ಪೂರ್ವಾಂಚಲ್ (ಉತ್ತರ ಪ್ರದೇಶ):ಡಬಲ್ ಡೆಕ್ಕರ್ ಬಸ್‌ಗಳು ಡಿಕ್ಕಿಯಾಗಿ, ಎಂಟು ಮಂದಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇನಲ್ಲಿ ನಡೆದಿದೆ. ಈ ಘಟನೆಯಲ್ಲಿ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ.
ಡಬಲ್​ ಡೆಕ್ಕರ್​ ಎರಡೂ ಬಸ್ಸುಗಳು ಬಿಹಾರದಿಂದ ದೆಹಲಿಗೆ ಹೊರಟಿದ್ದವು. ಲೋನಿಕ್ತ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ನರೇಂದ್ರಪುರ ಮದ್ರಹಾ ಗ್ರಾಮದ ಬಳಿ ಡಿಕ್ಕಿ ಸಂಭವಿಸಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಾಯಳುಗಳನ್ನು ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡಿದ್ದಾರೆ. ಮೃತರ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಹೆಚ್ಚಿದೆ ಎಂದಿದ್ದಾರೆ ಪೊಲೀಸರು.
ಬಿಹಾರದ ಸೀತಾಮರ್ಹಿಯಿಂದ ಬರುತ್ತಿದ್ದ ಬಸ್ ನರೇಂದ್ರಪುರ ಮದ್ರಹಾ ಗ್ರಾಮದ ಬಳಿ ನಿಂತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ. ಮೃತರನ್ನು ಗುರುತಿಸುವ ಪ್ರಯತ್ನಗಳು ನಡೆಯುತ್ತಿವೆ, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಲಖನೌದ ಟ್ರೋಮಾ ಸೆಂಟರ್‌ಗೆ ದಾಖಲಿಸಲಾಗಿದೆ ಎಂದು .ಬಾರಾಬಂಕಿಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ (ಎಎಸ್‌ಪಿ) ಮನೋಜ್ ಪಾಂಡೆ ತಿಳಿಸಿದ್ದಾರೆ.
ದುರಂತದಲ್ಲಿ ಮೃತಪಟ್ಟವರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ.ಕುಟುಂಬಸ್ಥರಿಗೆ ಧೈರ್ಯ ಹೇಳಿದ್ದಾರೆ. ತ್ವರಿತ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳು ಭರದಿಂದ ಸಾಗಿವೆ. ಗಾಯಾಳುಗಳಿಗೆ ಸರಿಯಾದ ಚಿಕಿತ್ಸೆಗಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗಿದೆ ಎಂದಿದ್ದಾರೆ.(ಏಜೆನ್ಸೀಸ್​)
ಪುಷ್ಪಾ ಸಿನಿಮಾ ನೋಡಿ ಪ್ರೇರೇಪಣೆ: ರಾಜ್ಯದ ಯುವಕರು ಬಾಯಿಬಿಟ್ಟ ಸತ್ಯ ಕೇಳಿ ಪೊಲೀಸರೂ ಶಾಕ್​!

VIDEO: ಇಂದು ‘ವಿಶ್ವನಾಥೋತ್ಸವ’! ಮೂರು ಟನ್​ ಮಟನ್​, ಐದು ಟನ್​ ಚಿಕನ್​, ಲಕ್ಷ ಲಕ್ಷ ಮೊಟ್ಟೆ….

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + nine =
Remember me
