ಹೈದರಾಬಾದ್‌:ದರ್ಗಾಗೆ ಪ್ರಯಾಣಿಸುತ್ತಿದ್ದವರು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಕಾಮರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. ಇಬ್ಬರು ಮಕ್ಕಳು, ಇಬ್ಬರು ಮಹಿಳೆಯರು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದು, ಅನೇಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.ಇವರು ಪ್ರಯಾಣಿಸುತ್ತಿದ್ದ ಟೊಯೊಟಾ ಕ್ವಾಲಿಸ್‌ ನಿಂತಿದ್ದ ಲಾರಿಗೆ ಗುದ್ದಿದ ಪರಿಣಾಮ ಈ ಘಟನೆ ಸಂಭವಿಸಿದೆ. ಎರಡು ಕುಟುಂಬದ 12 ಮಂದಿ ಮಹಾರಾಷ್ಟ್ರದ ನಾಂದೇಡ್‍ನಲ್ಲಿರುವ ಹಜರತ್ ಶಾ ಕಾಮಿಲ್ ದಾದ್ ದರ್ಗಾಗೆ ಹೋಗುತ್ತಿದ್ದ ವೇಳೆ ಈ ಅವಘಡ ನಡೆದಿದೆ. ಮೃತಪಟ್ಟವರು ಮತ್ತು ಗಾಯಾಳುಗಳು ಹೈದರಾಬಾದ್‍ನ ಮಲಕ್‍ಪೇಟ್ ಮತ್ತು ಚಾದರ್‍ಘಾಟ್‍ನ ನಿವಾಸಿಗಳು ಎಂದು ಗುರುತಿಸಲಾಗಿದೆ.ಟೊಯೊಟಾ ಕ್ವಾಲಿಸ್ ಚಾಲಕನ ಅತಿ ವೇಗದ ಚಾಲನೆಯಿಂದ ಈ ಅನಾಹುತ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 161ರಲ್ಲಿ ವೇಗವಾಗಿ ಬಂದ ಟೊಯೊಟಾ ಕ್ವಾಲಿಸ್ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದು, ಇದರ ರಭಸಕ್ಕೆ ಕಾರಿನ ಅರ್ಧ ಭಾಗ ಸಂಪೂರ್ಣವಾಗಿ ಜಖಂಗೊಂಡಿರುವುದಾಗಿ ಪೊಲೀಸರು ಹೇಳಿದ್ದಾರೆ.ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಅಪಘಾತಕ್ಕೀಡಾಗಿರುವ ಸಂಬಂಧಿಕರಿಗಾಗಿ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಸ್ಥಳಕ್ಕೆ ಭೇಟಿ ನೀಡಿದ ಬಾನ್ಸವಾಡ ಡಿಎಸ್‍ಪಿ ಜೈಪಾಲ್ ರೆಡ್ಡಿ ಮಾಹಿತಿ ನೀಡಿದ್ದಾರೆ.
ದೂರು ತಗೋಳಿ ಎಂದ್ರೆ ‘ಬಳಿಗೆ ಬಾರೆ’ ಅಂತಿದ್ದ ಹಾವೇರಿ ಪೊಲೀಸ್‌! ವಿಡಿಯೋಕಾಲ್‌ನಲ್ಲಿ ಕೈ, ಕಣ್‌ಸನ್ನೆ ಮಾಡಿ ಸಿಕ್ಕಿಬಿದ್ದ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 5 =
Remember me
