ಲಖೀಂಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಬಹರೈಚ್​ ಹಾಗೂ ಲಖೀಂಪುರ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕರ್ನಾಟಕದ ಏಳು ಮಂದಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ 9 ಮಂದಿಗೆ ಗಂಭೀರ ಗಾಯಗಳಾಗಿವೆ. ಮೃತಪಟ್ಟವರು ಬೀದರ್​ನ ಶಿವಕುಮಾರ್ (೨೮), ಜಗದಂಬಾ(೫೨), ಮನ್ಮಥ(೩೬), ಅನಿಲ್(೩೦), ಸಂತೋಷ, ಶಶಿಕಲಾ(೩೮), ಸರಸ್ವತಿ (೪೭) ಎಂದು ಗುರುತಿಸಲಾಗಿದೆ.
ಕರ್ನಾಟಕದಿಂದ ಹೊರಟ ಪ್ರವಾಸಿ ಬಸ್​ ಇದಾಗಿತ್ತು. ಇದರಲ್ಲಿ 16 ಮಂದಿ ಪ್ರವಾಸಿಗರು ಇದ್ದರು. ಬಹರೈಚ್​ ಹಾಗೂ ಲಖೀಂಪುರ ಹೆದ್ದಾರಿಯ ಬಳಿ ಬಸ್​ ಟ್ರಕ್‍ಗೆ ಡಿಕ್ಕಿ ಹೊಡೆದೆ. ಘಟನೆಯಲ್ಲಿ ಮೂವರು ಮಹಿಳೆಯರು ಮೃತಪಟ್ಟಿದ್ದಾರೆ.
ಮೋತಿಪುರ್ ಪ್ರದೇಶದ ನಾನಿಹಾ ಮಾರುಕಟ್ಟೆಯಲ್ಲಿ ಎದುರಿನ ಲೇನ್‍ಗೆ ಪ್ರವೇಶಿಸಿದಾಗ ಅಪಘಾತ ಸಂಭವಿಸಿದೆ. ಬಸ್​ ಚಾಲಕ ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟರೆ, ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿರುವುದಾಗಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುಮಾರ್ ತಿಳಿಸಿದ್ದಾರೆ.
ಘಟನೆ ಬಳಿಕ ಟ್ರಕ್ ಚಾಲಕ ಪರಾರಿಯಾಗಿದ್ದಾನೆ. ಪ್ರಕರಣದ ತನಿಖೆ ನಡೆಯುತ್ತಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ.
ಹಿಂದೂ ಹೆಸರು ಹೇಳಿ ಮದ್ವೆಯಾದ: ಸತ್ಯ ತಿಳಿಯುತ್ತಲೇ ವಿಧವೆ ಬಾಳಲ್ಲಿ ಘೋರ ದುರಂತ- ಪಾತಕಿಗೆ ಆಗುತ್ತಾ ಶಿಕ್ಷೆ?

VIDEO: ಹೊರಗಿಟ್ಟಿರೋ ಶೂಸ್​ ಧರಿಸೋ ಮುನ್ನ ಎಚ್ಚರ: ಪ್ರಾಣಕ್ಕೇ ಕುತ್ತಾದೀತು! ತುಮಕೂರಿನ ಶಾಕಿಂಗ್​ ವಿಡಿಯೋ ನೋಡಿ…

ಕಾಂಗ್ರೆಸ್​ ಪಕ್ಷಕ್ಕೆ ‘ಮುಖ್ಯಮಂತ್ರಿ’ ಚಂದ್ರು ಗುಡ್​ ಬೈ: ರಾಜೀನಾಮೆ ಪತ್ರದಲ್ಲಿ ಏನಿದೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 6 =
Remember me
