ಶ್ರೀನಗರ:ಇಂದು ನಸುಕಿನಲ್ಲಿಯೇ ಭಾರತೀಯ ಯೋಧರು ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ.
ಶ್ರೀನಗರದ ಬಟಾಮಲು ಪ್ರದೇಶದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಭಯೋತ್ಪಾದಕರು ಅವಿತಿರುವ ಮಾಹಿತಿ ಪಡೆದ ಪೊಲೀಸರು ಮತ್ತು ಸಿಆರ್​ಎಫ್​ ಯೋಧರು ಉಗ್ರರ ಬೇಟೆ ಮಾಡಿದ್ದಾರೆ.
ಉಗ್ರರ ಅನುಮಾನಾಸ್ಪದ ಓಡಾಟಗಳು ಕಂಡು ಬಂದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ನಸುಕಿನಲ್ಲಿಯೇ ಕಾರ್ಯಾಚರಣೆ ಆರಂಭಿಸಿತ್ತು. ಕಾರ್ಯಾಚರಣೆ ಆರಂಭವಾಗುತ್ತಿದ್ದಂತೆಯೇ ಉಗ್ರರು ಏಕಾಏಕಿ ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಇದನ್ನೂ ಓದಿ:ಗಂಡ-ಮಗನನ್ನು ಬದುಕಿಸಲು ಪ್ರಾಣತೆಗೆದ ಹಾವನ್ನು ತಂದು ಪೂಜಿಸಿದಳು: ಮುಂದೇನಾಯ್ತು ನೋಡಿ…
ಉಗ್ರರ ದಾಳಿಗೆ ದಿಟ್ಟ ಉತ್ತರ ನೀಡುವ ಮೂಲಕ ಮೂವರು ಉಗ್ರರನ್ನು ಹತ್ಯೆ ಮಾಡುವಲ್ಲಿ ಭಾರತೀಯ ಸೇನಾಪಡೆ ಯಶಸ್ವಿಯಾಗಿದೆ. ಗುಂಡಿನ ಚಕಮಕಿ ನಂತರ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಘಟನಾ ಸ್ಥಳದಲ್ಲಿ ಇನ್ನೂ ಹಲವು ಉಗ್ರರು ಅವಿತಿರುವ ಸಾಧ್ಯತೆಯಿದ್ದು, ಭದ್ರತಾ ಪಡೆಗಳಿಂದ ಶೋಧ ಕಾರ್ಯ ಮುಂದುವರೆದಿದೆ ಎಂದು ಸೇನೆಯ ಮೂಲಗಳು ಹೇಳಿವೆ.
ಕಳೆದ ಮೂರು ವರ್ಷಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು 582 ಭಯೋತ್ಪಾದಕರನ್ನು ಹತ್ಯೆ ಮಾಡಿದ್ದು, ಈ ಅವಧಿಯಲ್ಲಿ 46 ಭಯೋತ್ಪಾದಕರನ್ನು ಬಂಧಿಸಲಾಗಿದೆ. 2018ರಿಂದ 2020ರ ಸೆಪ್ಟೆಂಬರ್ 8ರವರೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ 76 ಸೇನಾ ಯೋಧರು ಹತ್ಯೆಯಾಗಿದ್ದಾರೆ. ಇದೇ ಅವಧಿಯಲ್ಲಿ ಉಗ್ರರು ನಡೆಸಿರುವ ದಾಳಿಯಿಂದಾಗಿ 76 ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ ಎಂದು ನಿನ್ನೆ ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವಾಲಯ ಮಾಹಿತಿ ನೀಡಿತ್ತು. ಇದೀಗ ಇಂದು ಮತ್ತೆ ಮೂವರು ಉಗ್ರರು ಹತ್ಯೆಯಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ.
18ರಿಂದ ಬದಲಾಗಿದೆ ಎಟಿಎಂ ವಿತ್​ಡ್ರಾ ರೂಲ್ಸ್​: ಇಲ್ಲಿದೆ ಮಾಹಿತಿ

ಬಾಬ್ರಿ ಕಟ್ಟಡ ಧ್ವಂಸ ತೀರ್ಪು ಸೆ.30ಕ್ಕೆ: ಆಡ್ವಾಣಿ ಸೇರಿ ಎಲ್ಲ ಆರೋಪಿಗಳು ಕೋರ್ಟ್‌ನಲ್ಲಿರಲು ಆದೇಶ

ಮೂರು ವರ್ಷಗಳಲ್ಲಿ 582 ಪಾಕ್​ ಉಗ್ರರ ಹತ್ಯೆ: ರಾಜ್ಯಸಭೆಗೆ ಮಾಹಿತಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:four × 4 =
Remember me
