ಲಖನೌ:ಸರ್ಕಾರಿ ಬಸ್ ಮತ್ತು ಗ್ಯಾಸ್ ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿ ಕನಿಷ್ಠ 12 ಮಂದಿ ಮೃತಪಟ್ಟಿರುವ ಭೀಕರ ಘಟನೆ ಸಂಭಾಲ್ ಜಿಲ್ಲೆಯ ಆಗ್ರಾಮುರ್ದಾಬಾದ್​ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮಧ್ಯಪ್ರದೇಶದ ಅಲಿಘರ್​ಗೆ ಬರುತ್ತಿದ್ದ ಗ್ಯಾಸ್ ಟ್ಯಾಂಕರ್ ಟ್ರಕ್ ಸರ್ಕಾರಿ ಬಸ್‍ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಚಾಲಕನ ದೇಹ ಕ್ಯಾಂಟರ್​ನಲ್ಲಿ ಸಿಕ್ಕಿಹಾಕಿಕೊಂಡಿದ್ದು, ಹೊರಕ್ಕೆ ತೆಗೆಯಲು ಶ್ರಮ ಪಡಬೇಕಾಯಿತು.
ನಸುಕಿನಲ್ಲಿ ಅಧಿಕ ಮಂಜು ಆವರಿಸಿದ್ದು, ರಸ್ತೆಯಲ್ಲಿ ವಾಹನಗಳು ಗೋಚರಿಸದ ಕಾರಣ ಎದುರು ಬದುರಾಗಿ ಈ ಅಪಘಾತ ನಡೆದಿದೆ ಎನ್ನಲಾಗಿದೆ.
ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದ್ದು, ಬಹುತೇಕ ಮಂದಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಪೊಲೀಸ್ ಹಾಗೂ ಜಿಲ್ಲಾಡಳಿತ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದೆ.ಅಪಘಾತದಲ್ಲಿ ಬಸ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಟ್ಯಾಂಕರನ್​ ಮುಂಭಾಗ ಜಖಂ ಆಗಿದೆ.
ಕೋಟಿ ಕೋಟಿ ಟೋಪಿ ಹಾಕಿದ್ದಾನೆ ಈ ಯುವರಾಜ! ನೀವೂ ಮೋಸಹೋಗಿರಬಹುದು, ನೋಡಿಕೊಳ್ಳಿ…

ಮಾದರಿ ಗ್ರಾಮ ಪಂಚಾಯತಿ ಯೋಜನೆಗೆ ಬೇಕಾಗಿದ್ದಾರೆ 510 ಅರ್ಹ ಅಭ್ಯರ್ಥಿಗಳು

ಮೆನೋಪಾಸ್ ನಂತರ ಲೈಂಗಿಕಕ್ರಿಯೆಯಲ್ಲಿ ತೊಂದರೆಯಾದರೆ ಆಯುರ್ವೇದದಲ್ಲಿದೆ ಪರಿಹಾರ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × four =
Remember me
