಡಿಯೊನ್ಯೂಕ್ಲೈಡ್ ಥೆರಪಿ ಯೂನಿಟ್‌ನಂತಹ ಆಧುನಿಕ ಸೌಲಭ್ಯಗಳು ಸಿಎನ್‌ಸಿಐನ ಹೊಸ ಕ್ಯಾಂಪಸ್‌ನಲ್ಲಿವೆ.
ಪಿಎಂ-ಜೆಎವೈ ಯೋಜನೆ ಅಡಿಯಲ್ಲಿ 2.6 ಕೋಟಿಗೂ ಹೆಚ್ಚು ಕ್ಯಾನ್ಸರ್ ರೋಗಿಗಳು ದೇಶಾದ್ಯಂತ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆಯನ್ನು ಪಡೆದಿದ್ದಾರೆ ಎಂದು ಮೋದಿ ವಿವರಿಸಿದರು.
VIDEO: ಮಂಡ್ಯದಲ್ಲೊಂದು ಅಮಾನವೀಯ ಘಟನೆ- ಎಲ್ಲರೆದುರು ವಿದ್ಯಾರ್ಥಿನಿಯ ಬಟ್ಟೆ ಬಿಚ್ಚಿ ಕೂಡಿಹಾಕಿ ಥಳಿಸಿದ ಶಿಕ್ಷಕಿ!

ಪತ್ನಿಯ ವಾಟ್ಸ್‌ಆ್ಯಪ್‌ ಮೆಸೇಜ್‌ಗಳನ್ನು ನೋಡಿ ಹೇಸಿಗೆ ಹುಟ್ಟಿದೆ- ಅವಳಿಗೆ ಡಿವೋರ್ಸ್‌ ಕೊಡ್ಬೋದಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − 3 =
Remember me
