ಅನಂತಪುರ (ಆಂಧ್ರಪ್ರದೇಶ):ಕಾರು ಮತ್ತು ಲಾರಿ ನಡುವೆ ಭಾನುವಾರ ಮಧ್ಯರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಒಂಬತ್ತು ಮಂದಿ ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಉರವಕೊಂಡದ ಬುಡಗಾವಿಯಲ್ಲಿ ನಡೆದಿದೆ.
ಬಳ್ಳಾರಿ ಮತ್ತು ಅನಂತಪುರ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೃತಪಟ್ಟವರಲ್ಲಿ ಆರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿದ್ದಾರೆ. ಬಳ್ಳಾರಿಯಲ್ಲಿ ನಡೆದ ಬಿಜೆಪಿಯ ಕಾರ್ಯಕಾರಿ ಸಮಿತಿಯ ಸದಸ್ಯ ಕೋರಾ ವೆಂಕಟಪ್ಪ ಅವರ ಮಗಳ ಮದುವೆಯನ್ನು ಮುಗಿಸಿ ಇವರು ವಾಪಸಾಗುತ್ತಿದ್ದರು.
ಮೃತರೆಲ್ಲರೂ ಕುಟುಂಬ ಸದಸ್ಯರು ಮತ್ತು ಸಂಬಂಧಿಕರು ಎಂದು ತಿಳಿದು ಬಂದಿದೆ. ಮೃತಪಟ್ಟವರನ್ನು ಅಶೋಕ್‌, ರಾಧಮ್ಮಾ, ಸರಸ್ವತಿ, ಶಿವಮ್ಮ, ಸುಭದ್ರಮ್ಮ, ಸ್ವಾತಿ ಮತ್ತು ಜಾಹ್ನವಿ ಎಂದು ಗುರುತಿಸಲಾಗಿದೆ. ಉಳಿದವರ ಪತ್ತೆ ಮಾಡಲಾಗುತ್ತಿದೆ.
ಮೃತಪಟ್ಟವರೆಲ್ಲರೂ  ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಲಾರಿ ಅತಿವೇಗದಿಂದ ಬರುತ್ತಿತ್ತು. ಇದರಿಂದ ನಿಯಂತ್ರಣ ಕಳೆದುಕೊಂಡು ಎದುರುಗಡೆಯಿಂದ ಬರುತ್ತಿದ್ದ ಕಾರಿಗೆ ಗುದ್ದಿದ ಪರಿಣಾಮ ಅಪಘಾತ ಸಂಭವಿಸಿದೆ. ಲಾರಿ ಚಾಲಕ ಪರಾರಿಯಾಗಿದ್ದಾನೆ ಎಂದು ಉರವಕೊಂಡ ಸಬ್‌ ಇನ್ಸ್‌ಪೆಕ್ಟರ್‌ ವೆಂಕಟಸ್ವಾಮಿ ಮಾಹಿತಿ ನೀಡಿದ್ದಾರೆ.
ಉಪನ್ಯಾಸಕನ ಹುದ್ದೆ ಕೊಡಿಸ್ತೇನೆಂದು ಯುವಕನ ಬಟ್ಟೆ ಬಿಚ್ಚಿ ಯುವತಿ ಜತೆ ಮಲಗಿಸಿದರು! ಶಿರಸಿಯಲ್ಲೊಂದು ಭಯಾನಕ ಕೃತ್ಯ
ಲತಾ ಅವಿವಾಹಿತರಾಗಿಯೇ ಉಳಿದಿದ್ದೇಕೆ? ಅವರ ಬಾಳಲ್ಲಿ ಬಂದಿದ್ದ ಆ ವ್ಯಕ್ತಿ ಯಾರು? ಗಾನಕೋಗಿಲೆಯ ದುರಂತಮಯ ಬದುಕಿನ ಕಥೆಯಿದು…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 × 4 =
Remember me
