ಶ್ರೀನಗರ:ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಸೈನಿಕರು ನಡೆಸಿದ ಕದನ ವಿರಾಮ ಉಲ್ಲಂಘನೆಯಲ್ಲಿ ಗಡಿ ಭದ್ರತಾ ಪಡೆ(ಬಿಎಸ್ ಎಫ್) ಸಬ್ ಇನ್ಸ್​ಪೆಕ್ಟರ್ ರಾಕೇಶ್ ದೋವಲ್ ಸೇರಿದಂತೆ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಅಲ್ಲದೇ ಶೆಲ್ ದಾಳಿಯಲ್ಲಿ ಮೂವರು ನಾಗರಿಕರು ಮೃತಪಟ್ಟಿದ್ದಾರೆ. ರಾಕೇಶ್ ದೋವಲ್ ಉತ್ತರಾಖಂಡದ ರಿಷಿಕೇಶ್ ಜಿಲ್ಲೆಯ ಗಂಗನಗರ ನಿವಾಸಿ.
ಈ ವಾರದಲ್ಲಿ ಇದು ಎರಡನೇ ಬಾರಿಗೆ ಪಾಕಿಸ್ತಾನ ಕದನ ವಿರಾಮವನ್ನು ಉಲ್ಲಂಘನೆ ಮಾಡಿದೆ.
ಬಾರಾಮುಲ್ಲಾ ಜಿಲ್ಲೆಯ ಉರಿ ಪ್ರದೇಶದ ಕಮಲ್​ಕೋಟ್ ಸೆಕ್ಟರ್​ನಲ್ಲಿ ಇಬ್ಬರು ನಾಗರಿಕರು ಮೃತಪಟ್ಟಿದ್ದು, ಉರಿಯ ಹಾಜಿ ಪೀರ್​ಸೆಕ್ಟರ್ ನ ಬಾಲ್​ಕೋಟ್ ಪ್ರದೇಶದಲ್ಲಿ ಮಹಿಳೆ ಮೃತಪಟ್ಟಿದ್ದಾರೆ.
ಇದನ್ನೂ ಓದಿ:ಗ್ಯಾಂಗ್​ಸ್ಟರ್​ ವಿಕಾಸ್​ ದುಬೆಗೆ ‘ಆಪ್ತ’ನಾಗಿದ್ದ ಐಪಿಎಸ್​ ಅಧಿಕಾರಿ ಸಸ್ಪೆಂಡ್​
ಈ ಗುಂಡಿನ ಚಕಮಕಿಯಲ್ಲಿ ಭಾರತೀಯ ಯೋಧರು ಸಾಹಸ ಮೆರೆದಿದ್ದಾರೆ. ಅನೇಕ ಪಾಕಿಸ್ತಾನಿ ಬಂಕರ್‌ಗಳನ್ನು ಸಹ ನಾಶಪಡಿಸಲಾಗಿದೆ.ಇದಲ್ಲದೆ ಇಂಧನ ಡಂಪ್‌ಗಳು ಮತ್ತು ಲಾಂಚ್ ಪ್ಯಾಡ್‌ಗಳು ಸಹ ನಾಶವಾಗಿವೆ. ಪಾಕಿಸ್ತಾನದ ಮೂರು ಕಮಾಂಡೋಗಳು ಹಾಗೂ ಐವರು ಸೈನಿಕರನ್ನು ಹೊಡೆದುರುಳಿಸಲಾಗಿದೆ ಎಂದು ಸೇನೆಯ ಮೂಲಗಳು ಹೇಳಿವೆ. 12 ಪಾಕಿಸ್ತಾನಿ ಸೈನಿಕರು ಗಾಯಗೊಂಡಿದ್ದಾರೆ.
ಉರಿಯ ವಿವಿಧ ಸ್ಥಳಗಳಲ್ಲದೆ ಬಂಡಿಪೋರಾ ಜಿಲ್ಲೆಯ ಗುರೆಜ್ ಸೆಕ್ಟರ್ ನ ಇಜ್ಮಾರ್ಗ್ ಮತ್ತು ಕುಪ್ವಾರ ಜಿಲ್ಲೆಯ ಕೆರಾನ್ ಸೆಕ್ಟರ್​ನಲ್ಲಿಯೂ ಕದನ ವಿರಾಮ ಉಲ್ಲಂಘನೆ ಮಾಡಿರುವ ವರದಿಯಾಗಿದೆ.
ಕದನ ವಿರಾಮ ಉಲ್ಲಂಘನೆಯ ಮೂಲಕ ಕೆರಾನ್ ಸೆಕ್ಟರ್​ನ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಒಳನುಸುಳುವಿಕೆ ಯತ್ನವನ್ನು ಸೇನೆ ತಡೆಯಲು ಹೋದಾಗ ಯೋಧರು ಹುತಾತ್ಮರಾಗಿದ್ದಾರೆ.
ಒವೈಸಿ ಎಂಟ್ರಿ: ಮುಸ್ಲಿಂ ಮತದಾರರನ್ನು ಕಳೆದುಕೊಳ್ಳೋ ಟೆನ್ಷನ್​ನಲ್ಲಿ ದೀದಿ!

ರಾಜೀವ್​ಗಾಂಧಿ ಆರೋಗ್ಯ ವಿವಿಯ ಕಾಲೇಜು ತೆರೆಯಲು ಡೇಟ್​ ಫಿಕ್ಸ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 4 =
Remember me
